ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಚ್​ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ; ಸವಾರನ ವಿರುದ್ಧ ದೂರು ದಾಖಲು!

Twitter
Facebook
LinkedIn
WhatsApp
ಹೆಚ್​ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ; ಸವಾರನ ವಿರುದ್ಧ ದೂರು ದಾಖಲು!

ಮೈಸೂರು, (ಡಿಸೆಂಬರ್ 04): ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭವಾನಿ ರೇವಣ್ಣ (Bhavani Revanna) ಅವರ ಕಾರಿಗೆ (Car) ಬೈಕ್‌ (Bike) ಡಿಕ್ಕಿ ಹೊಡೆದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಸುಮಾರು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್ಫೇರ್​ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದು, ಇದೀಗ ಈ ದೃಶ್ಯದ ವೀಡಿಯೋ ಫುಲ್ ವೈರಲ್‌ ಆಗಿದೆ.

ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟು ದೂರದಿಂದ ಟೈರ್ ಉಜ್ಜಿಕೊಂಡು ಕಂಟ್ರೋಲ್‌ ಮಾಡಿದ್ದೀವಿ. ಬೈಕ್ ಓಡ್ಸೋಕೆ ಇತಿಮಿತಿ ಇಲ್ವಾ? ನಿನಗೆ ರೈಟ್ ಸೈಡ್ ಬರೋಕೆ ರೂಲ್ಸ್ ಎಲ್ಲಿದೆ? ಲೆಫ್ಟ್ ಸೈಡ್ ಬರಬೇಕು ನೀನು ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇನ್ನು ಈ ಸಂಬಂಧ ಭವಾನಿ ರೇವಣ್ಣ ಕಾರು ಚಾಲಕ ಮಂಜುನಾಥ್‌ ಅವರು ಅವರು ಬೈಕ್​ ಸವಾರ ಶಿವಣ್ಣ ಎನ್ನುವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲೇನಿದೆ?

01/12/2023ರಂದು 12.45ರ ಸುಮಾರಿಗೆ ಕೆಲಸ ನಿಮಿತ್ತ ಸಾಲಿಗ್ರಾಮದ ಪ್ರಕಾಶ್ ಮನೆಗೆ ಹೋಗಿದ್ದೆ. ವಾಪಸ್ಸು ಹೊಳೆನರಸೀಪುರಕ್ಕೆ ಹೊರಟಿದ್ದೆ. ಆಗ ರಾಂಪುರ ಜಂಕ್ಷನ್ ಬಳಿ ಎದರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಅಡ್ಡ ದಿಡ್ಡಿಯಾಗಿ ಬಂದು ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಆದರೆ ಆತನಿಗೆ ಯಾವುದೇ ಗಾಯವಾಗಿಲ್ಲ. ಇನ್ನು ಕಾರಿನ ಬಂಪರ್ ಬ್ಯಾನೆಟ್, ನಂಬರ್ ಪ್ಲೇಟ್ ಮುಂಭಾಗದ ಬಿಡಿ ಭಾಗಗಳು ಜಖಂ ಆಗಿವೆ. ಹೀಗಾಗಿ ಶಿವಣ್ಣ ವಿರುದ್ದ ಕಾನೂನು ಕ್ರಮ‌ಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಭವಾನಿ ರೇವಣ್ಣ ಅವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮನುಷ್ಯನ ಪ್ರಾಣಕ್ಕಿಂತ ತಮ್ಮ ಕಾರಿಗೆ ಆಗಿರುವ ಹಾನಿಯೇ ಹೆಚ್ಚಾಯ್ತಾ? ಅವರಿಂದಲೇ ಆಯ್ಕೆಯಾಗುವ ನಿಮ್ಮ ಈ ವರ್ತನೆ ಸರಿ ಅಲ್ಲ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವು

ಉತ್ತರ ಕನ್ನಡ, ಡಿ.03: ಗೋಕರ್ಣ(Gokarna) ಪ್ರವಾಸಕ್ಕೆ ಬಂದಿದ್ದ ಐವರು ಸ್ನೇಹಿತರ ಪೈಕಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ (Kalaburagi) ಮೂಲದ ಆಕಾಶ ಮತ್ತು ಅಭಿಷೇಕ ಮೃತರು. ಬೀಚ್​ನಲ್ಲಿ ಯಾಂತ್ರಿಕ ಬೋಟ್ ಓಡಿಸುತ್ತಿರುವಾಗ ಅಲೆಗಳ ಜೋರಾದ ರಭಸಕ್ಕೆ ಸಮುದ್ರದಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಈ ಘಟನೆ ಮರೆಮಾಚುವ ಮುನ್ನವೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಯುವಕ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ 20 ವರ್ಷದ ಯುವಕನೊಬ್ಬ ಮೃತನಾಗಿದ್ದಾನೆ. ಮಹಮ್ಮದ್ ಖುರೇಶಿ(20) ಸಾವನ್ನಪ್ಪಿರುವ ಯುವಕ. ಲ್ಯಾಂಗ್ ಪೋರ್ಡ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಖುರೇಷಿ, ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ಲಾರಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆ ಅಶೋಕನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist