ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ನಿರ್ಮಲಾ ಸೀತಾರಾಮನ್

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ನಿರ್ಮಲಾ ಸೀತಾರಾಮನ್

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಹಾಗಾಗಿ ನಾನು ಸ್ಪಧಿಸುವುದಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ , ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕನ್ಸಾಲಿಡೇಟೆಡ್ ಫಂಡ್ ಅಲ್ಲ ಎಂದರು. ಏಪ್ರಿಲ್ 19 ರಿಂದ ಪ್ರಾರಂಭವಾಗುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಲವಾರು ಅಸ್ತಿತ್ವದಲ್ಲಿರುವ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸಿದೆ. ಇವರಲ್ಲಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ.

ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಮಧ್ಯಪ್ರದೇಶ ಲೋಕಸಭಾ ಚುನಾವಣೆ(Lok Sabha Election)ಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ಸಹ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಸುರೇಶ್ ಪಚೌರಿ ಅವರನ್ನೂ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಮಾಜಿ ಸಿಎಂ ಸಂಸದೆ ಹಾಗೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕಿ ಉಮಾಭಾರತಿ ಹೆಸರಿಲ್ಲ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಹಲವು ನಾಯಕರೂ ಸ್ಥಾನ ಪಡೆದಿದ್ದಾರೆ. ಸಿಎಂ ಮೋಹನ್ ಯಾದವ್, ವಿಡಿ ಶರ್ಮಾ, ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಉಪಮುಖ್ಯಮಂತ್ರಿ ಜಗದೀಶ್ ದೇವ್ರಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಅವರ ಹೆಸರುಗಳು ಸೇರಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ