ಚೆನ್ನೈನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ; ಶಾಲೆಗಳಿಗೆ ರಜೆ ಘೋಷಣೆ!
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.
ಚೆನ್ನೈ, ತಿರುವಲ್ಲೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಬೀಚ್ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ. ಬೀಚ್ ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ.
ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಮೇಲೆ ಮಳೆನೀರು ನಿಂತ ಪರಿಣಾಮ ವಿಮಾನ ಸಂಚಾರ ಸ್ಥಗಿತವಾಗಿದೆ.
#TamilNadu | Strong winds accompanied by heavy rainfall lash parts of Chengalpattu city
— Hindustan Times (@htTweets) December 4, 2023
(ANI visuals from Mahabalipuram Beach) pic.twitter.com/7yTi4ySOyT
ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ
ಅಮರಾವತಿ: ಮಿಚೌಂಗ್ ಚಂಡಮಾರುತ (Cyclone Michaung) ಭಾರೀ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ತೀರ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ.
ಆಂಧ್ರದ ನೆಲ್ಲೂರು (Nelluru Andhra Pradesh) ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಬಾಲಕನೊಬ್ಬನನ್ನು ಬಲಿ ಪಡೆದಿದೆ. ಬಿರುಗಾಳಿಯ ತೀವ್ರತೆಗೆ ಗುಡಿಸಲು ಕುಸಿದು ಬಾಲಕ ಬಲಿ ಆಗಿದ್ದಾನೆ. ಸದ್ಯ ನೆಲ್ಲೂರಿಗೆ ಆಗ್ನೇಯ ದಿನನಲ್ಲಿ 440 ಕಿಲೋಮೀಟರ್ ದೂರದಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ವಾಯುವ್ಯ ದಿಕ್ಕಿನತ್ತ ಪಯಣಿಸುತ್ತಿರುವ ಈ ಚಂಡಮಾರುತ ಡಿಸೆಂಬರ್ 5 ರಂದು ನೆಲ್ಲೂರು-ಮಚಲಿಪಟ್ಟಣಂ ನಡುವೆ ತೀರ ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಜೆ ದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ (Narendra Modi), ಮಿಚೌಂಗ್ ಚಂಡಮಾರುತ ಎದುರಿಸಲು ಎಲ್ಲಾ ಸನ್ನದ್ಧತೆ ನಡೆಸಲಾಗಿದೆ. ತೀರ ಪ್ರದೇಶದ ರಾಜ್ಯಗಳ ಜೊತೆ ಸತತವಾಗಿ ಸಂಪರ್ಕದಲ್ಲಿದ್ದೇವೆ. ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಬೇಕು ಎಂದು ಕರೆ ನೀಡಿದ್ದಾರೆ.
ತಮಿಳುನಾಡಿನ (Thamilnadu) ಚೆನೈ, ತಿರುವಳ್ಳೂರ್, ಕಾಂಚೀಪುರಂ ಹಾಗೂ ಚೆನ್ನಗಲ್ ಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋೀಷಿಸಲಾಗಿದೆ. ಅಲ್ಲದೆ ತಮಿಳುನಾಡು ಸರ್ಕಾರ ಇಂದು ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜು, ಸರ್ಕಾರಿ ಕಛೇರಿ ಸೇರಿದಂತೆ ಸಾರ್ವಜನಿಕ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರ ಮೂಲಕ 310 ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಚೆನೈ ಗೆ ಎಂಟ್ರಿ ಕೊಡಲಿರೋ ಚಂಡಮಾರುತವು ಬೇ ಆಫ್ ಬೆಂಗಾಲ್ ಸೌಥ್ ರೀಜನ್ ಮೂಲಕ ಹಾದು ಹೊಗಲಿದೆ. ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.