ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Haryana: ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ, ಇಬ್ಬರು ಸಾವು - ಗುರ್ಗಾಂವ್, ಫರಿದಾಬಾದ್, ಪಲ್ವಾಲ್‌ನಲ್ಲಿ ಶಾಲೆಗಳಿಗೆ ಇಂದು ರಜೆ

Twitter
Facebook
LinkedIn
WhatsApp
Haryana: Two killed in stone pelting on Vishwa Hindu Parishad procession

Haryana (ಚಂಡೀಗಢ): ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ. ಗುರ್ಗಾಂವ್, ಫರಿದಾಬಾದ್, ಪಲ್ವಾಲ್‌ನಲ್ಲಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ.

ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ