ಭೀಕರ ಬಸ್ ಅಪಘಾತ – ನಾಲ್ವರು ಸಾವು
ಜೈಪುರ: ನಿಯಂತ್ರಣ ತಪ್ಪಿದ ಬಸ್‌ವೊಂದು ರೈಲು ಹಳಿಯ (Railway Track) ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ (ಇಂದು) ಬೆಳ್ಳಂಬೆಳಗ್ಗೆ ರಾಜಸ್ಥಾನದ ದೌಸಾ (Rajasthan Dausa) ಜಿಲ್ಲೆಯಲ್ಲಿ ನಡೆದಿದೆ.
ಮಧ್ಯರಾತ್ರಿ 2:15ಕ್ಕೆ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ಬಸ್ ಬಿದ್ದು, ದುರಂತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ (Haridwar) ಉದಯಪುರಕ್ಕೆ ತೆರಳುತ್ತಿತ್ತು.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ತಿಳಿಸಿದ್ದಾರೆ.
ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ ಮೇಲೆ ಮಾರಣಾಂತಿಕ ಹಲ್ಲೆ- ವೀಡಿಯೋ ವೈರಲ್
ಬೆಳಗಾವಿ: ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ (Soldier) ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಣೇಶಪುರದಲ್ಲಿ ನಡೆದಿದೆ.
ಮಹಾರಾಷ್ಟ್ರದ (Maharashtra) ಚಂದಗಡ ಮೂಲದ ಪರುಶುರಾಮ್ ಪಾಟೀಲ್ ಹಲ್ಲೆಗೊಳಗಾದ ಯೋಧ. ನಗರದ ಬಾರ್ ಎದುರು ನಡುರಸ್ತೆಯಲ್ಲೇ ಯೋಧನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು ಅಲ್ಲಿಂದ ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಅಸ್ವಸ್ಥನಾಗಿದ್ದ ಯೋಧನನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನಗಳ ಹಿಂದೆ ಯೋಧನ ಮೇಲೆ ಹಲ್ಲೆಗೈಯಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯೋಧ ಪರುಶುರಾಮ್ ಜಮ್ಮುವಿನಲ್ಲಿ (Jammu) ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬೆಳಗಾವಿಯ (Belagavi) ಕ್ಯಾಂಪ್ ಪೊಲೀಸ್ (Police) ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.