ಜಯಲಲಿತಾರವರ ಜಪ್ತಿಯಾಗಿದ್ದ ಒಡವೆ ಹಿಂದಿರುಗಿಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ; ಕಾರಣವೇನು?
Twitter
Facebook
LinkedIn
WhatsApp
ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವುವಂತೆ ತಾನೇ ನೀಡಿದ ತೀರ್ಪಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಮಾರ್ಚ್.5, 6ರೊಳೆಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚಿಸಿತ್ತು.
ಈ ಆದೇಶಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದ ಜಯಲಲಿತಾ ವಾರಸುದಾರೆ ಜೆ.ದೀಪಾ ಪರ ವಕೀಲರು, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದೆ ಎಂಬುದಾಗಿ ಕೋರಿದ್ದರು.
ಈ ವಾದವನ್ನು ಪರಿಗಣಿಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದುರಿಗಿಸುವ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.