ಬುಧವಾರ, ಡಿಸೆಂಬರ್ 11, 2024
S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ

Twitter
Facebook
LinkedIn
WhatsApp
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ

ನವದೆಹಲಿ: ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ. ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದರೆ ಅದು ಮುಸ್ಲಿಮರೇ ಎಂದು ಅರ್ಥೈಸಿಕೊಳ್ಳುವುದೇಕೆ? ನಾನು ಯಾವಾಗ ಹಿಂದೂ ಮತ್ತು ಮುಸ್ಲಿಂ ಎಂದು ಭೇದಭಾವದ ರಾಜಕೀಯ ಮಾಡುತ್ತೇನೋ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ನವರು ನಿಮ್ಮ ಚಿನ್ನ ಮತ್ತು ಆಸ್ತಿಯನ್ನು ಹೆಚ್ಚು ಮಕ್ಕಳಿರುವವರಿಗೆ ನೀಡಲು ಹವಣಿಸುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿದ್ದು, ಹೇಳಿಕೆ ಸಂಬಂಧ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಮೋದಿಯವರು ವಿವಾದ ಸಂಬಂಧ ಸ್ಪಷ್ಟನೆ ನೀಡಿದ್ದಾರೆ.

ನಾನು ವೋಟ್​ ಬ್ಯಾಂಕ್​ ರಾಜಕಾರಣ ಮಾಡಲು ಇಲ್ಲಿ ಬಂದಿಲ್ಲ, ಸಬ್​ ಕಾ ಸಾಥ್ ಸಬ್​ ಕಾ ವಿಕಾಸ್ ಎಂದು ಎಲ್ಲಾ ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವುದೇ ನನ್ನ ಗುರಿ. ಆದರೂ, ನನ್ನ ಮೇಲಿನ ಆಪಾದನೆ ಕೇಳಿ ಬಂದಾಗ ನನಗೆ ಆಘಾತವಾಯಿತು. ಹೆಚ್ಚು ಮಕ್ಕಳನ್ನು ಹೊಂದಿರುವವರ ಬಗ್ಗೆ ನಾನು ಮಾತನಾಡಿದಾಗ ನಾನು ಮುಸ್ಲಿಮರ ಬಗ್ಗೆಯೇ ಮಾತನಾಡುತ್ತಿದ್ದೇನೆಂದು ನಿಮಗೆ ಹೇಳಿದವರು ಯಾರು?

 

ಇಂತಹ ಪರಿಸ್ಥಿತಿ ಎಲ್ಲ ಬಡ ಕುಟುಂಬಗಳಲ್ಲೂ ಇದೆ. ಸಾಮಾಜಿಕ ವರ್ತುಲಗಳ ಹೊರತಾಗಿ ಎಲ್ಲಿ ಬಡತನ ಇರುತ್ತದೋ ಅಲ್ಲಿ ಸಹಜವಾಗಿ ಹೆಚ್ಚು ಮಕ್ಕಳಿರುತ್ತಾರೆ. ಅದು ಹಿಂದೂವೋ ಅಥವಾ ಮುಸ್ಲಿಂ ಎಂದೋ ನಾನು ಎಲ್ಲೂ ಹೇಳಿಲ್ಲ. ಯಾರಿಗೆ ಎಷ್ಟು ಮಕ್ಕಳನ್ನು ಸಾಕಲು ಸಾಧ್ಯವೋ ಅಷ್ಟು ಮಕ್ಕಳನ್ನು ಮಾತ್ರ ಹೊಂದಬೇಕು ಎಂದು ನಾನು ಹೇಳಿದ್ದೇನೆ. ಸರ್ಕಾರವೇ ಮಕ್ಕಳನ್ನು ಸಾಕುವ ಪರಿಸ್ಥಿತಿ ತರಬೇಡಿ ಎಂದು ಹೇಳಿದ್ದೇನೆ ಹೊರತು ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಇದೇ ವೇಳೆ 2002ದಲ್ಲಿ ತಾವು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ನಡೆದ ಗೋಧ್ರಾ ಘಟನೆಯನ್ನು ಉಲ್ಲೇಖಿಸಿದ ಅವರು, ಈ ಘಟನೆ ಬಳಿಕ ನನ್ನ ವಿರೋಧಿಗಳನ್ನು ನನ್ನನ್ನು ಮುಸ್ಲಿಂ ವಿರೋಧಿ ಎಂದು ಕತೆ ಕಟ್ಟಿದ್ದಾರೆ. ಇದು ಮುಸ್ಲಿಮರಿಗೆ ಸಂಬಂಧಿಸಿದ ವಿಷಯವಲ್ಲ. ಮೋದಿ ಮುಸ್ಲಿಮರಿಗಾಗಿ ಏನನ್ನೇ ಮಾಡಿದರೂ ಅದು, ಇದು ಎಂದು ಮಾತನಾಡುವವರು ಇದ್ದಾರೆ.

ನನ್ನ ಮನೆಯ ಸುತ್ತಮುತ್ತ ಬಹಳಷ್ಟು ಮುಸ್ಲಿಮರ ಕುಟುಂಬಗಳಿವೆ. ನಮ್ಮ ಮನೆಯಲ್ಲಿ ಈದ್ ಸೇರಿದಂತೆ ಅನೇಕ ಹಬ್ಬಗಳನ್ನು ಆಚರಿಸುತ್ತೇವೆ. ಈದ್ ದಿನದಂದು ನಾವು ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ. ನೆರೆಯ ಮುಸ್ಲಿಂ ಕುಟುಂಬಗಳ ಮನೆಯಿಂದ ನಮ್ಮ ಮನೆಗೆ ಆಙಾರ ತಂದು ಕೊಡುತ್ತಿದ್ದರು. ಅಂತಹ ಪರಿಸರದಲ್ಲಿ ಬೆಳೆದವನು ನಾನು. ಇಂದಿಗೂ ನನ್ನ ಗೆಳೆಯರಲ್ಲಿ ಅನೇಕ ಮುಸ್ಲಿಮರಿದ್ದಾರೆ. ಆದರೆ, ಗೋಧ್ರಾ ಘಟನೆಯ ಬಳಿಕ ನನ್ನ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಬಳಿಕ ಈ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರು ಮೋದಿಗೆ ಮತ ಹಾಕುತ್ತಾರಾ ಎಂಬ ಪ್ರಶ್ನೆಗೆ ಈ ದೇಶದ ನಾಗರಿಕರು ನನಗೆ ಮತ ಹಾಕುತ್ತಾರೆ ಎಂದು ಉತ್ತರಿಸಿದರು.

ಯಾವ ದಿನ ನಾನು ಹಿಂದೂ-ಮುಸ್ಲಿಂ ಬೇಧಭಾವ ಪ್ರಾರಂಭಿಸುತ್ತೇನೋ ಅಂದು ನಾನು ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯನಲ್ಲ ಎಂದು ಖಡಕ್ ಆಗಿ ತಿಳಿಸಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist