ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನೆಮಾದ ಚಿತ್ರ ತಂಡಕ್ಕೆ ರಮ್ಯ ಲೀಗಲ್ ನೋಟಿಸ್!

Twitter
Facebook
LinkedIn
WhatsApp
47 1

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು

ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.

 

ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ತನ್ನ ಒಪ್ಪಿಗೆ ಇಲ್ಲದೇ ಯಾವ ದೃಶ್ಯ ಬಳಸಬಾರದು ಎಂದು ತಡೆಯಾಜ್ಞೆ ನೀಡಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೊ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟಿಸ್ನಲ್ಲಿ ಒತ್ತಾಯಿಸಿದ್ದಾರೆ.

ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ. ಜುಲೈ 21ರಂದು ಸಿನಿಮಾ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಅಷ್ಟೇ ಅಲ್ಲದೇ ರಮ್ಯಾ ಅವರು ಈ ಸಿನಿಮಾದ ಪ್ರೋಮೊ ಶೂಟ್ನಲ್ಲಿ ಭಾಗಿ ಆಗಿದ್ದರು. ಕೊನೆಯ ಕ್ಷಣದಲ್ಲಿ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಸಡನ್‌ ಆಗಿ ಲೀಗಲ್‌ ನೋಟಿಸ್‌ ನೀಡಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಕಿರುತೆರೆಗೂ, ಸಿನಿಮಾ ನಟನೆಗೂ ಯಾವುದೇ ವ್ಯತ್ಯಾಸವಿಲ್ಲ: ‘ಅಂಬುಜಾ’ ಚಿತ್ರದ ನಟಿ ರಜಿನಿ

‘ಅಂಬುಜಾ’ ಸಿನಿಮಾ ನಟಿ ಶುಭಾ ಪೂಂಜಾ ಅವರ 50ನೇ ಸಿನಿಮಾ ಆಗಿದ್ದು, ದೂರದರ್ಶನದಲ್ಲಿ ತಮ್ಮ ಛಾಪು ಮೂಡಿಸಿರುವ ಮತ್ತು ದಶಕಗಳ ಅನುಭವವನ್ನು ಹೊಂದಿರುವ ನಟಿ ರಜಿನಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಕುರಿತು ಮಾತನಾಡುವ ರಜಿನಿ, ಸಣ್ಣ ಪರದೆ ಮತ್ತು ಬೆಳ್ಳೆ ತೆರೆಯ ನಟನೆ ಕುರಿತು ಮಾತನಾಡುತ್ತಾರೆ. ‘ಕೆಲಸ, ಸಮಯ ಮತ್ತು ಶಾಟ್ ಆವರ್ತನದ ಮಾಧ್ಯಮ ಮಾತ್ರ ಭಿನ್ನವಾಗಿರುತ್ತದೆ ಎನ್ನುತ್ತಾರೆ. 

ರಜಿನಿ ಬೆಳ್ಳಿತೆರೆಯಲ್ಲಿ ಮಿಂಚಲು ಇಚ್ಛಿಸುತ್ತಾರಾ? ಎಂದು ಕೇಳಿದ ಪ್ರಶ್ನೆಗೆ ‘ಹೌದು, ನಿಜವಾಗಿ’, ಎಂದು ತಕ್ಷಣವೇ ಉತ್ತರಿಸುತ್ತಾರೆ. ‘ಜನಪ್ರಿಯ ಧಾರಾವಾಹಿಯಾದ ‘ಅಮೃತವರ್ಷಿಣಿ’ ತಯಾರಿಕೆಯ ಸಮಯದಲ್ಲಿಯೂ ಸಹ, ನಿರ್ದೇಶಕರಿಂದ ಹಲವಾರು ಆಫರ್‌ಗಳು ನನಗೆ ಬಂದಿದ್ದವು. ಆದರೆ, ಆ ಅವಕಾಶಗಳನ್ನು ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಹೇಳುತ್ತಾರೆ.

ಇದೀಗ, ಶ್ರೀನಿ ಹನುಮಂತರಾಜು ಅವರ ಮಹಿಳಾ ಪ್ರಧಾನ ಸಿನಿಮಾದ ಭಾಗವಾಗಲು ಮತ್ತು ಶೀರ್ಷಿಕೆಯ ಪಾತ್ರವನ್ನೇ ನಿಭಾಯಿಸಲು ನನ್ನನ್ನು ಸಂಪರ್ಕಿಸಿದಾಗ, ಒಪ್ಪಿಕೊಳ್ಳದೇ ಇರಲು ನನಗೆ ಯಾವುದೇ ಕಾರಣಗಳು ಇರಲಿಲ್ಲ. ನನ್ನ ಕನಸನ್ನು ನನಸು ಮಾಡಿದ ಅಂಬುಜಾ ಸಿನಿಮಾದ ಭಾಗವಾಗಲು ನನಗೆ ಸಂತೋಷವಾಯಿತು ಎಂದು ಅವರು ಹೇಳುತ್ತಾರೆ.

ಅಂಬುಜಾ ಸಿನಿಮಾದಲ್ಲಿ ರಜಿನಿ ಒಂದು ಬಲಿಷ್ಠವಾದ ಲಂಬಾಣಿ ಯುವತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಲಂಬಾಣಿ ಉಡುಗೆ 25 ಕಿಲೋಗ್ರಾಂಗಳಷ್ಟು ತೂಗುತ್ತದೆ. ಇದು ಒಂದು ವಿಶಿಷ್ಟವಾದ ಸವಾಲುಗಳನ್ನು ಒಡ್ಡುತ್ತದೆ. ನಾನು ನನ್ನ ಪಾತ್ರಕ್ಕೆ ಅಭಿನಯಿಸುವಾಗ ವೇಷಭೂಷಣದ ತೂಕದಿಂದಾಗಿ ನೃತ್ಯವು ಪ್ರಯಾಸದಾಯಕ ಕೆಲಸವಾಯಿತು. ಆದರೂ, ನಾನು ಪಾತ್ರಕ್ಕೆ ಅಗತ್ಯವಿರುವ ನ್ಯಾಯ ಸಲ್ಲಿಸಿದ್ದೇನೆ’ ಎನ್ನುತ್ತಾರೆ ರಜಿನಿ.

ಅಂಬುಜಾ ಜೊತೆಗೆ, ರಜಿನಿ ಇನ್ನೂ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ನಿರ್ಮಾಣದ ವಿವಿಧ ಹಂತಗಳಲ್ಲಿರುವ ‘ಅಸುರನ ಕೈಯಲಿ ಪಾರಿಜಾತ’ ಮತ್ತು ಇನ್ನೂ ಹೆಸರಿಸದ ಚಿತ್ರವೊಂದರಲ್ಲಿ ರಜಿನಿ ನಟಿಸುತ್ತಿದ್ದಾರೆ. ‘ನಾನು ಸದ್ಯ ಧಾರಾವಾಹಿಗಳು ಮತ್ತು ಚಲನಚಿತ್ರಗಳ ಕ್ಷೇತ್ರಗಳ ನಡುವಿನ ಈ ಸ್ಥಿತ್ಯಂತರವನ್ನು ಆನಂದಿಸುತ್ತಿದ್ದೇನೆ ಮತ್ತು ನಾನು ಎರಡೂ ಮಾಧ್ಯಮವನ್ನು ಉತ್ಸಾಹ ಮತ್ತು ಸಂತೋಷದಿಂದ ನಿರ್ವಹಿಸುತ್ತಿದ್ದೇನೆ’ ಎಂದು ಹೇಳುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ