ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಾಸನ: ಚಿಕ್ಕ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಆದ ಹಾಸನದ ಚಾರ್ವಿ

Twitter
Facebook
LinkedIn
WhatsApp
ಹಾಸನ: ಚಿಕ್ಕ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಆದ ಹಾಸನದ ಚಾರ್ವಿ

ಹಾಸನ ಮೂಲದ ಕು. ಚಾರ್ವಿ ಎ. ಅವರು 8 ವರ್ಷದೊಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ (Under-8 World Chess Championship) ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ “ವಿಶ್ವ ಚೆಸ್ ಚಾಂಪಿಯನ್” ಪದಕ ಗೆದ್ದಿದ್ದಾರೆ. ಅವರು ಜಾರ್ಜಿಯಾದ ಬಟುಮಿಯಲ್ಲಿ ನಡೆದ ಪ್ರತಿಷ್ಠಿತ “2022 ಚಾಂಪಿಯನ್ ಶಿಪ್” ನಲ್ಲಿ ಮೊದಲ ಸ್ಥಾನದಲ್ಲಿ ಗೆದ್ದು ಜಾಗತಿಕ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

ಕು. ಚಾರ್ವಿ ಎ. ಅವರು , ಈ ಹಿಂದೆ, ಶ್ರೀಲಂಕಾದಲ್ಲಿ ನಡೆದ 2022 ರ ಚಾಂಪಿಯನ್​ಶಿಪ್​ನಲ್ಲಿ ಅಂಡರ್-8 ಕಾಮನ್ವೆಲ್ತ್ ಚೆಸ್ ಚಾಂಪಿಯನ್ ಪ್ರಶಸ್ತಿಯನ್ನು ಸಹ ಗೆದ್ದು ಬೀಗಿದ್ದರು. 2022 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಏಷ್ಯನ್ ಯೂತ್ ಚೆಸ್ ಚಾಂಪಿಯನ್​ಶಿಪ್​ನಲ್ಲಿ ಐದು ಚಿನ್ನದ ಪದಕಗಳನ್ನು ಮತ್ತು ಒಂದು ಬೆಳ್ಳಿಯನ್ನು ಗೆದ್ದಿದ್ದಾರೆ.

2021 ಮತ್ತು 2022 ರಲ್ಲಿ ನಡೆದ ವಿವಿಧ ಚಾಂಪಿಯನ್​ಶಿಪ್​ಗಳಲ್ಲಿನ ಅಂಡರ್-7, ಅಂಡರ್-8, ಮತ್ತು ಅಂಡರ್-10 ರಾಷ್ಟ್ರೀಯ ಚೆಸ್ ಚಾಂಪಿಯನ್ ಆಗಿ ಅವರು ಹೊರಹೊಮ್ಮಿದ್ದಲ್ಲದೆ, ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ತಮ್ಮ ಪ್ರಾಬಲ್ಯವನ್ನು ಸಣ್ಣ ಪ್ರಾಯದಲ್ಲೇ ಸಾಬೀತುಪಡಿಸಿದ್ದಾರೆ.

ಚಾರ್ವಿ ಅವರು ಪ್ರಸ್ತುತ ಒಟ್ಟು ನಾಲ್ಕು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಮತ್ತು ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಗಮನಾರ್ಹ ಸಾಧನೆಯಾಗಿದೆ. 2022 ರಲ್ಲಿ, ಅವರು ಆರು ಪ್ರಶಸ್ತಿಗಳನ್ನು ಗೆದ್ದಿದ್ದಲ್ಲದೆ, ಕ್ರೀಡಾ ಜಗತ್ತಿನಲ್ಲಿ ದಾಖಲೆಯನ್ನು ಸ್ಥಾಪಿಸಿದರು. ಇದಲ್ಲದೆ, ಅವರು ಪ್ರಸ್ತುತ ಅಂಡರ್-8 ಮತ್ತು ಅಂಡರ್-10 ನ ಬಾಲಕಿಯರ ವಿಭಾಗದಲ್ಲಿ ಭಾರತದ ನಂ. 1 ಶ್ರೇಯಾಂಕದ ಚೆಸ್ ಆಟಗಾರ್ತಿಯಾಗಿದ್ದಾರೆ.

 ಇಶಾನ್ ಕಿಶನ್ ಔಟ್: ಟೆಸ್ಟ್ ಕ್ರಿಕೆಟ್​ಗೂ ಕಾಲಿಟ್ಟ ರಿಂಕು ಸಿಂಗ್: ಬಿಸಿಸಿಐಯಿಂದ ಶಾಕಿಂಗ್ ತಂಡ ಪ್ರಕಟ

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದೆ. ಈ ಬಾರಿ ಉಭಯ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿರುವ ಕಾರಣ ಸರಣಿ ಕುತೂಹಲ ಕೆರಳಿಸಿದೆ. ಇಂಗ್ಲೆಂಡ್ ತಂಡ ಸರಣಿಗಾಗಿ ಭಾರತಕ್ಕೆ ಆಗಮಿಸಲಿದ್ದು, ಟೀಮ್ ಇಂಡಿಯಾ ಕೂಡ ಶೀಘ್ರದಲ್ಲೇ ತನ್ನ ತರಬೇತಿ ಶಿಬಿರವನ್ನು ಪ್ರಾರಂಭಿಸಲಿದೆ. ಇವೆಲ್ಲದರ ನಡುವೆ ರಿಂಕು ಸಿಂಗ್ ಕೂಡ ಆಂಗ್ಲ ತಂಡದ ವಿರುದ್ಧ ಆಡಲಿದ್ದಾರೆ. ಬಿಸಿಸಿಐ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯಕ್ಕೆ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಇಶಾನ್ ಕಿಶನ್​ರನ್ನು ಹೊರಗಿಟ್ಟು, ರಿಂಕುಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ಈಗಾಗಲೇ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ನಡುವೆ ಅನಧಿಕೃತ ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಿದೆ. ಮೊದಲ ಪಂದ್ಯ ಜನವರಿ 17 ರಂದು ಅಹಮದಾಬಾದ್‌ನಲ್ಲಿ ಶುರುವಾಯಿತು. ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ನಡೆಯಬೇಕಿದ್ದು, ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ.

ಬಿಸಿಸಿಐನ ಪುರುಷರ ಹಿರಿಯ ಆಯ್ಕೆ ಸಮಿತಿಯು ಜನವರಿ 19 ಶುಕ್ರವಾರದಂದು ಸರಣಿಯ ಎರಡನೇ ಮತ್ತು ಮೂರನೇ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಈ ಎರಡೂ ಪಂದ್ಯಗಳಲ್ಲಿಯೂ ತಂಡದ ನಾಯಕತ್ವ ಅಭಿಮನ್ಯು ಈಶ್ವರನ್​ಗೆ ನೀಡಲಾಗಿದೆ. ಆದರೆ ಕೆಲವು ಆಟಗಾರರು ಈ ಸರಣಿಗೆ ಪ್ರವೇಶಿಸಿದ್ದಾರೆ. ಇದರಲ್ಲಿ ಅತ್ಯಂತ ಜನಪ್ರಿಯ ಹೆಸರು ರಿಂಕು ಸಿಂಗ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist