ಬುಧವಾರ, ಫೆಬ್ರವರಿ 28, 2024
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!-ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Hyundai Casper EV: ಮಾರುಕಟ್ಟೆಗೆ ಬರಲು ಸಜ್ಜಾದ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ;ಇಲ್ಲಿದೆ ವಿವರ

Twitter
Facebook
LinkedIn
WhatsApp
Hyundai Casper EV: ಮಾರುಕಟ್ಟೆಗೆ ಬರಲು ಸಜ್ಜಾದ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ;ಇಲ್ಲಿದೆ ವಿವರ

Hyundai Casper EV Price: ಹ್ಯುಂಡೈ ಮೋಟಾರ್ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಆರಂಭಿಸಿದೆ. ಈ ಹೊಸ ಕಾರಿನ ಹೆಸರು ಹ್ಯುಂಡೈ ಕಾಸ್ಪರ್ ಇವಿ. ಇದು ಬಜೆಟ್ ಸ್ನೇಹಿ ಎಲೆಕ್ಟ್ರಿಕ್ ಎಸ್‌ಯುವಿ ಆಗಿದೆ. 2024ರ ಕೊನೆಯ ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಎಂಟ್ರಿಕೊಡಲಿದೆ

ಈ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ. ಆಸ್ಟ್ರೇಲಿಯಾದಲ್ಲಿ ಹ್ಯುಂಡೈ ಕಾಸ್ಪರ್ ಇವಿ ಕಾರಿನ ಪರೀಕ್ಷಾರ್ಥವನ್ನು ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದ ಹಲವು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಸ್ಟ್ರೇಲಿಯಾದ ಬೀದಿಗಳಲ್ಲಿ ಈ ಕಾರಿನ್ನು ಟೆಸ್ಟ್ ಡ್ರೈವ್ ಮಾಡಲಾಗಿದೆ. ಹ್ಯುಂಡೈ ಕಾಸ್ಪರ್ ಇವಿ ಬೆಲೆ ಎಷ್ಟು, ಇದರ ವೈಶಿಷ್ಟ್ಯಗಳು ಏನು ಅನ್ನೋದನ್ನು ಇಲ್ಲಿ ತಿಳಿಯೋಣ.

ಜಾಲತಾಣಗಳಲ್ಲಿ ಸೋರಿಯಾಗಿರುವ ಫೋಟೊಗಳನ್ನು ಗಮನಿಸಿದರೆ ಹ್ಯುಂಡೈ ಕ್ಯಾಸ್ಪರ್ ಇವಿ ಬುಡ್ಡಾ ಎಲೆಕ್ಟ್ರಿಕ್ ಎಸ್‌ಯುವಿ ಎಂಬುದು ಸ್ಪಷ್ಟವಾಗಿದೆ. ಮೇಲಾಗಿ ಈಗಾಗಲೇ ಮಾರುಕಟ್ಟೆಯಲ್ಲಿರುವ ಕ್ಯಾಸ್ಪರ್ ವಿನ್ಯಾಸಕ್ಕೂ ಮುಂದಿನ ದಿನಗಳಲ್ಲಿ ಮಾರುಕಟ್ಟೆಗೆ ಬರಲಿರುವ ಇವಿ ಆವೃತ್ತಿಗೂ ದೊಡ್ಡ ವ್ಯತ್ಯಾಸಗಳು ಕಾಣುತ್ತಿಲ್ಲ.

ಕಾಸ್ಪರ್ ಇವಿ ವೃತ್ತಾಕಾರದ ಹೆಡ್‌ಲೈಟ್‌ಗಳು, ಪ್ಯಾರಾಮೆಟ್ರಿಕ್ ಪಿಕ್ಸೆಲ್‌ ಮಾದರಿಗಳೊಂದಿಗೆ ಎಲ್‌ಇಡಿ ಲೈಟ್ ಸಿಗ್ನೇಚರ್‌ಗಳು, ನಯವಾದ ಎಲ್‌ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಈ ಹ್ಯುಂಡೈ ಎಲೆಕ್ಟ್ರಿಕ್ ಕಾರು ಸ್ಪೋರ್ಟಿ ಅಲಾಯ್ ವೀಲ್ಸ್, ಸಿ ಪಿಲ್ಲರ್ ಮೌಂಟೆಡ್ ರೇರ್ ಡೋರ್ ಹ್ಯಾಂಡಲ್ಸ್, ಬ್ಲಾಕ್ಡ್‌ಔಟ್ ಫಂಕ್ಷನಲ್ ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುಕಟ್ಟೆಯಲ್ಲಿ ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ಪೆಟ್ರೋಲ್ ಆವೃತ್ತಿಗೆ ಹೋಲಿಸಿದರೆ ಹ್ಯುಂಡೈ ಕಾಸ್ಪರ್ ಇವಿಯ ವೀಲ್ ಬೇಸ್ ಸ್ವಲ್ಪ ಹೆಚ್ಚಾಗಿಯೇ ಇರಲಿದೆ. ಕ್ಯಾಬಿನ್ ಜಾಗ ಇನ್ನಷ್ಟು ವಿಶಾಲವಾಗಿರಲಿದೆ.

ಈ ಹೊಸ ಎಲೆಕ್ಟ್ರಿಕ್ ಎಸ್‌ಯುವಿಯಲ್ಲಿ ಸುಧಾರಿತ ಬ್ಯಾಟರಿ ಪ್ಯಾಕ್ ಅನ್ನು ಹ್ಯುಂಡೈ ಬಳಸಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಬ್ಯಾಟರಿಯ ವ್ಯಾಪ್ತಿಯು ಒಮ್ಮೆ ಜಾರ್ಜ್ ಮಾಡಿದರೆ 320 ಕಿಲೋ ಮೀಟರ್ ವರೆಗೆ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಸದ್ಯ ಈ ಬಗ್ಗೆ ಸ್ಪಷ್ಟತೆ ಇಲ್ಲ.

ಹ್ಯುಂಡೈ ಕಾಸ್ಟರ್ ಎಲೆಕ್ಟ್ರಿಕ್ ವಾಹನವು 10 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್‌ಸ್ಟ್ರುಮೆಂಟ್ ಕನ್ಸೋಲ್, ಹೀಟೆಡ್ ಫ್ರಂಟ್ ಸೀಟ್ಸ್, ಆರ್ಟಿಫಿಶಿಯರ್ ಅಪ್ಹೋಲ್‌ಸ್ಟರಿ, ವೆಂಟಿಲೇಟೆಡ್ ಡ್ರೈವರ್ ಸೀಟ್, ಸಿಂಗಲ್ ಪ್ಯಾನ್ ಸನ್‌ರೂಫ್ ಮುಂತಾದ ವೈಶಿಷ್ಟ್ಯಗಳ ಇರಲಿವೆ ಎಂದು ವರದಿಯಾಗಿದೆ. ಮೂಡ್ ಲ್ಯಾಂಪ್, ಬ್ಲೂಲಿಂಕ್ ಕನೆಕ್ಟಿವಿಟಿಯಂತಹ ಹಲವಾರು ವೈಶಿಷ್ಟ್ಯಗಳು ಈ ಹೊಸ ಕಾರಿನಲ್ಲಿವೆ. ಆಸ್ಟ್ರೇಲಿಯಾ ಮಾರುಕಟ್ಟೆಯಲ್ಲಿ ಹ್ಯುಂಡೈ ಕಾಸ್ಪರ್ ಇವಿ ಬೆಲೆ 40 ಸಾವಿ ಎಯುಡಿ ಆಗಿರಬಹುದು. ಭಾರತೀಯ ಕರೆನ್ಸಿಯಲ್ಲಿ ಸುಮಾರು 21.55 ಲಕ್ಷ ರೂಪಾಯಿ

ಹೊಸ ಹ್ಯುಂಡೈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಯಾವಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ? ಇದರ ಸ್ಪಷ್ಟವಾದ ವೈಶಿಷ್ಟ್ಯಗಳೇನು, ಭಾರತದಲ್ಲಿ ಯಾವಾಗ ಬಿಡುಗಡೆಯಾಗುತ್ತದೆ? ಈ ಎಲ್ಲಾ ಪ್ರಶ್ನೆಗಳಿಗೆ ಸದ್ಯಕ್ಕೆ ಸ್ಪಷ್ಟವಾದ ಉತ್ತರವಿಲ್ಲ. ಸದ್ಯದಲ್ಲೇ ಹ್ಯುಂಡೈ ಮೋಟಾರ್ ಹೊಸ ಎಲೆಕ್ಟ್ರಿಕ್ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು