ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ

Twitter
Facebook
LinkedIn
WhatsApp
ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಪಣಂಬೂರು,ಕಾರ್ಕಳ, ಕೋಟ, ನರಗುಂದ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಕ್ಯಾಸಲ್​ರಾಕ್, ಗೇರುಸೊಪ್ಪ, ಕುಕನೂರು, ಪುತ್ತೂರು, ಮಾಣಿ, ಬೆಳ್ತಂಗಡಿ, ಕದ್ರಾ, ಗೋಕರ್ಣ, ಶಿರಾಲಿ, ಯಡ್ವಾಡ, ಯಲ್ಲಾಪುರ, ಮಂಕಿ, ಕುಮಟಾ, ಚಿಕ್ಕೋಡಿ, ಕಲಘಟಗಿ, ಮಹಾಲಿಂಗಪುರ, ಹುಣಸೂರು, ಮಂಚಿಕೆರೆ, ಸುಳ್ಯ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಹೊನ್ನಾವರ, ಹುಕ್ಕೇರಿ, ಗೋಕಾಕ್, ಚಿಂಚೋಳಿ, ಕೊಟ್ಟಿಗೆಹಾರ, ಎಲೆಕ್ಟ್ರಾನಿಕ್ ಸಿಟಿ, ಭಾಗಮಂಡಲ, ಕುಡತಿನಿಯಲ್ಲಿ ಮಳೆಯಾಗಿದೆ.

 

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ