ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆಗೆ ಟಿಕೆಟ್ ದೊರೆಯದ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಆರೋಗ್ಯ ಸಚಿವ ಹರ್ಷವರ್ಧನ್‌.!

Twitter
Facebook
LinkedIn
WhatsApp
ಲೋಕಸಭೆಗೆ ಟಿಕೆಟ್ ದೊರೆಯದ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಆರೋಗ್ಯ ಸಚಿವ ಹರ್ಷವರ್ಧನ್‌.!

ಬಿಜೆಪಿ ಹಿರಿಯ ನಾಯಕ, ದೆಹಲಿ ಸಂಸದ ಡಾ. ಹರ್ಷವರ್ಧನ್‌ (Harsh Vardhan) ಅವರು ರಾಜಕೀಯವನ್ನೇ ತೊರೆದಿದ್ದಾರೆ. ಬಿಜೆಪಿಯು ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಡಾ. ಹರ್ಷವರ್ಧನ್‌ ಅವರ ಕ್ಷೇತ್ರವಾದ ದೆಹಲಿ ಚಾಂದಿನಿ ಚೌಕ್‌ ಲೋಕಸಭೆ ಕ್ಷೇತ್ರದಲ್ಲಿ ಪ್ರವೀಣ್‌ ಖಂಡೇಲ್ವಾಲ್‌ (Praveen Khandelwal) ಅವರಿಗೆ ಪಕ್ಷವು ಟಿಕೆಟ್‌ ನೀಡಿದೆ. ಇದರ ಬೆನ್ನಲ್ಲೇ, ಹರ್ಷವರ್ಧನ್‌ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

“ನಾನು ಕಳೆದ 30 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ಐದು ವಿಧಾನಸಭೆ ಹಾಗೂ ಎರಡು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಹಾಗೆಯೇ, ಪಕ್ಷ ವಹಿಸಿದ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆತಿದೆ. ಈಗ ನಾನು ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ನಾನು ಮತ್ತೆ ನನ್ನ ಮೂಲ ಉದ್ಯೋಗವಾದ ವೈದ್ಯ ವೃತ್ತಿಗೆ ಮರಳುತ್ತೇನೆ. ದೆಹಲಿ ಆರೋಗ್ಯ ಸಚಿವ ಹಾಗೂ ಕೇಂದ್ರ ಆರೋಗ್ಯ ಸಚಿವನಾಗಿ ನಾನು ನಿರ್ವಹಿಸಿದ ಕೆಲಸವು ತೃಪ್ತಿ ತಂದಿದೆ. ಇದುವರೆಗೆ ನನಗೆ ಅವಕಾಶ ಕೊಟ್ಟ ಬಿಜೆಪಿ ಹಿರಿಯ ನಾಯಕರು, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು” ಎಂದು ಹರ್ಷವರ್ಧನ್‌ ಅವರು ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಯ ಗೌತಮ್‌ ಗಂಭೀರ್‌ ಹಾಗೂ ಜಯಂತ್‌ ಸಿನ್ಹಾ ಅವರು ಕೂಡ ಈಗಾಗಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ