ಮಂಗಳೂರು ನಗರದಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ
Twitter
Facebook
LinkedIn
WhatsApp
ಮಂಗಳೂರು: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಂಡಿದೆ. ಅದರಲ್ಲೂ ಉತ್ತರ ಕನ್ನಡ (Uttar Kannada), ಉಡುಪಿ (Udupi) ಹಾಗೂ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಿ.ವಿ.ಎಸ್ ಬಳಿ ಗುಡ್ಡ ಕುಸಿತಗೊಂಡಿದೆ. ಪಿ.ವಿ.ಎಸ್ ನಿಂದ ಕೆ.ಎಸ್ ರಾವ್ ರೋಡ್ಗೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯಲ್ಲಿ ಗುಡ್ಡ ಕುಸಿದ ಹಿನ್ನಲೆ ಪಕ್ಕದಲ್ಲಿದ್ದ ಹಳೆಯ ಕಟ್ಟಡದ ಗೋಡೆ ಕೂಡ ಕುಸಿತವಾಗಿದೆ.
ಗುಡ್ಡ ಕುಸಿತವಾದ ಸ್ಥಳಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದ್ದು, ಇನ್ನಷ್ಟು ಮಣ್ಣು ಕುಸಿಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.