ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನಿಗೆ ಹೆಂಡತಿ ಮೇಲೆ ಸಂಶಯ, ಗೃಹಿಣಿ ಆತ್ಮಹತ್ಯೆ, ಪತಿ ಸೇರಿದಂತೆ ಐವರ ಬಂಧನ!

Twitter
Facebook
LinkedIn
WhatsApp
ಗಂಡನಿಗೆ ಹೆಂಡತಿ ಮೇಲೆ ಸಂಶಯ, ಗೃಹಿಣಿ ಆತ್ಮಹತ್ಯೆ, ಪತಿ ಸೇರಿದಂತೆ ಐವರ ಬಂಧನ!

ಬೆಂಗಳೂರು, ನ.3: ಮನೆಯಲ್ಲಿ ಅ.26 ರಂದು ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು (Bengaluru) ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ.

ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು. ಐಶ್ವರ್ಯ ಆತ್ಮಹತ್ಯೆ ಬಳಿಕ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು.

ಮದುವೆ ಮಾಡಿಸಿದ್ದು ಸಂಬಂಧಿಕರೇ, ಮದುವೆ ಮುರಿದಿದ್ದೂ ಸಂಬಂಧಿಕರೇ

ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಐಶ್ವರ್ಯ ಮದುವೆಯಾಗಿದ್ದಳು. ಕುಟುಂಬಸ್ಥರ ನಿಶ್ಚಯದಂತೆ ಇವರಿಬ್ಬರ ಮದುವೆಯಾಗಿತ್ತು. ಐಶ್ವರ್ಯ ಯುಎಸ್​ಎ ನಲ್ಲಿ ಎಂಬಿಎ ಮಾಡಿದ್ದ ಪ್ರತಿಭಾವಂತೆಯಾಗಿದ್ದಳು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರು.

ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ರವೀಂದ್ರ ಆಡಿಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಈತನೇ ಮುಂದೆ ನಿಂತು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದ. ಆದರೆ ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಇದ್ದಿದ್ದರಿಂದ ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ದಾಯಾದಿಗಳು ಹುಳಿ ಹಿಂಡಿದ್ದಾರೆ.

ರವೀಂದ್ರ ಕುಟುಂಬ ಐಶ್ಯರ್ಯ ಚಾರಿತ್ರ್ಯ ವಧೆ ಮಾಡಿ ಪತಿ ರಾಜೇಶ್ ಕುಟುಂಬಕ್ಕೆ ಇಲ್ಲಸಲ್ಲದ ಕಟ್ಟುಕಥೆ ಹೇಳುತ್ತಿತ್ತು. ಅಷ್ಟೇ ಅಲ್ಲದೇ ಐಶ್ವರ್ಯಳ ಪೋಟೋಗಳನ್ನ ಕಳುಹಿಸಿ ನಿಮ್ಮ ಸೊಸೆ ಸರಿಯಿಲ್ಲ ಎಂದು ಕೆಟ್ಟದಾಗಿ ಬಿಂಬಿಸಿದ್ದರಂತೆ. ಇದರಿಂದಾಗಿ ರಾಜೇಶ್ ಕುಟುಂಬದ ಸದಸ್ಯರು ಪ್ರತಿನಿತ್ಯ ಐಶ್ವರ್ಯಳಿಗೆ ಕಿರುಕುಳ ನೀಡುತ್ತಿದ್ದರಂತೆ.

ಐಶ್ವರ್ಯ ಮಾವ ಗಿರಿಯಪ್ಪ, ಅತ್ತೆ ಸೀತ ಹಾಗೂ ಮೈದುನ ವಿಜಯ್ ಹಾಗೂ ಆತನ ಪತ್ನಿ ತಸ್ಮಿನ್​ ಕಿರುಕುಳ ನೀಡುತ್ತಿದ್ದರಂತೆ. ವರದಕ್ಷಿಣೆ ತರುವಂತೆಯೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಎಷ್ಟೇ ಕಿರುಕುಳ ನೀಡುತ್ತಿದ್ದರೂ ಗಂಡನಿಗಾಗಿ ಐಶ್ವರ್ಯ ಸುಮ್ಮನಿದ್ದಳು.

ತಾನು ದುಡಿದ ಹಣದಲ್ಲಿ ಗಂಡನಿಗೆ ಐಶಾರಾಮಿ ಸೂಪರ್ ಬೈಕ್ ಹಾಗೂ ಚಿನ್ನದ ಒಡವೆ ಸಹ ಕೊಡಿಸಿದ್ದಳಂತೆ. ಆದರೆ ಕುಟುಂಬಸ್ಥರ ಮಾತನ್ನ ಕೇಳಿ ಪತಿ ರಾಜೇಶ್ ಕೂಡ ಐಶ್ವರ್ಯಳನ್ನು ನಿಂದಿಸುತ್ತಿದ್ದನಂತೆ. ಇದರಿಂದ ಮನನೊಂದ ಐಶ್ವರ್ಯ, 20 ದಿನಗಳ ಹಿಂದೆ ತವರು ಸೇರಿದ್ದಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ