HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಣೆ; ಇಲ್ಲಿದೆ ಸಂಪೂರ್ಣ ಮಾಹಿತಿ...!
ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು. ವಿಧಾನ್ ಪರಿಷತ್ನಲ್ಲಿ (Vidhan Parishad) ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್ಎಸ್ಆರ್ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್ಲೈನ್ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.
ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.
2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದೆ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ HSRP ಆಗಿದೆ. ಹೀಗಾಗಿ ಯಾರ ವಾಹನ ಎಪ್ರಿಲ್ 2019ರ ಮೊದಲ ರಿಜಿಸ್ಟ್ರೇಶನ್ ಆಗಿದೆಯೋ ಆ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. HSRP ನಂಬರ್ ಪ್ಲೇಟ್ ಬುಕಿಂಗ್‌ನಲ್ಲಿ ನಗದು ವ್ಯವಹಾರವಿಲ್ಲ. ಆನ್‌ಲೈನ್ ಮೂಲಕವೇ ಬುಕಿಂಗ್, ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕು. ಕರ್ನಾಟಕದಲ್ಲಿ ವಾಹನ ಮಾಲೀಕರು HSRP ನಂಬರ್ ಪ್ಲೇಟ್ ಬುಕ್ ಮಾಡಲು ಅನುಸರಿಸಬೇಕಾದ ವಿಧಾನ ಇಲ್ಲಿದೆ
ಇಲ್ಲಿದೆ ನೋಡಿ ಹಂತ ಹಂತದ ಮಾಹಿತಿ:
- https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು.
- Book HSRP ಕ್ಲಿಕ್ ಮಾಡಿ.
- ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ
- ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ
- ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ
- HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ
- ಮೊಬೈಲ್ ನಂಬರ್‌ಗೆ ಬರವು ಒಟಿಪಿಯನ್ನು ನಮೂದಿಸಿ
- HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಿ