ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧನ್ಯವಾದಗಳು ದೇವರೇ ನಾನು ಜೀವಂತವಾಗಿದ್ದೇನೆ; 63 ದೇಶಗಳನ್ನು ಸುತ್ತಾಡಿ ಭಾರತದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಆಘಾತವನ್ನು ಹಂಚಿಕೊಂಡ 28 ಹರೆಯದ ಸ್ಪ್ಯಾನಿಷ್ ಮಹಿಳೆ..!

Twitter
Facebook
LinkedIn
WhatsApp
ಧನ್ಯವಾದಗಳು ದೇವರೇ ನಾನು ಜೀವಂತವಾಗಿದ್ದೇನೆ;

ಶುಕ್ರವಾರ ತಡರಾತ್ರಿ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ 35 ವರ್ಷದ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು , ಆಕೆಯ ಪತಿಯನ್ನು ಏಳು ಅತ್ಯಾಚಾರಿಗಳೂ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಾರ್ಖಂಡ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.

ಈ ಘಟನೆಯು ಹನ್ಸ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್ ಪ್ರದೇಶದಲ್ಲಿ ಸಂಭವಿಸಿದ್ದು, ಅತ್ಯಾಚಾರಕ್ಕೆ ಒಳಗಾದ ವಿದೇಶ ಮಹಿಳೆ ಹಾಗೂ ಹಲ್ಲೆಗೊಳಗಾದ ಪತಿ ಇಬ್ಬರೂ Instagram ಮೂಲಕ ತಮಗಾದ ಅನ್ಯಾಯವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗಿದೆ.

ವಿಡಿಯೋದಲ್ಲಿ, ಧನ್ಯವಾದಗಳು ದೇವರೇ ನಾವು ಜೀವಂತಾಗಿದ್ದೇವೆ. ನಾವು ಯಾರಿಂದಲೂ ಏನನ್ನು ಬಯಸುವುದಿಲ್ಲ ಆದರೆ ಈತರದ ಕೃತ್ಯ ಸಂಭವಿಸಿದೆ. ಏಳು ಪುರುಷರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ನಾವು ಪೊಲೀಸರೊಂದಿಗೆ ಆಸ್ಪತ್ರೆಯಲ್ಲಿದ್ದೇವೆ. ಇದೆಲ್ಲವೂ ಭಾರತದಲ್ಲಿ ನಡೆದಿದೆ ಎಂದು ಹೇಳುತ್ತ ಬೇಸರ ವ್ಯಕ್ತಪಡಿಸಿದ್ದಾರೆ.

ಈ ದಂಪತಿ ಈಗಾಗಲೇ 1.53 ಲಕ್ಷ ಕಿ.ಮೀದೊಂದಿಗೆ 63 ದೇಶಗಳನ್ನು ಸುತ್ತಾಡಿದ್ದಾರೆ. ಆದರೆ ಭಾರತದಲ್ಲಿ ಅದು ವಿ ಕೆಟ್ಟ ಅನುಭವವನ್ನು ತಮ್ಮ ವಿಡಿಯೋದಲ್ಲಿ ಅವರು ಆಡಳಿತೋಡಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಪೊಲೀಸ್ ಗಸ್ತು ವಾಹನವನ್ನು ನಿಲ್ಲಿಸಿ ಮಹಿಳೆ ಸಹಾಯಕ್ಕಾಗಿ ಮನವಿ ಮಾಡಿದ್ದಾಳೆ. ಆಕೆಯ ಗಾಯಗಳು ಮತ್ತು ಆಕೆಯ ಗಂಡನ ಸ್ಥಿತಿಯನ್ನು ನೋಡಿದ ಪೊಲೀಸರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ.

ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ಪ್ಯಾನಿಷ್ ದಂಪತಿ ಮೇಲೂ ಹಲ್ಲೆ ನಡೆಸಿ, ಆರೋಪಿಗಳು ₹10 ಸಾವಿರ ದೋಚಿದ್ದಾರೆ ಎನ್ನಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ದುಮ್ಕಾ ಪೊಲೀಸ್ ವರಿಷ್ಠಾಧಿಕಾರಿ ಖೇರ್ವಾರ್ ಸೋಮವಾರ ಹೇಳಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಕೋರ್ಟ್

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಕೋರ್ಟ್

ದುಮ್ಕಾದಲ್ಲಿ ಸ್ಪ್ಯಾನಿಷ್ ಮಹಿಳೆಯ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಜಾರ್ಖಂಡ್ ಹೈಕೋರ್ಟ್ ಸೋಮವಾರ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಘಟನೆಯ ಬಗ್ಗೆ ಗುರುವಾರದೊಳಗೆ ಫೆ.7ರ ಒಳಗೆ ಸಮಗ್ರ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದೆ.

ಮಾಧ್ಯಮ ವರದಿಗಳನ್ನು ಪರಿಗಣಿಸಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ನವನೀತ್ ಕುಮಾರ್ ಅವರು, ಡುಮ್ಕಾ ಎಸ್ಪಿ ಜೊತೆಗೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಇದೇ ವೇಳೆ ಸಂತ್ರಸ್ತರಿಗೆ ₹ 10 ಲಕ್ಷ ಪರಿಹಾರ ನೀಡಲು ಜಿಲ್ಲಾ ನ್ಯಾಯಾಧೀಶರ ಅಧ್ಯಕ್ಷತೆಯ ಸಂತ್ರಸ್ತ ಪರಿಹಾರ ಸಮಿತಿ ಅನುಮೋದನೆ ನೀಡಿದೆ . ಈ ಮೊತ್ತವನ್ನು ಯುರೋಗಳಾಗಿ ಪರಿವರ್ತಿಸಿ ಆಕೆಯ ಪತಿಯ ಖಾತೆಗೆ ವರ್ಗಾಯಿಸಲಾಗುವುದು ಎಂದು ದುಮ್ಕಾ ಜಿಲ್ಲಾಧಿಕಾರಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಬ್ರೆಜಿಲ್ ಪೌರತ್ವವನ್ನು ಹೊಂದಿರುವ ಸ್ಪ್ಯಾನಿಷ್ ಮಹಿಳೆ, ಪಶ್ಚಿಮ ಬಂಗಾಳದಿಂದ ನೇಪಾಳಕ್ಕೆ ತೆರಳುತ್ತಿದ್ದಾಗ ಹನ್ಸ್‌ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾಳೆ. ಮಹಿಳೆ ತನ್ನ ಪತಿಯೊಂದಿಗೆ ಭಾರತದಾದ್ಯಂತ ಬೈಕ್ ಪ್ರವಾಸದಲ್ಲಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist