ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!

Twitter
Facebook
LinkedIn
WhatsApp
ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!

ಬಾಲಿವುಡ್ ನಟ ಸಲ್ಮಾನ್​ ಖಾನ್(Salman Khan) ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು.

2023 ರಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.

ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ