ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಮೃತ್ಯು!

Twitter
Facebook
LinkedIn
WhatsApp
ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಮೃತ್ಯು!

ಯಾದಗಿರಿ: ರಜೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ (Police Constable) ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ ಬಾಧಿಸುತ್ತಿದ್ದ ಕಾರಣ ಜೂನ್‌ನಿಂದ ರಜೆಯಲ್ಲಿದ್ದರು. ಹೀಗಾಗಿ ಬುಧವಾರ ಬೆಂಗಳೂರಿನ (Bengaluru) ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವ ಸಂದರ್ಭ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಗಲಿಕೆಗೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಸೇರಿದಂತೆ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ. 

ವೈದ್ಯರ ನಿರ್ಲಕ್ಷ್ಯ ಆರೋಪ- 5 ವರ್ಷದ ಬಾಲಕಿ ಸಾವು

ತುಮಕೂರು: ವೈದ್ಯರ (Doctor) ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪಿಸಿ ಆಕ್ರೋಶ ಹೊರಹಾಕಿದ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ (Gubbi) ತಾಲೂಕಿನಲ್ಲಿ ನಡೆದಿದೆ.

ತನು (5) ಮೃತ ಬಾಲಕಿ. ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿದೆ. ಕೂಡಲೇ ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪಾಲಕರು ಕರೆದೊಯ್ದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿಲ್ಲ. ನರ್ಸ್ ಮಗುವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಹಿನ್ನೆಲೆ ಖಾಸಗಿ ವಾಹನದಲ್ಲಿ ಗುಬ್ಬಿಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಬಾಲಕಿ (Girl) ಮೃತಪಟ್ಟಿದ್ದಾಳೆ.

ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇದ್ದಿದ್ದರೆ ನಮ್ಮ ಮಗು ಸಾವನ್ನಪ್ಪುತ್ತಿರಲಿಲ್ಲ. ಇದು 24×7 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ನಮ್ಮ ಮಗು ಸಾವನ್ನಪ್ಪಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಮೃತಪಡುತ್ತಿರಲಿಲ್ಲ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ