ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ

Twitter
Facebook
LinkedIn
WhatsApp
Hardik Pandya - Natasa: Hardik Pandya, Natasha announced divorce

ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಗಾಳಿ ಸುದ್ದಿ ನಿಜವಾಗಿದೆ. ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಪರಸ್ಪರ ವಿಚ್ಛೇದನ ಪಡೆದಿದ್ದು, ಪಾಂದ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Hardik Pandya – Natasa: ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾ ಸ್ಟಾಂಕೋವಿಕ್‌ ಜೊತೆಗಿನ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಗುರುವಾರ ಗುಡ್ ಬೈ ಹೇಳಿದ್ದಾರೆ.

ಬಾಲಿವುಡ್ ಆಕ್ಟ್ರೇಸ್ ನತಾಶಾ ಸ್ಟಾಂಕೋವಿಕ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಹಾರ್ಡಿಕ್ ಪಾಂಡ್ಯ ಅವರಿಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ವಿಚ್ಛೇದನ ವದಂತಿಗೆ ಇಂದು ಅಧಿಕೃತ ತೆರೆಬಿದ್ದಿದೆ. ನಾವಿಬ್ಬರು ಪರಸ್ಪರ ಬೇರೆ ಬೇರೆಯಾಗಿರುವುದಾಗಿ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ಹಲವು ದಿನಗಳಿಂದ ಕೇಳಿಬರುತ್ತಿದ್ದ ಸುದ್ದಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ವಾಸ್ತವವಾಗಿ 2024 ರ ಐಪಿಎಲ್ ಆರಂಭವಾದಾಗಿನಿಂದಲೂ ಈ ಇಬ್ಬರು ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.

ಟಿ20 ವಿಶ್ವಕಪ್ ವೇಳೆಯೂ ನತಾಶಾ ಸುಳಿವಿರಲಿಲ್ಲ. ಇದೆಲ್ಲದರ ಜೊತೆಗೆ ಅನಂತ್ ಅಂಬಾನಿ ಮದುವೆಯಲ್ಲೂ ಹಾರ್ದಿಕ್ ಏಕಾಂಗಿಯಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಇಬ್ಬರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿರುವ ಸುದ್ದಿಗೆ ಪುಷ್ಠಿ ಸಿಕ್ಕಿತ್ತು. ಇದೀಗ ಆ ವದಂತಿಗೆ ಅಂತ್ಯ ಹಾಡುವ ಕೆಲಸವನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ನಾಲ್ಕು ವರ್ಷಗಳ ಜೊತೆ ಪಯಣ ಇಂದು ಅಂತ್ಯಗೊಂಡಿದೆ.  ವೈವಾಹಿಕ ಬದುಕಿನಲ್ಲಿ ಯಾವುದೇ ಬಿರುಕು ಬರದಂತೆ ತಡೆಯಲು ಸಾಕಷ್ಟು ಪ್ರಯತ್ನಪಟ್ಟೆವು. ಆದರೆ ಅದು ಸಾಧ್ಯವಾಗದಿದ್ದಾಗ ಪರಸ್ಪರ ಒಪ್ಪಿಗೆಯೊಂದಿಗೆ ಬೇರ್ಪಡುತ್ತಿದ್ದೇವೆ. ಇದು ಕಠಿಣ ನಿರ್ಧಾರವಾಗಿದ್ದು, ನಮ್ಮ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಈ ದುಃಖದ ಸಮಯದಲ್ಲಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಹಾರ್ದಿಕ್ ಪಾಂಡ್ಯ ಅಭಿಮಾನಿಗಳು ಮತ್ತು ಜನರಿಗೆ ಮನವಿ ಮಾಡಿದ್ದಾರೆ.

ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಮೇ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಲಾಕ್‌ಡೌನ್ ಸಮಯದಲ್ಲಿ ಇಬ್ಬರೂ ಕೋರ್ಟ್ ಮದುವೆ ಮಾಡಿಕೊಂಡಿದ್ದರು. ಅದೇ ವರ್ಷ ಅಂದರೆ ಜುಲೈ 2020 ರಲ್ಲಿ ಈ ದಂಪತಿಗಳಿಗೆ ಗಂಡು ಮಗು ಜನಿಸಿತ್ತು. ಆ ಬಳಿಕ ಮಗನ ಎದುರಿಗೆ ಈ ಇಬ್ಬರು 2023 ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ಮತ್ತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ಈ ದಂಪತಿಗಳು ತಮ್ಮ 4 ವರ್ಷದ ಜೊತೆ ಪಯಣಕ್ಕೆ ಅಂತ್ಯ ಹಾಡಿದ್ದಾರೆ.

ನತಾಶಾ ಮತ್ತು ಹಾರ್ದಿಕ್ ಪರಸ್ಪರ ಬೇರೆಯಾಗಿರುವುದರಿಂದ ಅವರ ಮಗ ಅಗಸ್ತ್ಯ ಯಾರ ಪೋಷಣೆಯಲ್ಲಿ ಬೆಳೆಯಲ್ಲಿದ್ದಾನೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ? ಇದಕ್ಕೆ ಹಾರ್ದಿಕ್ ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ಉತ್ತರ ನೀಡಿದ್ದು, ‘ತಾನು ಮತ್ತು ನತಾಶಾ ಬೇರ್ಪಟ್ಟರೂ ಒಟ್ಟಿಗೆ ಅಗಸ್ತ್ಯನನ್ನು ಬೆಳೆಸುತ್ತೇವೆ ಎಂದು ಹಾರ್ದಿಕ್ ಹೇಳಿದ್ದಾರೆ. ಪಾಂಡ್ಯರಿಂದ ಅಧಿಕೃತವಾಗಿ ವಿಚ್ಛೇದನ ಪಡೆದ ನಂತರ, ನತಾಶಾ ತನ್ನ ದೇಶವಾದ ಸರ್ಬಿಯಾಕ್ಕೆ ಮರಳಿದ್ದಾರೆ. ಹಾರ್ದಿಕ್ ಪುತ್ರ ಅಗಸ್ತ್ಯ ಕೂಡ ತಾಯಿಯೊಂದಿಗೆ ದೇಶ ತೊರೆದಿದ್ದಾರೆ.

ಹೇಳಿಕೆ ಬಿಡುಗಡೆಯಾದ ತಕ್ಷಣ, ನಟಾಸಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಉಪನಾಮದಿಂದ ಪಾಂಡ್ಯನನ್ನು ಮೊದಲು ತೆಗೆದುಹಾಕಿದಾಗ ಸಾಮಾಜಿಕ ಮಾಧ್ಯಮದಲ್ಲಿ ಹೊಸ ದ್ವೇಷವನ್ನು ಪಡೆದರು. "ನಂಬಲು ಕಷ್ಟ" ಎಂದು ಒಬ್ಬರು ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದರೆ, ಮತ್ತೊಬ್ಬರು ಬರೆದರು, "ಇತ್ನೆ ಅಚ್ಚೆ ಇನ್ಸಾನ್ ಕೋ ಪೆಹಚಾನ್ ನ್ಹಿ ಪಾಯಿ. (ಅವನು ಎಷ್ಟು ಒಳ್ಳೆಯವನು ಎಂದು ಅವಳು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ)
ಹಾರ್ದಿಕ್ ಪಾಂಡ್ಯ ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಮುಖ ಆಸ್ತಿಯಾಗಿದ್ದಾರೆ,  ನತಾಸಾ ಸ್ಟಾಂಕೋವಿಕ್ ಅವರು ಚಲನಚಿತ್ರ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. 2020 ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ದಂಪತಿಗಳಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗ ಇದ್ಧಾರೆ  ಮತ್ತು ಭಾರತೀಯ ಕ್ರೀಡೆ ಮತ್ತು ಮನರಂಜನಾ ಭೂದೃಶ್ಯದಲ್ಲಿ ಪ್ರಮುಖ ಸೆಲೆಬ್ರಿಟಿ ಜೋಡಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist