ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ

Twitter
Facebook
LinkedIn
WhatsApp
ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ (Ram Mandir) ಗರ್ಭ ಗುಡಿಯಲ್ಲಿ (sanctum sanctorum) ಗುರುವಾರ ಮಧ್ಯಾಹ್ನ ಹೊಸ ರಾಮನ ವಿಗ್ರಹವನ್ನು (Ram Lalla idol) ಇರಿಸಲಾಯಿತು. ಕಪ್ಪು ಕಲ್ಲಿನಲ್ಲಿ ನಿಂತಿರುವ ಭಂಗಿಯ ಐದು ವರ್ಷ ವಯಸ್ಸಿನ ರಾಮಲಲ್ಲಾ ವಿಗ್ರಹದ ಮೊದಲ ಫೋಟೋ (First Phot of Ram Lalla) ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನವರಿ 22 ರಂದು ಈ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಧಾರ್ಮಿಕ ವಿಧಿ ವಿಧಾನಗಳಿಗೆ ಪ್ರಧಾನಿ ಮೋದಿ ಅವರು ಮುಖ್ಯ ಯಜಮಾನರಾಗಿದ್ದಾರೆ.

51 ಇಂಚಿನ ಈ ವಿಗ್ರಹವನ್ನು ಕನ್ನಡಿಗ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ್ದಾರೆ. ಗುರುವಾರ ಮುಂಜಾನೆ, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರಾರ್ಥನೆಯ ಮಂತ್ರಗಳ ನಡುವೆ ಇರಿಸಲಾಯಿತು.

ರಾಮಲಲ್ಲಾನ ಮೂರ್ತಿ ಕೆತ್ತನೆಗಾಗಿ ಸಹಸ್ರ​ ಸಂಖ್ಯೆಯ ಶಿಲ್ಪಿಗಳ ನಡುವಿನ ತುರುಸಿನ ಸ್ಪರ್ಧೆ ನಡೆದಿತ್ತು. ಇದು ಒಂದು ವರ್ಷದ ಹಿಂದಿನ ಪ್ರಕ್ರಿಯೆ. ಇಲ್ಲಿ ಆಯ್ಕೆಗೊಂಡ ಅಂತಿಮ ಮೂವರಲ್ಲಿ ಒಬ್ಬರಾಗಿದ್ದಾರೆ ಅರುಣ್​. ಆ ಮೂವರಲ್ಲಿಯೂ ಅರುಣ್​ ಅವರ ಭಾವಕ್ಕೆ ಹಾಗೂ ಕಲ್ಪನೆಗೆ ಮನ್ನಣೆ ದೊರಕಿದೆ ಎಂಬುದೇ ವಿಶೇಷ. ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಆಯ್ಕೆಯಾಗಿದ್ದ ಇನ್ನಿಬ್ಬರು ಮಹಾನ್ ಶಿಲ್ಪಿಗಳು. ಎಲ್ಲರೂ ಒಬ್ಬರಿಗಿಂತ ಒಬ್ಬರು ಮಹಾನ್​ ಶಿಲ್ಪಿಗಳು. ಆದರೆ ಉಳಿದಿಬ್ಬರು ರಚಿಸಿದ ಮೂರ್ತಿಗಿಂತಲೂ ಅರುಣ್ ಅವರ ಕೆತ್ತನೆಗೆ ಪ್ರಾಶಸ್ತ್ಯ ಸಿಕ್ಕಿದೆ.

ಅರುಣ್ ಅವರು ರಚನೆ ಆಯ್ಕೆಯಾಗಲು ಮೊದಲ ಕಾರಣವೇ ವಿಗ್ರಹ ಮುಖದಲ್ಲಿನ ತೇಜಸ್ಸು. ಅದರಲ್ಲಿ ಹೆಚ್ಚು ದೈವಿಕ ಭಾವವಿದೆ ಎಂಬುದನ್ನು ತೀರ್ಪುಗಾರರು ಮನಗಂಡಿದ್ದಾರೆ. ಪ್ರಾಣಪ್ರತಿಷ್ಠೆ ಆಗಲಿರುವ ವಿಗ್ರಹವು ಬಾಲ ರಾಮನಾಗಿದೆ ಎಂಬುದು ಇಲ್ಲಿ ಗಮನಾರ್ಹ. ಅಂತೆಯೇ ಅರುಣ್ ಅವರ ಕೆತ್ತನೆಯ ವಿಗ್ರಹದಲ್ಲಿ ಮುಗ್ಧ ಮಗುವಿನ ಸುಂದರ ನೋಟವಿದೆ. ಬಾಲ ರಾಮದೇವರು ಸಾಕ್ಷಾತ್ ಮಂದೆ ನಿಂತಿರುವಂತೆ ಕಾಣುವ ಮೂರ್ತಿಯನ್ನು ಅವರು ಕೆತ್ತಿದ್ದಾರೆ. ಅಲ್ಲದೆ ಹೆಚ್ಚು ನೈಜತೆಯಿಂದ ಕೂಡಿದೆ.

ಅರುಣ್​ ಅವರು ಕೆತ್ತಿರುವ ಐದು ವರ್ಷದ ಬಾಲ ರಾಮನ ಮೂರ್ತಿಯ ಕೈಯಲ್ಲಿ ಧನಸ್ಸು ಹಾಗೂ ಬಾಣವಿದೆ. ರಾಮನ ಮೂರ್ತಿಯು 51 ಇಂಚು ಎತ್ತರವಿದ್ದರೆ ಪ್ರಭಾವಳಿ ಸೇರಿದಂತೆ ಒಟ್ಟು ವಿಗ್ರಹ 8 ಅಡಿ ಎತ್ತರ ಹಾಗೂ ಮೂರುವರೆ ಅಡಿ ಅಗಲವಿದೆ. ಇದು ತೇಜಸ್ಸಿನಿಂದ ಕಂಗೊಳಿಸುತ್ತಿದೆ. ಒಟ್ಟಾರೆಯಾಗಿ ಕೋಟ್ಯಂತರ ರಾಮಭಕ್ತರ ಪೂಜೆಗೆ ಅರ್ಹವಾಗಿದೆ ಎಂದು ತೀರ್ಪುಗಾರರು ಅದನ್ನೇ ಆಯ್ಕೆ ಮಾಡಿದ್ದಾರೆ.

ಕರುನಾಡಿನ ಕಲ್ಲು
ರಾಮಲಲ್ಲಾ ವಿಗ್ರಹಕ್ಕೆ ಚಾಮರಾಜನಗರ ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ. ಕೃಷ್ಣ ಶಿಲೆ ಅತ್ಯಂತ ಶಕ್ತಿಶಾಲಿಯಾಗಿದ್ದು ಆಸಿಡ್‌ ಹಾಕಿದರೂ ಏನೂ ಆಗುವುದಿಲ್ಲ. ಇದಕ್ಕೆ ಬೆಂಕಿ ತಗುಲುವುದಿಲ್ಲ, ತುಕ್ಕು ಹಿಡಿಯುವುದಿಲ್ಲ. ಮಳೆ, ಗಾಳಿ, ಬಿಸಿಲನ್ನೂ ತಡೆದುಕೊಳ್ಳುವ ಶಕ್ತಿಯ ಕಲ್ಲು ಇದು. ಹಿಂದೆ ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ ಎಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ ಇದನ್ನು ರಚಿಸಲಾಗಿದೆ.

ಎಂಬಿಎ ಪದವೀಧರ ಅರುಣ್​
ಶಿಲ್ಪಿ ಅರುಣ್​ ಯೋಗಿರಾಜ್ ಅವರು ಎಂಬಿಎ ಪದವೀಧರ. ಶಿಲ್ಪಕಲೆಯೇ ಅವರ ಕುಲಕಸುಬು. ಅವರ ಕುಟುಂಬದ ಐದನೇ ತಲೆಮಾರಿನ ಶಿಲ್ಪಿ. ಅವರು 2008ರಿಂದ ಇಲ್ಲಿಯವರೆಗೆ 1000ಕ್ಕೂ ಹೆಚ್ಚು ವಿಗ್ರಹಗಳನ್ನು ಕೆತ್ತನೆ ಮಾಡಿದ್ದಾರೆ,

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist