ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ; ಡಿವಿ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಈ ಹಿಂದೆ ಚುನಾವಣಾ ರಾಜಕೀಯದಿಂದ ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ (DV Sadananda Gowda) ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಅದಾದ ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದಿದ್ದಾರೆ.
ಇನ್ನು ಇತ್ತೀಚೆಗೆ ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ್ದ ವಿರೋಧ ಪಕ್ಷದ ನಾಯಕ ಆರ್ ಅಶೋಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಇನ್ನೊಂದು ಹಂತದ ಮಾತುಕತೆಯ ಬಳಿಕ ಅಂತಿಮಗೊಳ್ಳಲಿದೆ ಎಂದು ಹೇಳಿದ್ದರು. ಬಳಿಕ ಕೆಲ ತಿಂಗಳ ಹಿಂದೆ ಹಾಲಿ ಸಂಸದ ಸದಾನಂದ ಗೌಡ ಬಹಳ ಭಾರದ ಮನಸ್ಸಿನಿಂದ ಚುನಾವಣಾ ರಾಜಕೀಯದಿಂದ ನಿವೃತ್ತರಾಗುತ್ತಿರುವುದಾಗಿ ಘೋಷಣೆ ಮಾಡಿದ್ದರು. ಅವರ ಮನವೊಲಿಸಿ ಪುನಃ ಟಿಕೆಟ್ ನೀಡುವ ಚರ್ಚೆ ನಡೆದಿದೆಯೇ ಎಂದು ಕೇಳಿದ ಪ್ರಶ್ನೆಗೆ ಅಶೋಕ ಸ್ಪಷ್ಟವಾದ ಉತ್ತರ ನೀಡಲಿಲ್ಲ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ವರಿಷ್ಠರಿಗೆ ತಿಳಿಸಲಾಗಿದೆ, ಕೇಂದ್ರೀಯ ನಾಯಕರು ಸಹ ಬಂದು ಸಮೀಕ್ಷೆ ನಡೆಸಿದ್ದಾರೆ ಎಂದಿದ್ದರು.