ಸಾರಿಗೆ ಇಲಾಖೆಯು ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಯ ಗಡುವನ್ನು ಕಳೆದ ವರ್ಷ ನವೆಂಬರ್ ಮತ್ತು ಫೆಬ್ರವರಿಯಲ್ಲಿ ವಿಸ್ತರಿಸಿತ್ತು, ಆದರೆ ಇನ್ನೂ ಮುಂದೆ ಯಾವುದೇ ಕಾರಣಕ್ಕೂ ಗಡುವು ವಿಸ್ತರಿಸುವುದಿಲ್ಲ, ಹೀಗಾಗಿ ಮೇ 31ರ ಮೊದಲು ಎಚ್ಎಸ್ಆರ್ಪಿ ಅಳವಡಿಸಲು ಇಲಾಖೆ ಆದೇಶ ನೀಡಿದೆ.
HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
Twitter
Facebook
LinkedIn
WhatsApp
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. “ಈ ತನಕ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ಪಿ ನೋಂದಣಿ ಮಾಡಲಾಗಿದೆ. ಎರಡು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ” ಎಂದರು.ಫೆಬ್ರವರಿ ತಿಂಗಳ ವೇಳೆಗೆ ಸುಮಾರು 18 ಲಕ್ಷ ವಾಹನಗಳು ನೋಂದಣಿಯಾಗಿತ್ತು. ಏಪ್ರಿಲ್ ತಿಂಗಳ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗಿದೆ. ಆದರೆ ಇನ್ನೂ ಹೆಚ್ಚಿನ ಸಂಖ್ಯೆಯ ವಾಹನಗಳ ಪ್ಲೇಟ್ ಅಳವಡಿಕೆ ಬಾಕಿ ಇದೆ” ಎಂದು ಆಯುಕ್ತರು ಹೇಳಿದ್ದಾರೆ.
ಸಾರಿಗೆ ಇಲಾಖೆಯು ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿತ್ತು. ಸಾರಿಗೆ ಅಧಿಕಾರಿಗಳ ಪ್ರಕಾರ, ಸುಮಾರು ಎರಡು ಕೋಟಿ ವಾಹನಗಳು ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಪಡೆಯಬೇಕಾಗಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡದಿದ್ದರೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ನಂತರವೂ ಆಳವಡಿಕೆ ಮಾಡದಿದ್ದರೆ 1000 ರೂ. ದಂಡ ಹಾಕಲಾಗುತ್ತದೆ” ಎಂದು ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. “ಹೆಚ್ಎಸ್ಆರ್ಪಿ ಅಳವಡಿಕೆಗೆ ಮೇ ಅಂತ್ಯದ ತನಕ ಗಡುವು ನೀಡಲಾಗಿದೆ. ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಮುಗಿಯುವ ತನಕ ಕಾಯಲಾಗುತ್ತದೆ. ಬಳಿಕ ಸರ್ಕಾರದ ಜೊತೆ ಚರ್ಚಿಸಿ, ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡದಿದ್ದರೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ನಂತರವೂ ಆಳವಡಿಕೆ ಮಾಡದಿದ್ದರೆ 1000 ರೂ. ದಂಡ ಹಾಕಲಾಗುತ್ತದೆ” ಎಂದು ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. “ಹೆಚ್ಎಸ್ಆರ್ಪಿ ಅಳವಡಿಕೆಗೆ ಮೇ ಅಂತ್ಯದ ತನಕ ಗಡುವು ನೀಡಲಾಗಿದೆ. ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಮುಗಿಯುವ ತನಕ ಕಾಯಲಾಗುತ್ತದೆ. ಬಳಿಕ ಸರ್ಕಾರದ ಜೊತೆ ಚರ್ಚಿಸಿ, ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು
ಕರ್ನಾಟಕದ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. 2024ರ ಫೆಬ್ರವರಿಯಲ್ಲಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಮೇ 31, 2024ರ ತನಕ ಗಡುವು ನೀಡಲಾಗಿದೆ. ಸಾರಿಗೆ ಇಲಾಖೆಯ ಮಾಹಿತಿಯಂತೆ ಸುಮಾರು 2 ಕೋಟಿ ವಾಹನಗಳು ಇನ್ನೂ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ. ಆದರೆ, ಮೇ 31ರ ಗಡುವು ಮತ್ತೆ ವಿಸ್ತರಣೆ ಮಾಡುವುದಿಲ್ಲ. ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಪ್ರಯೋಗ ಮಾಡಲು ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಎರಡು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಮೊದಲು 2023ರ ನವೆಂಬರ್ 17ರ ತನಕ ಅವಕಾಶ ನೀಡಲಾಗಿತ್ತು. ಬಳಿಕ 2024ರ ಫೆಬ್ರವರಿ 17ರ ತನಕ ಗಡುವು ನೀಡಲಾಗಿತ್ತು. ವಾಹನ ಸವಾರರ ಒತ್ತಾಯದ ಮೇರೆಗೆ ಮೇ 31ರ ತನಕ ಗಡುವು ನೀಡಲಾಗಿದೆ. ಆದ್ದರಿಂದ ಮತ್ತೆ ಗಡುವು ವಿಸ್ತರಣೆ ಮಾಡುವುದಿಲ್ಲ ಎಂಬುದು ಅಧಿಕಾರಿಗಳು ಹೇಳಿಕೆ.