ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನಕಲಕುವ ಘಟನೆ ; ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ ಮತ್ತು ಕುಟುಂಬಸ್ಥರು!

Twitter
Facebook
LinkedIn
WhatsApp
ಮನಕಲಕುವ ಘಟನೆ ; ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ ಮತ್ತು ಕುಟುಂಬಸ್ಥರು!

ಜೈಪುರ: ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ  ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ, ಮಹಿಳೆಯರ ವಿರುದ್ಧದ ಅಪರಾಧಗಳು ರಾಜ್ಯದಲ್ಲಿ ಎಷ್ಟು ಹರಡಿವೆಯೆಂದರೆ ರಾಜಸ್ಥಾನವು ದಿನದಿಂದ ದಿನಕ್ಕೆ ನಾಚಿಕೆಪಡಬೇಕಾಗಿದೆ. ಮಹಿಳಾ ದೌರ್ಜನ್ಯದಲ್ಲಿ ರಾಜ್ಯವನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಲೂಟಿ ಮತ್ತು ಕಿರುಚಾಟವನ್ನು ನಿಮ್ಮ ಕಾಂಗ್ರೆಸ್ ಸರ್ಕಾರ ಕೇಳದಿರುವುದು ಯಾಕೆ ಎಂದು ಅಶೋಕ್ ಗೆಹ್ಲೋಟ್ ಅವರನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವಿಡಿಯೋವನ್ನು ಹಂಚಿಕೊಳ್ಳದಂತೆ ಪ್ರತಾಪಗಢ ಪೊಲೀಸರು ಮನವಿ ಮಾಡಿದ್ದಾರೆ.

“ಪ್ರತಾಪ್‌ಗಢದಲ್ಲಿ ಬುಡಕಟ್ಟು ಮಹಿಳೆಯೊಂದಿಗಿನ ಅನುಚಿತ ವರ್ತನೆಯ ವೀಡಿಯೊವನ್ನು ನೋಡಿದ ನಂತರ ಹೃದಯ ಮುರಿದಿದೆ. ಆರೋಪಿಗಳು ಕೃತ್ಯದ ವೀಡಿಯೋವನ್ನು ಬಹಿರಂಗವಾಗಿ ಮಾಡುತ್ತಿದ್ದಾರೆ. ಘಟನೆಯ ಹಿಂದಿರುವವರ ವಿರುದ್ಧ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರು ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಹಿಳೆಯರ ಅಸುರಕ್ಷತೆಯ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಶೋಕ್ ಗೆಹ್ಲೋಟ್ ಅವರ ರಾಜೀನಾಮೆಯನ್ನು ಯಾವಾಗ ಕೇಳುತ್ತೀರಿ? ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಯಾವಾಗ ಒತ್ತಾಯಿಸುತ್ತೀರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, ಪ್ರತಾಪಗಢದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಡಿಜಿಪಿ ಉಮೇಶ್ ಮಿಶ್ರಾ ನಿರ್ದೇಶನ ನೀಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist