ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಮುನ್ಸೂಚನೆ..!

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಗೇರುಸೊಪ್ಪ, ಕೊಲ್ಲೂರು, ಕೋಟ, ಕುಮಟಾ, ಕ್ಯಾಸಲ್​ರಾಕ್, ಹೊನ್ನಾವರ, ಶಿರಾಲಿ, ಬೆಳ್ತಂಗಡಿ, ಮಾಣಿ, ಕೊಟ್ಟಿಗೆಹಾರ, ಮಂಗಳೂರು, ಧರ್ಮಸ್ಥಳ, ಪಣಂಬೂರು, ಕದ್ರಾ, ಕಮ್ಮರಡಿ, ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಎಚ್​ಎಂಎಸ್​, ಉಪ್ಪಿನಂಗಡಿ,ಕುಂದಾಪುರ, ಕಾರ್ಕಳ, ಸಿದ್ದಾಪುರ, ಕಾರವಾರ, ಮಂಕಿ, ಉಡುಪಿ, ಚಿಕ್ಕಬಳ್ಳಾಪುರ, ತೊಂಡೆಭಾವಿ, ಕೊಪ್ಪ, ತುಮಕೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಲಿಂಗನಮಕ್ಕಿ, ತಾಳಗುಪ್ಪ, ಮಂಚಿಕೆರೆ, ಅಂಕೋಲಾ, ಜೋಯಿಡಾ, ಯಲ್ಲಾಪುರ, ಚಿಂತಾಮಣಿ,ಸಂತೆಬೆನ್ನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಧುಗಿರಿ, ಹುಂಚದಕಟ್ಟೆ, ಎನ್​ಆರ್​ಪುರ, ಭಾಗಮಂಡಲ, ಪರಶುರಾಂಪುರ, ಕೋಲಾರದಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ