ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ಬಿಜೆಪಿ ರಾಜ್ಯದಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ; ಮಾಜಿ ಸಚಿವ ರಾಜೂಗೌಡ!

Twitter
Facebook
LinkedIn
WhatsApp
ನಾನು ಬಿಜೆಪಿ ರಾಜ್ಯದಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ; ಮಾಜಿ ಸಚಿವ ರಾಜೂಗೌಡ!

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಪಕ್ಷದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ವಿ ಸೋಮಣ್ಣ ರಾಜ್ಯಾಧ್ಯಕ್ಷ ಹುದ್ದೆ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಮಾಜಿ ಶಾಸಕ ರಾಜೂಗೌಡ(Raju gowda) ಸಹ ತಮನ್ನ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್​ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಇಂದು (ಸೆಪ್ಟೆಂಬರ್ 12) ಯಾದಗಿರಿಯ ಹುಣಸಗಿ ಪಟ್ಟಣದಲ್ಲಿ ಮಾತನಾಡಿದ ರಾಜೂಗೌಡ, ಬಿಜೆಪಿ ರಾಜ್ಯಾಧ್ಯಕ್ಷನಾಗುವ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನಾನು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ. ಯಾವ ಮುಖ ಇಟ್ಟುಕೊಂಡು ನಾನು ಕಾಂಗ್ರೆಸ್​ಗೆ ಹೋಗಬೇಕು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರಿಂದ ಕಾಂಗ್ರೆಸ್​ಗೆ ಹೋಗಲ್ಲ ಎನ್ನುವ ಅರ್ಥದಲ್ಲಿ ಹೇಳಿದರು.

ವಾಜಪೇಯಿ, ಇಂದಿರಾ ಗಾಂಧಿ, ದೇವೇಗೌಡ, ಸಿದ್ದರಾಮಯ್ಯ ಸೋತಿಲ್ವಾ? ಸೋತಾಗ ನಿಷ್ಠೆಯಿಂದ ಕೆಲಸ ಮಾಡಿದರೆ ಉನ್ನತ ಹುದ್ದೆ ಸಿಗುತ್ತದೆ. ನಾನು ಪಾರ್ಟ್ ಟೈಂ ರಾಜಕಾರಣಿ. ಚುನಾವಣೆಯಲ್ಲಿ ಸೋತು ಪಕ್ಷ ಕಷ್ಟದಲ್ಲಿದ್ದಾಗ ಜೊತೆಗೆ ಇರಬೇಕು. ದಿನದ 24 ಗಂಟೆ ನಾನು ರಾಜಕೀಯ ಮಾಡಲ್ಲ. ನಾನಗೆ ಒಕ್ಕಲುತನ ಮಾಡುವುದು ಅಂದ್ರೆ ಇಷ್ಟ. ಆದರೂ ರಾಜಕೀಯದಲ್ಲಿ ಇದ್ದಿದ್ದಕ್ಕೆ ರಾಜಕೀಯ ಮಾಡುತ್ತಿದ್ದೇನೆ. ಚುನಾವಣೆಯಲ್ಲಿ ಸೋತು ಪಕ್ಷ ಕಷ್ಟದಲ್ಲಿದ್ದಾಗ ಜೊತೆಗೆ ಇರಬೇಕು. ಇಂತಹ ಸಂದರ್ಭಗಳಲ್ಲಿ ಪಕ್ಷದ ಜತೆ ಇದ್ದರೆ ಮುಂದೆ ಉಜ್ವಲ ಭವಿಷ್ಯ ಇರುತ್ತದೆ ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿ, ಮೈತ್ರಿ ಆಗುತ್ತಿದೆ ಎಂದು ಮಾಧ್ಯಮದಲ್ಲಿ ನೋಡುತ್ತಿದ್ದೇವೆ. ನಮ್ಮ ರಾಜ್ಯದ ನಾಯಕರು ಈಶ್ವರಪ್ಪ ಸಾಹೇಬ್ರು ಹೇಳಿಕೆ ನೀಡಿದ್ದಾರೆ. ರಾಜ್ಯ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧ. ಮೈತ್ರಿ ಬಗ್ಗೆ ನಾನು ಯಾವುದೇ ವಿರೋಧ ವ್ಯಕ್ತಪಡಿಸಲ್ಲ. ಮೈತ್ರಿ ಬಗ್ಗೆ ಇನ್ನೂ ಸ್ಪಷ್ಟವಾಗಿ ಮಾಹಿತಿ ಇಲ್ಲ. ಏನೇ ಮಾಡಿದರೂ ನಮ್ಮ ಹೈಕಮಾಂಡ್ ನಾಯಕರು ಯೋಚನೆ ಮಾಡಿ ಮಾಡುತ್ತಾರೆ. ನಮ್ಮ ಭಾಗದಲ್ಲಿ ಮೈತ್ರಿಯಿಂದ ನಮಗೆ ಅಷ್ಟೊಂದು ಎಫೆಕ್ಟ್ ಆಗಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಅಸಮಾಧಾನಿತ ನಾಯಕರೊಂದಿಗೆ ಯಡಿಯೂರಪ್ಪ ಚರ್ಚೆ ಬಗ್ಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಇದ್ದರೂ ಅವರಿಗೆ ಅಷ್ಟೇ ಗೌರವ ಕೊಡುತ್ತೇವೆ. ಯಡಿಯೂರಪ್ಪ ಸಾಹೇಬರು ಪ್ರತಿ ವಾರ ಎಲ್ಲರಿಗೂ ಫೋನ್ ಮಾಡಿ ಎನ್ಮಾಡ್ತಿದ್ದೀಯಾ ಬಾರೋ ಟೀ ಕುಡಿ ಬಾ ಅಂತ ಮಾತಾಡ್ತಾರೆ. ಪ್ರಧಾನಿ ಮೋದಿ ಸಾಹೇಬ್ರನ್ನ ಮತ್ತೋಮ್ಮೆ ಪ್ರಧಾನಿ‌ ಮಾಡುವುದು ನಮ್ಮ ಕನಸು. ಹೀಗಾಗಿ ಎಲ್ಲರು ಸಹಕರಿಸಬೇಕು ಎಂದು ಹೇಳುತ್ತಾರೆ. ಇದರಿಂದ ರೇಣುಕಾಚಾರ್ಯ ಅವರನ್ನ ಕರೆಸಿ ಮಾತಾಡಿದ್ದಾರೆ. ನಮ್ಮಲ್ಲಿರುವ ಅಸಮಾಧಾನ ಸರಿಪಡಿಸುವಂತ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist