ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Heath Streak: ಜಿಂಬಾಬ್ವೆ ತಂಡದ ಮಾಜಿ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ನಿಧನ

Twitter
Facebook
LinkedIn
WhatsApp
Heath Streak: ಜಿಂಬಾಬ್ವೆ ತಂಡದ ಮಾಜಿ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ನಿಧನ

Heath Streak Passed Away: ಜಿಂಬಾಬ್ವೆ ತಂಡದ ಮಾಜಿ ನಾಯಕ ಮತ್ತು ಅನುಭವಿ ಆಲ್‌’ರೌಂಡರ್ ಹೀತ್ ಸ್ಟ್ರೀಕ್ ಆಗಸ್ಟ್ 22ರಂದು ನಿಧನರಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು 49ರ ಹರೆಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಜಿಂಬಾಬ್ವೆ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ 65 ಟೆಸ್ಟ್ ಮತ್ತು 189 ODIಗಳನ್ನು ಆಡಿದ್ದ ಸ್ಟ್ರೀಕ್, ಕೊಲೊನ್ ಮತ್ತು ಲಿವರ್ ಕ್ಯಾನ್ಸರ್’ಗೆ ತುತ್ತಾಗಿದ್ದರು. ಇದೇ ಕಾರಣದಿಂದ ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಬೌಲರ್ ಆಲ್‌’ರೌಂಡರ್ ಆಗಿ ಆಡುತ್ತಿದ್ದ ಹೀತ್ ಸ್ಟ್ರೀಕ್ ಟೆಸ್ಟ್ ಕ್ರಿಕೆಟ್‌’ನಲ್ಲಿ ಒಟ್ಟು 216 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 16 ಬಾರಿ ಇನ್ನಿಂಗ್ಸ್‌’ನಲ್ಲಿ 4 ವಿಕೆಟ್ ಹಾಗೂ 7 ಬಾರಿ ಇನ್ನಿಂಗ್ಸ್‌’ನಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

WhatsApp Image 2023 08 23 at 10.00.58 AM

ಹೀತ್ ಸ್ಟ್ರೀಕ್ 50 ಓವರ್ ಮಾದರಿಯಲ್ಲಿ 29.82 ಸರಾಸರಿಯಲ್ಲಿ 239 ವಿಕೆಟ್ ಪಡೆದಿದ್ದಾರೆ. ODI ವೃತ್ತಿಜೀವನದ ಇನ್ನಿಂಗ್ಸ್‌ನಲ್ಲಿ 4 ಮತ್ತು ಒಮ್ಮೆ 5 ವಿಕೆಟ್‌’ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ. ಟೆಸ್ಟ್‌’ನಲ್ಲಿ 1990 ರನ್ ಮತ್ತು ODIಗಳಲ್ಲಿ 2943 ರನ್ ಕೂಡ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 11 ಅರ್ಧ ಶತಕಗಳೂ ಸೇರಿವೆ. ಏಕದಿನದಲ್ಲಿ 13 ಅರ್ಧಶತಕ ಇನ್ನಿಂಗ್ಸ್‌ಗಳನ್ನು ಸ್ಟ್ರೀಕ್ ಆಡಿದ್ದಾರೆ.

2000ರಲ್ಲಿ, ಜಿಂಬಾಬ್ವೆ ಕ್ರಿಕೆಟ್ ಮಂಡಳಿಯು ಹೀತ್ ಸ್ಟ್ರೀಕ್ ಅವರನ್ನು ಟೆಸ್ಟ್ ಮತ್ತು ODI ಎರಡೂ ತಂಡಗಳ ನಾಯಕರನ್ನಾಗಿ ನೇಮಿಸಿತು. ಸ್ಟ್ರೀಕ್ ನಾಯಕತ್ವದಲ್ಲಿ, ಜಿಂಬಾಬ್ವೆ 21 ಟೆಸ್ಟ್ ಪಂದ್ಯಗಳಲ್ಲಿ 4 ಗೆದ್ದರೆ, 11 ಬಾರಿ ಸೋಲು ಕಂಡಿದೆ. ಇನ್ನು 6 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ODIನ 68 ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿದ್ದು, ಇದರಲ್ಲಿ 47 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದರೆ, 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಸ್ಟ್ರೀಕ್ ನಿಧನದ ಸುದ್ದಿ ತಿಳಿದ ಬಳಿಕ, ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೇರಿದಂತೆ ಅನೇಕ ಮಾಜಿ ಮತ್ತು ಹಾಲಿ ಆಟಗಾರರು ಟ್ವೀಟ್‌’ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist