ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಧರಿಸಿದ್ದು ಹುಲಿ ಉಗುರು ಕೃತಕ : ನಟ ನಿಖಿಲ್ ಕುಮಾರಸ್ವಾಮಿ!

Twitter
Facebook
LinkedIn
WhatsApp
ನಾನು ಧರಿಸಿದ್ದು ಹುಲಿ ಉಗುರು ಕೃತಕ : ನಟ ನಿಖಿಲ್ ಕುಮಾರಸ್ವಾಮಿ!

ಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಅರಣ್ಯಾ ಇಲಾಖೆಯ ಅಧಿಕಾರಿಗ ಕಚೇರಿಗೆ ಸಾಲು ಸಾಲು ದೂರುಗಳು ಬರುತ್ತಿವೆ. ಜನತಾ ಪಕ್ಷದ ನಾಗೇಶ್ ಅವರು ಜಗ್ಗೇಶ್ ಮತ್ತು ದರ್ಶನ್ ಅವರ ಮೇಲೆ ದೂರು ನೀಡಿದ್ದು, ‘ಬಿಜೆಪಿ ಮುಖಂಡ ಜಗ್ಗೇಶ್ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದಾರೆ. ಆದರೂ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಬಡವರು, ರೈತರು, ವನ್ಯ ಜೀವಿಗಳನ್ನು ಕೊಂದು ಕೇಸ್ ಹಾಕ್ತಾರೆ. ಜಗ್ಗೇಶ್, ದರ್ಶನ್, ವಿನಯ್ ಗುರೂಜಿ ಮೇಲೆ ಕ್ರಮ ಯಾಕೆ ತಗೆದುಕೊಂಡಿಲ್ಲ’ ಎಂದು ಕೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ