ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ:​ ಯುವರಾಜ್ ಸಿಂಗ್

Twitter
Facebook
LinkedIn
WhatsApp
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ:​ ಯುವರಾಜ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕ್ರಿಕೆಟರ್​, ಸಿಕ್ಸರ್ಸ್​ ಕಿಂಗ್​​ ಯುವರಾಜ್​​ ಸಿಂಗ್​ ಸ್ಪರ್ಧಿಸಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಎಂಬ ಗಾಳಿಸುದ್ದಿ ಠುಸ್ಸಾಗಿದೆ. ‘ತಾವು ರಾಜಕೀಯಕ್ಕೆ ಬರುವುದಿಲ್ಲ’ ಎಂದು ಸ್ವತಃ ಯುವರಾಜ್​ ಸ್ಪಷ್ಟನೆ ನೀಡಿದ್ದಾರೆ.

ಭಾರತದ ಮಾಜಿ ಆಲ್‌ರೌಂಡರ್ ಯುವಿ ಅವರು, ಚುನಾವಣಾ ಅಖಾಡಕ್ಕೆ ಪ್ರವೇಶಿಸಬಹುದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ವರದಿಗಳು ಹರದಾಡುತ್ತಿದ್ದವು. ಆದರೆ, ಇದೆಲ್ಲವನ್ನೂ ಅವರು ಶುಕ್ರವಾರ ತಳ್ಳಿಹಾಕಿದ್ದಾರೆ.

“ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ನಾನು ಗುರುದಾಸ್‌ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಾನು ನಡೆಸುತ್ತಿರುವ @YOUWECAN ಫೌಂಡೇಶನ್​ನಿಂದ ಜನ ಸೇವೆಯನ್ನು ಮುಂದುವರಿಸುತ್ತೇನೆ. ಇದಕ್ಕಾಗಿ ನಾನು ರಾಜಕೀಯಕ್ಕೆ ಬರುವ ಅಗತ್ಯವಿಲ್ಲ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ನಮಗಿರುವ ಸಾಮರ್ಥ್ಯ ಆಧಾರದ ಮೇಲೆ ಅತ್ಯುತ್ತಮವಾದ ಬದಲಾವಣೆಯನ್ನು ನಾವು ಒಟ್ಟಿಗೆ ಮುಂದುವರಿಸೋಣ. ಲೋಕಸಭೆ ಚುನಾವಣೆಯಲ್ಲಿ ತಾವು ಯಾವ ಪಕ್ಷದಿಂದಲೂ ಕಣಕ್ಕಿಳಿಯುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಾಲಿವುಡ್​ ನಟ ಸನ್ನಿ ಡಿಯೋಲ್​ ಗುರುದಾಸ್​ಪುರ ಕ್ಷೇತ್ರದ ಬಿಜೆಪಿ ಸಂಸದರಾಗಿ ಪ್ರತಿನಿಧಿಸುತ್ತಿದ್ದಾರೆ. ಈ ಬಾರಿ ಬದಲಾವಣೆ ಬಯಸಿರುವ ಕಮಲ ಪಕ್ಷ ಕ್ರಿಕೆಟರ್​ ಯುವರಾಜ್​ ಸಿಂಗ್​ರನ್ನು ಕಣಕ್ಕಿಳಿಸುವ ಬಗ್ಗೆ ಪ್ರಯತ್ನ ನಡೆಸಿತ್ತು. ತಿಂಗಳ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಯುವರಾಜ್ ಸಿಂಗ್ ಭೇಟಿಯಾದ ನಂತರ ಸ್ಪರ್ಧೆಯ ಬಗ್ಗೆ ಮಾತುಗಳು ಶುರುವಾಗಿದ್ದವು.

ಸಂಸತ್ತಿನ ಕಲಾಪಗಳಿಗೆ ಸನ್ನಿ ಡಿಯೋಲ್​ ಗೈರಾಗುತ್ತಿರುವುದನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟೀಕಿಸಿದ್ದರು. ರಾಜಕೀಯ ಎಂದರೆ ಜನರ ಸೇವೆ ಮಾಡುವುದು ಮತ್ತು ಹಗಲಿರುಳು ಅವರಿಗೆ ಲಭ್ಯವಿರುವುದು ಎಂದು ತಿವಿದಿದ್ದರು.

ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಗುರುವಾರ (ಫೆ.29) ನಡೆದಿತ್ತು. ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಕುರಿತು ಚರ್ಚೆ ನಡೆಸಲಾಗಿದೆ. ಇದರ ಜೊತೆಗೆ ಗುರುದಾಸ್‌ಪುರದಿಂದ ಯುವರಾಜ್ ಸಿಂಗ್ ಅಥವಾ ಸ್ಟಾರ್​ ನಟ ಅಕ್ಷಯ್ ಕುಮಾರ್ ಅವರನ್ನು ಕಣಕ್ಕಿಳಿಸಬಹುದು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸವಾಲಾಗಿರುವ ಕ್ಷೇತ್ರಗಳಿಗೆ ಮೊದಲು ಟಿಕೆಟ್​ ಘೋಷಣೆ ಮಾಡುವುದು, ಅಲ್ಲಿ ಪಕ್ಷ ಹೆಚ್ಚಿನ ಪ್ರಚಾರ ನಡೆಸಲು ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ಹಾಕಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ