ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ಚೆನ್ನೈ: ಮಿಚಾಂಗ್ ಚಂಡಮಾರುತ (Cyclone Michaung) ರೌದ್ರರೂಪ ತಾಳಿದೆ. ಪರಿಣಾಮ ತಮಿಳುನಾಡು (Tamilnadu), ಆಂಧ್ರದಲ್ಲಿ (Andhra Pradesh) ಭಾರೀ ಮಳೆಯಾಗಿದೆ. ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದ ಭಾರೀ ಬಿರುಗಾಳಿ ಸಹಿತ ಮಳೆಗೆ ಚೆನ್ನೈ ನಗರವಂತೂ ಪ್ರವಾಹ ಕಾರಣ ಹೆಚ್ಚು ಕಡಿಮೆ ಸ್ತಂಭಿಸಿದೆ. ಬಿಟ್ಟುಬಿಡದೇ ಸುರಿತಿರೋ ಮಳೆಯ (Rain) ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಚೆನ್ನೈನಲ್ಲಿ 5 ಮಂದಿ ಬಲಿಯಾಗಿದ್ದು, ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್‍ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ. ಚೆನ್ನೈ ಏರ್ ಪೋರ್ಟ್‍ನಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಚೆನ್ನೈ ಸಾರಿಗೆ ಬಸ್‍ಗಳು ಸಹ ರಸ್ತೆಗೆ ಇಳಿದಿಲ್ಲ. ಮನೆಗಳಿಗೂ ನೀರು ನುಗ್ಗಿದೆ. ವಾಹನಗಳು ನೀರಲ್ಲಿ ಮುಳುಗಿವೆ. ಕೋರ್ಟ್-ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಅಸ್ಥವ್ಯಸ್ತವಾಗಿದೆ. ಸಾಧ್ಯವಾದಷ್ಟು ಜನ ಮನೆಗೆ ಸೀಮಿತ ಆಗಬೇಕು ಎಂದು ಸರ್ಕಾರ ಕೋರಿದೆ.
ಕಾಂಚಿಪುರಂ, ಚೆಂಗಲ್‍ಪಟ್ಟು, ತಿರುವಳ್ಳುವರ್ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಆಗುತ್ತಿದೆ. ಆಂಧ್ರದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗುತ್ತಿದೆ. ತಿರುಮಲದಲ್ಲಿ ಮಳೆ ಕಾರಣ ಭಕ್ತರು ಪರದಾಡಿದರು. ಇಂದು ಮಧ್ಯಾಹ್ನ 12 ಗಂಟೆಗೆ ಮಿಚೌಂಗ್ ಚಂಡಮಾರುತ ನಿಜಾಂಪಟ್ಟಣಂ ಬಳಿ ತೀರ ದಾಟಲಿದೆ. ನಂತರ ಕೋಸ್ತಾ ಆಂಧ್ರ ತೀರಕ್ಕೆ ಸಮನಾಂತವಾರವಾಗಿ ಚಲಿಸಲಿದೆ.
ಸದ್ಯ ಚೆನ್ನೈನಿಂದ 90 ಕಿಲೋಮೀಟರ್ ದೂರದಲ್ಲಿ ಚಲಿಸುತ್ತಿದೆ. 90ರಿಂದ 100 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರ ಪ್ರಕುಬ್ಧಗೊಂಡಿದೆ. ಚೆನ್ನೈ ತಲುಪಬೇಕಿದ್ದ 27ಕ್ಕೂ ಹೆಚ್ಚು ವಿಮಾನಗಳು ಬೆಂಗಳೂರು ಸೇರಿವೆ. ಕರ್ನಾಟಕದಿಂದ ತಮಿಳುನಾಡಿಗೆ ತೆರಳುವ ರೈಲು ಸೇವೆ ಕೂಡ ಬಂದ್ ಆಗಿದೆ.
Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ
ಅಮರಾವತಿ: ಮಿಚೌಂಗ್ ಚಂಡಮಾರುತ (Cyclone Michaung) ಭಾರೀ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ತೀರ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ.
ಆಂಧ್ರದ ನೆಲ್ಲೂರು (Nelluru Andhra Pradesh) ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಬಾಲಕನೊಬ್ಬನನ್ನು ಬಲಿ ಪಡೆದಿದೆ. ಬಿರುಗಾಳಿಯ ತೀವ್ರತೆಗೆ ಗುಡಿಸಲು ಕುಸಿದು ಬಾಲಕ ಬಲಿ ಆಗಿದ್ದಾನೆ. ಸದ್ಯ ನೆಲ್ಲೂರಿಗೆ ಆಗ್ನೇಯ ದಿನನಲ್ಲಿ 440 ಕಿಲೋಮೀಟರ್ ದೂರದಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ವಾಯುವ್ಯ ದಿಕ್ಕಿನತ್ತ ಪಯಣಿಸುತ್ತಿರುವ ಈ ಚಂಡಮಾರುತ ಡಿಸೆಂಬರ್ 5 ರಂದು ನೆಲ್ಲೂರು-ಮಚಲಿಪಟ್ಟಣಂ ನಡುವೆ ತೀರ ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಜೆ ದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ (Narendra Modi), ಮಿಚೌಂಗ್ ಚಂಡಮಾರುತ ಎದುರಿಸಲು ಎಲ್ಲಾ ಸನ್ನದ್ಧತೆ ನಡೆಸಲಾಗಿದೆ. ತೀರ ಪ್ರದೇಶದ ರಾಜ್ಯಗಳ ಜೊತೆ ಸತತವಾಗಿ ಸಂಪರ್ಕದಲ್ಲಿದ್ದೇವೆ. ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಬೇಕು ಎಂದು ಕರೆ ನೀಡಿದ್ದಾರೆ.
ತಮಿಳುನಾಡಿನ (Thamilnadu) ಚೆನೈ, ತಿರುವಳ್ಳೂರ್, ಕಾಂಚೀಪುರಂ ಹಾಗೂ ಚೆನ್ನಗಲ್ ಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋೀಷಿಸಲಾಗಿದೆ. ಅಲ್ಲದೆ ತಮಿಳುನಾಡು ಸರ್ಕಾರ ಇಂದು ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜು, ಸರ್ಕಾರಿ ಕಛೇರಿ ಸೇರಿದಂತೆ ಸಾರ್ವಜನಿಕ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರ ಮೂಲಕ 310 ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಚೆನೈ ಗೆ ಎಂಟ್ರಿ ಕೊಡಲಿರೋ ಚಂಡಮಾರುತವು ಬೇ ಆಫ್ ಬೆಂಗಾಲ್ ಸೌಥ್ ರೀಜನ್ ಮೂಲಕ ಹಾದು ಹೊಗಲಿದೆ. ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.