ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ ; ತಕ್ಷಣ ತ್ಯಾಜ್ಯ ಸುಡುವುದನ್ನು ನಿಲ್ಲಿಸುವಂತೆ ಪಂಜಾಬ್ ಹಾಗೂ 5 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ!

Twitter
Facebook
LinkedIn
WhatsApp
ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ ; ತಕ್ಷಣ ತ್ಯಾಜ್ಯ ಸುಡುವುದನ್ನು ನಿಲ್ಲಿಸುವಂತೆ ಪಂಜಾಬ್ ಹಾಗೂ 5 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ!

ಹೊಸದಿಲ್ಲಿ: ದಿಲ್ಲಿಯ ವಾಯುಮಾಲಿನ್ಯಕ್ಕೆ (Delhi Air Pollution) ಕಾರಣವಾಗಿರುವ ಕೃಷಿ ತ್ಯಾಜ್ಯ ಸುಡುವುದಕ್ಕೆ (stubble burning) ಕೂಡಲೇ ತಡೆ ಹಾಕಿ ಎಂದು ಸುಪ್ರೀಂ ಕೋರ್ಟ್‌ (Supreme court) ಪಂಜಾಬ್‌ ಸೇರಿದಂತೆ ಐದು ರಾಜ್ಯಗಳಿಗೆ ಇಂದು ತಾಕೀತು ಮಾಡಿತು.

ಪಂಜಾಬ್, ಹರಿಯಾಣ, ದಿಲ್ಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಗಳ ರೈತರು ಕೃಷಿ ತ್ಯಾಜ್ಯ ಸುಡುವುದರ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ಆಯಾ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿತು. ದೆಹಲಿಯು ವರ್ಷದಿಂದ ವರ್ಷಕ್ಕೆ ತೀವ್ರ ವಾಯು ಮಾಲಿನ್ಯವನ್ನು ಎದುರಿಸುತ್ತಿದೆ. ಮುಂದೆಯೂ ಇದನ್ನು ಎದುರಿಸಲು ಸಾಧ್ಯವಿಲ್ಲ. ಪರಿಹಾರಕ್ಕಾಗಿ ಕಾರ್ಯೋನ್ಮುಖರಾಗಿ ಎಂದು ಉನ್ನತ ನ್ಯಾಯಾಲಯದ ಪೀಠ ನಿರ್ದೇಶಿಸಿದೆ.

ಮುಖ್ಯವಾಗಿ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತು. ʼʼನಾವು ಸದಾ ರಾಜಕೀಯ ಕದನ ನಡೆಸುತ್ತಾ ಇರಲು ಸಾಧ್ಯವಿಲ್ಲ. ನಾವು ತ್ಯಾಜ್ಯ ಸುಡುವಿಕೆ ನಿಲ್ಲಿಸಬೇಕೆಂದು ಬಯಸುತ್ತೇವೆ. ನೀವು ಅದನ್ನು ಹೇಗೆ ಮಾಡುತ್ತೀರೋ ನಮಗೆ ಬೇಕಿಲ್ಲ. ಅದು ನಿಮ್ಮ ಕೆಲಸ. ಆದರೆ ಅದನ್ನು ನಿಲ್ಲಿಸಬೇಕು. ಕೂಡಲೇ ಏನಾದರೂ ಮಾಡಿʼʼ ಎಂದು ಸುಪ್ರೀಂ ಕೋರ್ಟ್ ಪಂಜಾಬ್ ಸರಕಾರಕ್ಕೆ ಚಾಟಿ ಬೀಸಿತು.

ಕಳೆದ ಒಂದು ವಾರದಿಂದ ವಿಷಮಿಸಿರುವ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಮಂಗಳವಾರವೂ ಹಾಗೇ ಮುಂದುವರಿದಿದೆ. ದೆಹಲಿಯ ಕೆಲವು ಭಾಗಗಳಲ್ಲಿ ದಟ್ಟವಾದ ಹೊಗೆಯ ಮೋಡಗಳು ಆವರಿಸಿವೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಭತ್ತದ ಒಣಹುಲ್ಲಿನ ಸುಡುವಿಕೆಯು ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ದೆಹಲಿಯಲ್ಲಿ ವಾಯುಮಾಲಿನ್ಯ ಮಟ್ಟದಲ್ಲಿ ಅಪಾಯಕಾರಿ ಏರಿಕೆಗೆ ಕಾರಣವಾಗುತ್ತಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ವಾಯು ಮಾಲಿನ್ಯದ ಕುರಿತು ವಿಚಾರಣೆ ನಡೆಸಿತು. ತಕ್ಷಣ ತ್ಯಾಜ್ಯ ಸುಡುವುದನ್ನು ನಿಲ್ಲಿಸುವಂತೆ ನಿರ್ದೇಶಿಸಿದ ಕೋರ್ಟ್‌, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ನ್ಯಾಯಾಲಯದ ಅನುಷ್ಠಾನದ ಮೇಲ್ವಿಚಾರಣೆಗೆ ಹೊಣೆಗಾರರನ್ನಾಗಿಸಿತು. ತಾನು ವಾರಾಂತ್ಯದಲ್ಲಿ ಪಂಜಾಬ್ ಮೂಲಕ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಎರಡೂ ಬದಿಗಳಲ್ಲಿ ವ್ಯಾಪಕವಾದ ಬೆಂಕಿಯನ್ನು ನೋಡಿದೆ ಎಂದು ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಕೌಲ್ ತಿಳಿಸಿದರು.

ಪಂಜಾಬ್‌ನಲ್ಲಿ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನೀಡುವುದನ್ನು ನಿಲ್ಲಿಸಬೇಕು ಮತ್ತು ರೈತರನ್ನು ಪರ್ಯಾಯ ಬೆಳೆಗಳಿಗೆ ಬದಲಾಯಿಸುವ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಸೂಚಿಸಿದ ನ್ಯಾಯಾಲಯವು ಕೇಂದ್ರದ ಮೇಲೆ ಆ ಜವಾಬ್ದಾರಿಯನ್ನು ಹೊರಿಸಿದೆ. “ಸರ್ಕಾರವು ಕಿರು ಧಾನ್ಯಗಳ ಬಗ್ಗೆ ಪ್ರಚಾರ ಮಾಡುತ್ತಿದೆ, ಏಕೆ ಅದನ್ನು ಇನ್ನಷ್ಟು ಪ್ರಚಾರ ಮಾಡಬಾರದು?” ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ವಿಚಾರಣೆಯನ್ನು ಕೋರ್ಟ್‌ ಶುಕ್ರವಾರಕ್ಕೆ ಮುಂದೂಡಿದೆ. ಈ ಸಂಬಂಧ ಎಲ್ಲ ರಾಜ್ಯಗಳ ಪ್ರತಿನಿಧಿಗಳನ್ನು ಬುಧವಾರ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಹೇಳಿದೆ. “ಪ್ರಮುಖ ಕಾರ್ಯದರ್ಶಿಗಳು ಭೌತಿಕವಾಗಿ ಇರಬೇಕು ಅಥವಾ ವರ್ಚುವಲ್‌ ಆಗಿ ಪಾಲ್ಗೊಳ್ಳಬೇಕು. ಶುಕ್ರವಾರದ ವೇಳೆಗೆ ನಾವು ಸಮಸ್ಯೆಯ ಬಗ್ಗೆ ಸ್ಪಷ್ಟ ಚಿತ್ರಣ ಹಾಗೂ ಪರಿಹಾರದ ಸಾಧ್ಯತೆ ಹೊಂದಿರಬೇಕುʼʼ ಎಂದು ಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್‌ಕೆ ಕೌಲ್ ಹೇಳಿದರು.

ಹಬ್ಬ ಹರಿದಿನಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ತನ್ನ ಹಿಂದಿನ ಆದೇಶವನ್ನು ಅನುಸರಿಸುವಂತೆ ಮಂಗಳವಾರದಂದು ಸುಪ್ರೀಂ ಕೋರ್ಟ್ ರಾಜಸ್ಥಾನ ಮತ್ತು ಇತರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ವಿಶೇಷವಾಗಿ ಹಬ್ಬದ ಸಮಯದಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಮಾಲಿನ್ಯವನ್ನು ನಿರ್ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ