ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ;ಸತೀಶ್ ಜಾರಕಿಹೊಳಿ

Twitter
Facebook
LinkedIn
WhatsApp
ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಉದಯ ಅರೆಸ್ಟ್!

2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು PWD ಸಚಿವ ಸತೀಶ್ ಜಾರಕಿಹೊಳಿ (satish jarkiholi) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಬೇರೆಯವರು ಕೇಳೋದು ಅವರವರ ಇಷ್ಟ. ನಾನು 2028ರಲ್ಲಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ. ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಉದ್ಭವಿಸಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಒಂದು ರಾಜ್ಯದಲ್ಲಿ ಇನ್ನೊಂದು ರಾಜ್ಯದ ಬಗ್ಗೆ ಟೀಕಿಸುವುದು ಸಹಜ. ಪ್ರಧಾನಿ ಮೋದಿ ಆರೋಪ ಮಾಡಿದ್ದನ್ನು ಒಪ್ಪಬೇಕು ಅಂತಿಲ್ಲ. ನಾವು BJP ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ನಾವು ಬಿಜೆಪಿ ವಿರುದ್ಧ ಆರೋಪ ಮಾಡಿದಾಗ ಒಪ್ಪಿಕೊಂಡಿದ್ರಾ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಬ್ರೇಕ್​ಫಾಸ್ಟ್​ ಮೀಟಿಂಗ್​ಗೆ ಗೈರು ವಿಚಾರವಾಗಿ ಮಾತನಾಡಿದ ಅವರು, ಅನಾರೋಗ್ಯದ ಕಾರಣ ಸಭೆಗೆ ಹೋಗಲು ಆಗಲಿಲ್ಲ. ಸಭೆಗೆ ಗೈರಾಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೆ. ಮೀಟಿಂಗ್​ಗೆ ಹೋಗದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾರೂ ಬಹಿರಂಗ ಹೇಳಿಕೆ ನೀಡಬಾರದು ಅನ್ನೋದು ಸರಿ ಇದೆ ಎಂದು ಹೇಳಿದ್ದಾರೆ.

ಸಚಿವ ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲಿ ನಾಡಿನ ಸಿಎಂ ಆಗಲು ಅರ್ಹತೆಗಳಿವೆ ಎಂದು ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಿನ್ನೆ ಹೇಳಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ