ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
Twitter
Facebook
LinkedIn
WhatsApp

ಮಡಿಕೇರಿ: ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapet) ಪಟ್ಟಣದಲ್ಲಿ ನಡೆದಿದೆ.
ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿ ಖಾಸಗಿ ಉದ್ಯೋಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.