ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert : ಕೊಡಗಿನಲ್ಲಿ ತಂಪೆರೆದ ಮಳೆರಾಯ ; ಮುಂದಿನ 3 ದಿನಗಳ ಕಾಲ ಕೆಲವೆಡೆ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
Rain Alert : ಕೊಡಗಿನಲ್ಲಿ ತಂಪೆರೆದ ಮಳೆರಾಯ ; ಮುಂದಿನ 3 ದಿನಗಳ ಕಾಲ ಕೆಲವೆಡೆ ಮಳೆ ಮುನ್ಸೂಚನೆ..!

ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮಳೆಯಾಗಿದ್ದು (Karnataka Rain), ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ. ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ.

ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಕರಾವಳಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಾಗ್ಯೂ, ಗುಡುಗು, ಭಾರೀ ಮಳೆ ಇಲ್ಲ ಎಂದು ವರದಿಯಲ್ಲಿ ತಿಳಿಸಿದೆ.

ಭಾನುವಾರ ಬೀದರ್, ಚಿಕ್ಕಮಗಳೂರಿನಲ್ಲಿ ಮಳೆ : ಭಾನುವಾರ ಬೀದರ್ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಬೀದರ್ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಕೂಡ ಮಳೆ ಸುರಿದಿದೆ.

ಬೀದರ್ ನಗರದಲ್ಲಿ ಭಾನುವಾರ 62 ಮಿ.ಮೀ ಮಳೆಯಾಗಿದೆ. ಬಿಸಿಲ ಬೇಗೆಗೆ ಕಾದು ಕೆಂಡದಂತಾಗಿದ್ದ ಭೂಮಿಗೆ ಮಳೆ ತಂಪೆರದಿದೆ. ಮಲಚಾಪುರ 45 ಮಿ.ಮೀ, ಆನದೂರು 37 ಮಿ.ಮೀ, ಬೀದರ್ ದಕ್ಷಿಣ 36.5 ಮಿ.ಮೀ, ಬಾಗಧಾಳ 34.5 ಮಿ.ಮೀ, ಮೀಂಕೆರಾ 25.5 ಮಿ.ಮೀ, ಔರಾದ 21 ಮಿ.ಮೀ, ಕಪಾಲಪುರದಲ್ಲಿ 24 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಕೆಲವು ದಿನಗಳಲ್ಲೆ ಬೆಂಗಳೂರಿನಲ್ಲೂ ಮಳೆ? ಹವಾಮಾನ ಇಲಾಖೆ ವರದಿಗಳ ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ಮೊದಲನೇ ವಾರ ಅಥವಾ ಎರಡನೇ ವಾರದ ವೇಳೆಗೆ ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೀದರ್ ನಗರದಲ್ಲಿ ಭಾನುವಾರ 62 ಮಿ.ಮೀ ಮಳೆಯಾಗಿದೆ. ಬಿಸಿಲ ಬೇಗೆಗೆ ಕಾದು ಕೆಂಡದಂತಾಗಿದ್ದ ಭೂಮಿಗೆ ಮಳೆ ತಂಪೆರದಿದೆ. ಮಲಚಾಪುರ 45 ಮಿ.ಮೀ, ಆನದೂರು 37 ಮಿ.ಮೀ, ಬೀದರ್ ದಕ್ಷಿಣ 36.5 ಮಿ.ಮೀ, ಬಾಗಧಾಳ 34.5 ಮಿ.ಮೀ, ಮೀಂಕೆರಾ 25.5 ಮಿ.ಮೀ, ಔರಾದ 21 ಮಿ.ಮೀ, ಕಪಾಲಪುರದಲ್ಲಿ 24 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ತಾಪಮಾನ ಮುನ್ಸೂಚನೆ

ಕರಾವಳಿಯ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 20ರ ಬೆಳಗ್ಗೆ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಬಹಳಷ್ಟಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ