HD Kumaraswami ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳು ಸೇವೆ!
ಬೀದರ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಅನಾರೋಗ್ಯದಿಂದ (Health) ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆಯವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯೊಬ್ಬರು ಉರುಳು ಸೇವೆ ಮಾಡಿದ್ದಾರೆ.
ಗಡಿ ಜಿಲ್ಲೆ ಬೀದರ್ (Bidar) ನ ಅಭಿಮಾನಿ, ಬಸವಕಲ್ಯಾಣ ತಾಲೂಕಿನ ಜೆಡಿಎಸ್ (JDS) ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಈ ಸೇವೆಯನ್ನು ಕೈಗೊಂಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸಾನಿಧ್ಯದಲ್ಲಿ ಕುಮಾರಸ್ವಾಮಿಯ ಫೋಟೋ ಜೊತೆ ಉರುಳು ಸೇವೆ ಮಾಡಿದ್ದಾರೆ.
ಹೆಚ್‍ಡಿಕೆ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆ ಮಾಡಲಿ ಎಂದು ಉರುಳು ಸೇವೆ ಬಳಿಕ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ಶಕ್ತಿ ಯೋಜನೆಯನ್ನು ಪ್ರಶ್ನಿಸಿದವರಿಗೆ ಹೈಕೋರ್ಟ್ ತರಾಟೆ
ಅರ್ಜಿ ವಿಚಾರಣೆ ವೇಳೆ ಸಾಕಷ್ಟು ಪ್ರಶ್ನೆಗಳನ್ನು ಅರ್ಜಿದಾರರಿಗೆ ಕೇಳಿದೆ. ಶಕ್ತಿ ಯೋಜನೆಯ ಬಗ್ಗೆ ಅಧ್ಯಯನ ಮಾಡಿ ಅರ್ಜಿ ಸಲ್ಲಿಸಿದ್ದೀರಾ…? ಯೋಜನೆ ಆರ್ಥಿಕ ದರ್ಬಲ ವರ್ಗಕ್ಕೆ ಸೌಲಭ್ಯ ನೀಡಿದೆ ಅಲ್ವಾ…? ಶಕ್ತಿ ಯೋಜನೆ ಜಾರಿಗೆ ಮುನ್ನ ಸಂಚಾರ ಸುಗಮವಾಗಿತ್ತಾ? ಈ ಯೋಜನೆ ಬಸ್ ನಲ್ಲಿ ದಟ್ಟಣೆ ಉಂಟಾಗಿದೆಯೇ? ಎಲ್ಲೆಲ್ಲಿ ಎಂದು ಪ್ರಶ್ನಿಸಿದೆ.
ಯಾವ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಇದೆ? ಸಾರ್ವಜನಿಕ ಸಾರಿಗೆಯಲ್ಲಿ ಇಷ್ಟೇ ಜನ ಪ್ರಯಾಣಿಸಬೇಕು ಎಂದು ರೂಲ್ಸ್ ಇದ್ಯಾ? ಮುಂಬೈ ಲೋಕಲ್ ರೈಲುಗಳ ದಟ್ಟಣೆಯ ಬಗ್ಗೆ ನಿಮಗೆ ಅರಿವಿದಿದ್ದಿದ್ರೆ ಅರ್ಜಿ ಸಲ್ಲಿಕೆ ಮಾಡುತ್ತಿರಲಿಲ್ಲ. ಅಧ್ಯಯನ ಮಾಡದೇ ಅರ್ಜಿ ಸಲ್ಲಿಸಿದ್ದೀರಿ ಹೀಗೆ ಹಲವು ಪ್ರಶ್ನೆಗಳನ್ನು ಮಾಡಿ ಅರ್ಜಿಯನ್ನು ಹಿಂಪಡೆಯಲು ನಿಮಗೆ ಅನುಮತಿ ನೀಡ್ತೀನಿ ಅಂತ ಹೈಕೋರ್ಟ್ ಅವಕಾಶವನ್ನು ನೀಡಿದೆ.