ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡಿಸಲು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ; ಬಿ ಎಸ್ ಯಡಿಯೂರಪ್ಪ

Twitter
Facebook
LinkedIn
WhatsApp
ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡಿಸಲು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ; ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಅವರ ಪುತ್ರ‌‌ ಕಾಂತೇಶ್​ಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್​​ ನೀಡಬೇಕೆಂದು ಅವರ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಶಿವಮೊಗ್ಗದ ನಿವಾಸದಲ್ಲಿ ಭೇಟಿಯಾಗಿ ಮನವಿ ಮಾಡಿದರು. ಈ ವೇಳೆ ಕಾಂತೇಶ್​ಗೆ ಟಿಕೆಟ್ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.

ನಂತರ ತಮ್ಮ‌ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬಿಎಸ್​ವೈ, ”ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿ‌‌ಮೀರಿ ಪ್ರಯತ್ನ ಮಾಡುತ್ತೇನೆ. ಈಗಲೂ ಕಾಲ ಮಿಂಚಿಲ್ಲ, ಈಶ್ವರಪ್ಪನವರು ನನ್ನ ಜೊತೆ ಬಂದರೆ, ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮಾತನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದ ಆಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ” ಎಂದರು.

”ಎಲ್ಲಾ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧನಿದ್ದೇನೆ. ಈಶ್ವರಪ್ಪ ಬಂದರೆ ಜೊತೆಗೆ ಕರೆದುಕೊಂಡು ಮಾತನಾಡಬಹುದು. ನಿಮ್ಮ ಮೂಲಕ ಅವರಿಗೆ ಈ ಬಗ್ಗೆ ಮನವಿ ಮಾಡುತ್ತಿದ್ದೇನೆ. ಈಶ್ವರಪ್ಪನವರೇ ದಯವಿಟ್ಟು ಬನ್ನಿ, ದೆಹಲಿಗೆ ಕರೆದುಕೊಂಡು ಹೋಗುತ್ತೇನೆ” ಎಂದು ತಿಳಿಸಿದರು. ”ಚುನಾವಣೆ ಸಮಿತಿ ಸಭೆಯನ್ನು ನಾಳೆ ಮತ್ತೆ ಕರೆಯಬಹುದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಬಹುದು. ಹಾಗಾಗಿ, ಒಂದು ದಿನ ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಈಗ ಬೆಂಗಳೂರಿಗೆ ಹೋಗುತ್ತಿದ್ದೇನೆ” ಎಂದು ಇದೇ ವೇಳೆ ಯಡಿಯೂರಪ್ಪ ಮಾಹಿತಿ ನೀಡಿದರು.‌

ಯಡಿಯೂರಪ್ಪ ಮೇಲೆ ವಿಶ್ವಾಸವಿದೆ: ”ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶನಿವಾರ ಶಿವಮೊಗ್ಗದಲ್ಲಿ ತಿಳಿಸಿದ್ದರು. ”ನಾವು ಕಾಂತೇಶ್ ಸ್ಪರ್ಧೆಗೂ ಮುನ್ನ ಯಡಿಯೂರಪ್ಪ ಬಳಿ ಮಾತನಾಡಿದ್ದೆವು. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಅವರು ಹೇಳಿದ್ದರು. ಹಾಗಾಗಿ, ಅವರು ಆ ಮಾತನ್ನು ತಪ್ಪುವುದಿಲ್ಲ ಎಂಬ ವಿಶ್ವಾಸವಿದೆ. ಹಾವೇರಿ ಕ್ಷೇತ್ರದಿಂದ ಬೇರೆಯವರು ಸ್ಪರ್ಧಿಸುತ್ತಾರೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಂದ ಕಾರಣ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ” ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist