ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಎಸ್ಐ ಮರು ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ ಹೈಕೋರ್ಟ್...!

Twitter
Facebook
LinkedIn
WhatsApp
ಪಿಎಸ್ಐ ಮರು ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ ಹೈಕೋರ್ಟ್...!

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ (PSI Scam) ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ (State Government) ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ (Karnataka High court) ಗ್ರೀನ್‌ ಸಿಗ್ನಲ್‌ ನೀಡಿದೆ. ಅಂದರೆ 545 ಪಿಎಸ್‌ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ.

ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇದು ಮರುಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದ ಅಭ್ಯರ್ಥಿಗಳ ಪರ ದಾವೆಯನ್ನು ತಿರಸ್ಕರಿಸಲಾಗಿದೆ.

ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಬಿಜೆಪಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಒಂದು ಹಂತದಲ್ಲಿ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್‌ ಎಲ್ಲ ಅರ್ಜಿಗಳ ವಿಚಾರಣೆಯನ್ನು ನಡೆಸಿತ್ತು. ಕೆಲವು ದಿನಗಳ ಹಿಂದೆ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ನವೆಂಬರ್‌ 10ಕ್ಕೆ ನಿಗದಿ ಮಾಡಿತ್ತು.

ಪಿಎಸ್‌ಐ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠವು ಆಗಸ್ಟ್‌ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಹೈಕೋರ್ಟ್‌ ತಡೆ ವಿಧಿಸಿದ್ದು, ಆ ಆದೇಶ ಚಾಲ್ತಿಯಲ್ಲಿದೆ.

ರಾಜ್ಯ ಸರ್ಕಾರವು 2022ರ ಏಪ್ರಿಲ್‌ 29ರಂದು ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಾದಿತ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು.

ಏನಿದು ಪರೀಕ್ಷೆ ಅಕ್ರಮ ವಿವಾದ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2021ರ ಅಕ್ಟೋಬರ್‌ ಮೂರರಂದು ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಒಟ್ಟು 545 ಹುದ್ದೆಗಳಿಗಾಗಿ ಲಕ್ಷಾಂತರ ಜನ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬಳಿಕ 52 ಮಂದಿ ಅಭ್ಯರ್ಥಿಗಳು ಇದರಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಹಲವರ ಬಂಧನವಾಗಿದೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 52 ಮಂದಿಯನ್ನು ಇನ್ನು ಯಾವುದೇ ಪೊಲೀಸ್‌ ಪರೀಕ್ಷೆಗೆ ಹಾಜರಾಗದಂತೆ ಶಾಶ್ವತವಾಗಿ ನಿರ್ಬಂಧಿಸಲಾಗಿದೆ. ಈ ನಡುವೆ ಅಕ್ರಮ ಎಸಗಿದವರನ್ನು ಹೊರತುಪಡಿಸಿ ಉಳಿದವರ ಆಯ್ಕೆ ಪಟ್ಟಿಯನ್ನು ಪ್ರಕಟಿಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದರು. ಆದರೆ, ಸರ್ಕಾರ ಮರುಪರೀಕ್ಷೆಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೊಕ್ಕಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ