ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ನವೆಂಬರ್ 7ರವರೆಗೆ ಭಾರಿ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ನವೆಂಬರ್ 7ರವರೆಗೆ ಭಾರಿ ಮಳೆ ಸಾಧ್ಯತೆ!

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 7ರವರೆಗೆ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಾಣಿ, ತ್ಯಾಗರ್ತಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಸಕಲೇಶಪುರ, ಬೆಳಗಾವಿ, ಸುಳ್ಯ, ಪುತ್ತೂರು, ಮಂಗಳೂರು, ಹೊಸದುರ್ಗ, ಎನ್​ಆರ್​ ಪುರ, ಶೃಂಗೇರಿ, ಯುಗಟಿ,ಭಾಗಮಂಡಲ, ಬನವಾಸಿ, ಕುಮಟಾ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಕ್ಕಿಆಲೂರು, ಬೈಲಹೊಂಗಲ, ಚಿಕ್ಕಮಗಳೂರು, ಕೊಟ್ಟಿಗೆಹಾರ, ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ, ಮಾಗಡಿ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್​ನಲ್ಲಿ 16.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಹವಾಮಾನ ವರದಿ: 01-11-2023

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿಂದು ಮಳೆ ಸಾಧ್ಯತೆ ಕಡಿಮೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 31-26
ಶಿವಮೊಗ್ಗ: 32-21
ಬೆಳಗಾವಿ: 32-20
ಮೈಸೂರು: 30-20

ಮಂಡ್ಯ: 31-20
ಮಡಿಕೇರಿ: 26-17
ರಾಮನಗರ: 31-20
ಹಾಸನ: 28-18
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-18

ಕೋಲಾರ: 29-19
ತುಮಕೂರು: 29-19
ಉಡುಪಿ: 32-25
ಕಾರವಾರ: 32-26
ಚಿಕ್ಕಮಗಳೂರು: 28-18
ದಾವಣಗೆರೆ: 33-22

ಹುಬ್ಬಳ್ಳಿ: 33-22
ಚಿತ್ರದುರ್ಗ: 32-21
ಹಾವೇರಿ: 33-22
ಬಳ್ಳಾರಿ: 33-23
ಗದಗ: 33-22
ಕೊಪ್ಪಳ: 33-22

ರಾಯಚೂರು: 33-22
ಯಾದಗಿರಿ: 33-22
ವಿಜಯಪುರ: 33-22
ಬೀದರ್: 31-19
ಕಲಬುರಗಿ: 33-21
ಬಾಗಲಕೋಟೆ: 34-23

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ