ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಜಿಲ್ಲಾವಾರು ಎರಡು ಹಂತದಲ್ಲಿ ನಡೆಯುವ ಮತದಾನ ಪ್ರಕ್ರಿಯೆ ಹೇಗಿರಲಿದೆ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ರಾಜ್ಯದಲ್ಲಿ ಜಿಲ್ಲಾವಾರು ಎರಡು ಹಂತದಲ್ಲಿ ನಡೆಯುವ ಮತದಾನ ಪ್ರಕ್ರಿಯೆ ಹೇಗಿರಲಿದೆ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ದೇಶಾದ್ಯಂತ ಒಟ್ಟು 543 ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಸಂಸತ್‌ನ ಕೆಳಮನೆಗೆ ಚುನಾವಣೆ ನಡೆಯಲಿದೆ. ಅದರಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

 

ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಮತದಾನ ನಡೆಯಲಿದ್ದು, ಈ ಪೈಕಿ ಮೊದಲ ಹಂತದಲ್ಲಿ ಏಪ್ರಿಲ್‌ 26 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜೂನ್‌ 04ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಮೊದಲ ಹಂತ

ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್‌ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26 ರಂದು ನಡೆಯಲಿದ್ದು, ಫಲಿತಾಂಶ ಜೂನ್‌ 04 ರಂದು ಬರಲಿದೆ.

ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.

2ನೇ ಹಂತ

ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್‌ 12 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದ್ದು, ಫಲಿತಾಂಶ ಜೂನ್‌ 4ರಂದು ಬರಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದ ಐದು ಸ್ಥಾನಗಳು ಪರಿಶಿಷ್ಟ ಜಾತಿಗಳಿಗೆ ಮತ್ತು ಎರಡು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿದ್ದು, ರಾಜ್ಯದಲ್ಲಿ 58,834 ಮತಗಟ್ಟೆಗಳಲ್ಲಿ 53.7 ಮಿಲಿಯನ್ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಅವರು 18-19 ವಯಸ್ಸಿನ ಬ್ರಾಕೆಟ್‌ನಲ್ಲಿ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿರುತ್ತಾರೆ.

ಕರ್ನಾಟಕದಲ್ಲಿ 2019 ರಲ್ಲೂ ಲೋಕಸಭಾ ಚುನಾವಣೆಗಳು ಏಪ್ರಿಲ್ 18 ಮತ್ತು ಏಪ್ರಿಲ್ 23 ರಂದು ಎರಡು ಹಂತಗಳಲ್ಲಿ ನಡೆದಿದ್ದವು. ಮಂಡ್ಯದಲ್ಲಿ ಅತಿ ಹೆಚ್ಚು 80.24% ಮತ್ತು ಬೆಂಗಳೂರು ದಕ್ಷಿಣದಲ್ಲಿ ಅತಿ ಕಡಿಮೆ (53.48%) ಮತದಾನವಾಗಿತ್ತು. 2019 ರಲ್ಲಿ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 28 ಲೋಕಸಭಾ ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು. ಉಳಿದ ಸ್ಥಾನವನ್ನು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ