ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು
Twitter
Facebook
LinkedIn
WhatsApp
ಬೆಂಗಳೂರು: ನಗರದ ಕೆಂಗೇರಿ (Kengeri) ಸಂಚಾರಿ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ. ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೊರೋನಾ ಸಮಯದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಮಗು, ಇದೀಗ ತಾಯಿಯನ್ನೂ ಕಳೆದುಕೊಂಡು ಅನಾಥವಾಗಿದೆ.
ಕಾನ್ಸ್ಟೇಬಲ್ ಪ್ರಿಯಾಂಕಾ ಅವರಿಗೆ 2018ರಲ್ಲಿ ಮದುವೆಯಾಗಿತ್ತು. ಆದರೆ 2021ರಲ್ಲಿ ಕೊರೋನಾ ಸಂದರ್ಭದಲ್ಲಿ ಇವರ ಪತಿ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಿಯಾಂಕಾ 1 ತಿಂಗಳ ಗರ್ಭಿಣಿಯಾಗಿದ್ದರು.
ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಿಸಿ ಪ್ರಿಯಾಂಕಾ, 10 ದಿನ ರಜೆ ಪಡೆದು ಅಜ್ಜಂಪುರಕ್ಕೆ ತೆರಳಿದ್ದರು. ಆದರೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.