ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾದರೆ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಎಂದು ಹೇಗೆ ತಿಳಿಯುವುದು? ಇಲ್ಲಿದೆ ಮಾಹಿತಿ
ಕಾಂಗ್ರೆಸ್ ಘೋಷಿಸಿದ ಹಲವಾರು ಯೋಜನೆಗಳಲ್ಲಿ 4ನೇ ಗ್ಯಾರೆಂಟಿ ಗೃಹಲಕ್ಷ್ಮಿ ಯೋಜನೆ. ಕರ್ನಾಟಕದಲ್ಲಿ 1.60 ಕೋಟಿ ಮಹಿಳೆಯರು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ್ದು, ಕೆಲವರ ಖಾತೆಗೆ ಈಗಾಗಲೇ ಹಣ ಜಮೆಯಾಗಿದೆ ಆದರೆ ಕೆಲವರ ಖಾತೆಗೆ ಜಮೆಯಾಗದೆ ಕಾಯುತ್ತಿದ್ದಾರೆ.
ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು. ಅದೇ ರೀತಿಯಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಚಿವರು ಮಹತ್ವಾಕಾಂಕ್ಷೆಯ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನಂತರ ಅವರು ಮಾತನಾಡಿದರು. ಈ ವೇಳೆ ಕಳೆದ 100 ದಿನಗಳಲ್ಲಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗಿದೆ. ಈಗಾಗಲೇ ಫಲಾನುಭವಿಗಳ ಖಾತೆಗೆ 2000 ರೂ. ಹಣ ಜಮೆ ಮಾಡಲಾಗುತ್ತಿದೆ. ನೀವು ಕೂಡ ಅರ್ಜಿ ಸಲ್ಲಿಸಿದ್ದು, ಇನ್ನೂ ಹಣ ಬಂದಿಲ್ಲ ಎಂದಾದರೆ, ಒಮ್ಮೆ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಿ. ನಿಮ್ಮ ಗೃಹಲಕ್ಷ್ಮಿ ನೋಂದಣಿ ಯಶಸ್ವಿಯಾಗಿದೆಯೇ ಎಂದು ಆನ್‌ಲೈನ್‌ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು
ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ.. ಲಕ್ಷಾಂತರ ಜನರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವುದರಿಂದ ಈ ನೋಂದಣಿ ಯಶಸ್ವಿಯಾಗಿದೆಯೇ, ಇನ್ನೂ ಪ್ರೊಸೆಸ್‌ನಲ್ಲಿದೆಯೇ ಇತ್ಯಾದಿ ಸಂದೇಹಗಳು ಸಾಕಷ್ಟು ಜನರಲ್ಲಿ ಇರುತ್ತದೆ. ಇದನ್ನು ಚೆಕ್ ಮಾಡುವುದು ಹೇಗೆಂಬ ವಿವರ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :
ಮೊದಲನೇ ಹಂತವಾಗಿ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
https://ahara.kar.nic.in/WebForms/Show_Village_List.aspx
ತದನಂತರ ನಿಮಗೆ ವಿಲೇಜ್ ಲಿಸ್ಟ್ ಓಪನ್ ಆಗುತ್ತದೆ. ಅದರಲ್ಲಿ, ಜಿಲ್ಲೆ ತಾಲೂಕು ಮತ್ತು ಪಂಚಾಯತ್ ಹಾಗೂ ಗ್ರಾಮ ಕ್ಲಿಕ್ ಮಾಡಿದಾಗ ನಿಮ್ಮ ಗ್ರಾಮದ ಎಲ್ಲಾ ಲಿಸ್ಟ್ ಫೈಲ್ ತೆರೆಯುತ್ತದೆ.