ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೆ. 17 ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಫೈನಲ್ ಸ್ಥಳಾಂತರ!!

Twitter
Facebook
LinkedIn
WhatsApp
ಸೆ. 17 ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಫೈನಲ್ ಸ್ಥಳಾಂತರ!!

ಕೊಲಂಬೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಈ ಬಾರಿಯ ಏಷ್ಯಾಕಪ್​ನ (Asia Cup 2023) ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಲು ಎಸಿಸಿ ಯೋಚಿಸುತ್ತಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಪೂರ್ವ ನಿಗದಿಯಂತೆ ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ (Colombo) ಏಷ್ಯಾಕಪ್ ಫೈನಲ್ ಪಂದ್ಯ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯದ ದಿನದಂದು ಕೊಲಂಬೊದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಪಂದ್ಯವನ್ನು ಕೊಲಂಬೊದ ಬದಲು ಕ್ಯಾಂಡಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC ಮೂಲಗಳ ಪ್ರಕಾರ, ಏಷ್ಯಾಕಪ್ ಫೈನಲ್ ಪಂದ್ಯವು ಭಾನುವಾರ ಸೆಪ್ಟೆಂಬರ್ 17 ರಂದು ಕ್ಯಾಂಡಿಯ ಪಲ್ಲೆಕೆಲೆಯಲ್ಲಿರುವ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (Pallekele International Cricket Stadium) ನಡೆಯಲಿದೆ ಎಂದು ವರದಿಯಾಗಿದೆ.

ಇಂದು ಅಂದರೆ, ಸೋಮವಾರ, ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯದ ಸ್ಥಳ ಬದಲಾವಣೆಯ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೊಲಂಬೊದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರತ-ಪಾಕಿಸ್ತಾನ ನಡುವಿನ ಸೂಪರ್ 4 ಹಂತದ ಪಂದ್ಯವನ್ನು ಸಹ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಆದರೆ ಮೀಸಲು ದಿನವೂ ಸಹ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ದಿನದಂದು ಪಂದ್ಯ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ.

ಕೊಲಂಬೊದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಈ ಹಿಂದೆಯೂ ಸೂಪರ್ 4 ಪಂದ್ಯಗಳನ್ನು ಕೊಲಂಬೊದಿಂದ ಹಂಬಂಟೋಟಾಗೆ ಬದಲಾಯಿಸಲು ಎಸಿಸಿ ಯೋಜಿಸುತ್ತಿದೆ ಎಂದು ವರದಿಯಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯಾವಳಿಗೆ ಹಿನ್ನಡೆಯುಂಟಾಗುವ ಆತಂಕದ ನಡುವೆಯೂ ಎಸಿಸಿ, ಸೂಪರ್ 4 ಪಂದ್ಯಗಳನ್ನು ಕೊಲಂಬೊದಲ್ಲಿ ಆಡಿಸಲು ತೀರ್ಮಾನಿಸಿತ್ತು. ಇದೀಗ ಫೈನಲ್‌ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ಆತಂಕವಿರುವುದರಿಂದ ಫೈನಲ್ ಪಂದ್ಯವನ್ನು ಕೊಲಂಬೊದಿಂದ ಕ್ಯಾಂಡಿಗೆ ಸ್ಥಳಾಂತರಿಸಲು ಎಸಿಸಿ ಚಿಂತಿಸಿದೆ ಎಂದು ವರದಿಯಾಗಿದೆ.

ಮೀಸಲು ದಿನಕ್ಕೆ ಪಂದ್ಯ ಮುಂದೂಡಿಕೆ

ವಾಸ್ತವವಾಗಿ ಸೆಪ್ಟೆಂಬರ್ 10 ರಂದು ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಆರಂಭವಾದಾಗ ಬಿಸಿಲಿತ್ತು. ಹೀಗಾಗಿ ಹವಾಮಾನ ಮಾಹಿತಿಯನ್ನು ಒದಗಿಸುವ ವೆಬ್‌ಸೈಟ್‌ಗಳು ತಪ್ಪು ಮಾಹಿತಿ ನೀಡಿವೆ ಎಂದು ಎಲ್ಲರು ಭಾವಿಸಿದ್ದರು. ಆದರೆ, ಭಾರತೀಯ ಇನಿಂಗ್ಸ್‌ನ 25ನೇ ಓವರ್‌ನಲ್ಲಿ ಆರಂಭವಾದ ಮಳೆಯು ಧಾರಾಕಾರ ರೂಪವನ್ನು ಪಡೆದುಕೊಂಡಿದ್ದು, ಔಟ್‌ಫೀಲ್ಡ್ ಕೆಸರುಮಯವಾಗಿತ್ತು. ಪರಿಣಾಮವಾಗಿ ಪಂದ್ಯವನ್ನು ನಿಲ್ಲಿಸಿದ್ದು, ಸೆಪ್ಟೆಂಬರ್ 11 ರಂದು ಅಂದರೆ, ಇಂದು ಪಂದ್ಯವನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಸೆಪ್ಟೆಂಬರ್ 10 ರಂದು ಕೊಲಂಬೊದಲ್ಲಿ 90 ರಿಂದ 100 ರಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ವರದಿಯಾಗಿತ್ತು. ಆದರೆ ಸೆಪ್ಟೆಂಬರ್ 11ರ ಕಥೆಯೂ ಇದಕ್ಕಿಂತ ಭಿನ್ನವಾಗಿಲ್ಲ. ಈ ದಿನ ಕೊಲಂಬೊದಲ್ಲಿ 80 ರಿಂದ 90 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಅಕ್ಯುವೆದರ್ ಪ್ರಕಾರ, ಸೆಪ್ಟೆಂಬರ್ 11 ರಂದು ಕೊಲಂಬೊದಲ್ಲಿ ಶೇಕಡಾ 80 ರಷ್ಟು ಮಳೆಯಾಗಲಿದೆ ಎಂದು ವರದಿಯಾದರೆ, Weather.com 90 ಪ್ರತಿಶತ ಮಳೆಯ ಮುನ್ಸೂಚನೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist