ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಮ್ಮೆ ಸಂಕಷ್ಟ ; ತನಿಖೆ ನಡೆಸುವಂತೆ ಸರ್ಕಾರಕ್ಕೆ ಪತ್ರ!

Twitter
Facebook
LinkedIn
WhatsApp
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಮ್ಮೆ ಸಂಕಷ್ಟ ; ತನಿಖೆ ನಡೆಸುವಂತೆ ಸರ್ಕಾರಕ್ಕೆ ಪತ್ರ!

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸದಾ ಒಂದಿಲ್ಲೊಂದು ಸುದ್ದಿಗೆ ಕಾರಣರಾಗುತ್ತಲೇ ಇರುತ್ತಾರೆ. ಇದೀಗ ಅವರು ಹಿಂದೆ ಹಗರಣ ನಡೆಸಿದ್ದರು ಎನ್ನುವ ಆರೋಪ ಕೇಳಿ ಬಂದಿದ್ದು ತನಿಖೆ ನಡೆಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಹಿಂದೆ ನಡೆದಿದ್ದ ಇಬ್ಬರು ಅಧಿಕಾರಿಗಳ ಜಗಳ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ನಡುವಿನ ಜಟಾಪಟಿ ಭಾರಿ ಸದ್ದು ಮಾಡುತ್ತಿತ್ತು. ಆದರೆ ಇದೀಗ ರೋಹಿಣಿ ಸಿಂಧೂರಿ ಸಂಕಷ್ಟಕ್ಕೆ ಸಿಲುಕಿರುವುದು ಮೈಸೂರು ಡಿ.ಸಿ. ಆಗಿದ್ದ ಸಮಯದಲ್ಲಿ ನಿಯಮ ಉಲ್ಲಂಘಿಸಿದ್ದರು ಎನ್ನುವ ಆರೋಪದ ಕಾರಣ.

ರೋಹಿಣಿ ಸಿಂಧೂರಿ, ಮೈಸೂರು ಡಿಸಿ ಆಗಿದ್ದಾಗ ನಿಯಮಗಳನ್ನು ಮೀರಿ ಹಣಕಾಸು ಇಲಾಖೆ ಅನುಮತಿ ಪಡೆಯದೇ ಹಣ ಖರ್ಚು ಮಾಡಿದ್ದರೆ ಎನ್ನುವ ಆರೋಪ ಕೇಳಿಬರುತ್ತಿದೆ. ಅವರು ಡಿಸಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯನ್ನು ಹಣಕಾಸು ಇಲಾಖೆಯ ಅನುಮತಿ ಪಡೆಯದೇ ಮಾಡಿದ್ದು, ಹಗರಣ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಹಿಂದೂ ಧರ್ಮಕ್ಕೆ ಅಪಮಾನ ಮಾಡಿಲ್ಲ, ಧರ್ಮದ ಬಗ್ಗೆ ಗೌರವವಿದೆ: ಪರಮೇಶ್ವರ್

ಬೆಂಗಳೂರು: ಹಿಂದೂ ಧರ್ಮದ (Hindu Religion) ವಿರುದ್ಧ ಅವಹೇಳನಕಾರಿಯಾಗಿ ನಾನು ಮಾತಾಡಿಲ್ಲ. ಅದನ್ನ ಬೇರೆ ರೀತಿ ಅರ್ಥೈಸುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ನಾವೆಲ್ಲ ಹಿಂದೂಗಳು ಎಂದು ಗೇಹ ಸಚಿವ ಪರಮೇಶ್ವರ್ (G. Parameshwar) ಸ್ಪಷ್ಟಣೆ ನೀಡಿದ್ದಾರೆ.

ಹಿಂದೂ ಧರ್ಮ ಬಗ್ಗೆ ವಿವಾದಿತ ಹೇಳಿಕೆ ಸಂಬಂಧ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬೆಳಗ್ಗೆ ಎದ್ದರೆ ಗಣಪತಿಯನ್ನ ನೆನಪು ಮಾಡಿಕೊಳ್ತೀವಿ. ನಾನು ಬೆಳೆಗ್ಗೆ ಎದ್ದ ಕೂಡಲೇ ಲಕ್ಷ್ಮಿ ಶ್ಲೋಕ ಹೇಳುತ್ತೇನೆ. ಮಲಗೋವಾಗ ಹನುಮನ ಶ್ಲೋಕ ಹೇಳ್ತೀನಿ ಎಂದು ಎರಡೂ ಶ್ಲೋಕ ಹೇಳಿದರು.

ಬಿಜೆಪಿಯವರಿಗೆ (BJP) ಈ ಶ್ಲೋಕಗಳು ಬರೊಲ್ಲ. ಅವರಿಗೆ ಕೇಳಿ ನೋಡಿ ಇದನ್ನ ಹೇಳ್ತಾರಾ ಅಂತ ಬಿಜೆಪಿ ನಾಯಕರಿಗೆ ಪರಮೇಶ್ವರ್ ಸವಾಲೆಸೆದರು. ಅದಕ್ಕೆ ನಾನು ಹೇಳಿದ್ದು ಕೃಷ್ಣ ಹುಟ್ಟಿದ ದಿನ ಧರ್ಮ ಅಧರ್ಮ ಆದಾಗ, ನೀತಿ, ಅನೀತಿ ಆದಾಗ ಕೃಷ್ಣ ಮತ್ತೆ ಹುಟ್ಟಿ ಬರುತ್ತೇನೆ ಅಂತ ಹೇಳುತ್ತಾನೆ. ಇದನ್ನೇ ನಾನು ಹೇಳಿದ್ದು ಯಧಾ ಯಧಾಹೀ ಧರ್ಮಸ್ಯ ಅಂತ. ಹಿಂದೂ ಧರ್ಮ ಯಾವಾಗ ಹುಟ್ಟಿತು ಅಂತ ನಾನು ಪ್ರಶ್ನೆ ಮಾಡಿಲ್ಲ. ಪದೇ ಪದೇ ನಾನು ಅದನ್ನೇ ಹೇಳಲು ಉದ್ಯೋಗ ಅಲ್ಲ ಎಂದರು.  

ನಾನು ಹೇಳಿದ್ದು ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಈ ದೇಶದಲ್ಲಿ ಹುಟ್ಟಿದ ಧರ್ಮದ ಬಗ್ಗೆ ಸ್ಟಡಿ ಮಾಡಿದ್ರು. ಅದನ್ನ ನಾನು ಹೇಳಿದ್ದು. ಅವರು ಹೇಳಿದ್ದನ್ನ ನಾನು ಹೇಳಿದ್ದು. ಅವರ ಪ್ರಕಾರ ಜೈನ, ಮುಸ್ಲಿಂ ಧರ್ಮ ಸ್ಥಾಪನೆ ಮಾಡಿದವರು ಇದ್ದರು. ಆದರೆ ಹಿಂದೂ ಧರ್ಮಕ್ಕೆ ಇಲ್ಲ ಅಂತ ಹೇಳಿದ್ದರು. ಅಷ್ಟು ಹೇಳಿದ್ದಕ್ಕೆ ಬಿಜೆಪಿ ಅವರು ಬೊಬ್ಬೆ ಹೊಡೆಯುತ್ತಿದ್ದಾರೆ. ನಾನೇನು ಅವಹೇಳನಕಾರಿಯಾಗಿ ಮಾತಾಡಿಲ್ಲ. ಹಿಂದೂ ಧರ್ಮದ ಮೇಲೆ ನಮಗೆ ಇರೋ ಗೌರವ ಅವರಿಗೆ ಇದೆಯಾ ಎಂದು ಪರಂ ಪ್ರಶ್ನಿಸಿದರು.

ಬಿಜೆಪಿಯವರು ಇದನ್ನ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಅದೇ ಕೆಲಸ. ಅವರು ಅದನ್ನೆ ಮಾಡಬೇಕು. ಅಭಿವೃದ್ಧಿ ಬಗ್ಗೆ ಮಾತಾಡೋದಿಲ್ಲ. ಕೇಂದ್ರ ಸರ್ಕಾರ ಇನ್ನು ನಮಗೆ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲ. ಈ ವರ್ಷದಲ್ಲಿ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಅದರ ಬಗ್ಗೆ ಬಿಜೆಪಿ ಅವರು ಮಾತಾಡಲಿ. ಅಭಿವೃದ್ಧಿ ಬಗ್ಗೆ ಮಾತಾಡಲಿ ಸಲಹೆ ಕೊಡಲಿ. ಅದು ಬಿಟ್ಟು ಯಾವುದರ ಬಗ್ಗೆಯೋ ಮಾತಾಡ್ತಾರೆ ಎಂದು ಬಿಜೆಪಿ ವಿರುದ್ಧ ಪರಮೇಶ್ವರ್ ಕಿಡಿಕಾರಿದರು.

ಇನ್ನು ಪರಮೇಶ್ವರ್ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,‌ ಯಡಿಯೂರಪ್ಪ ಟ್ವೀಟ್ ನೋಡಿದೆ.ಅವರಿಗೂ ಇತ್ತು ಒಂದು ಕಾಲದಲ್ಲಿ ಹಾಗೆ. ಅವರು ದೊಡ್ಡವರು,ಹಿರಿಯರು ಇದ್ದಾರೆ. ನಾನು ಅವರ ಬಗ್ಗೆ ಮಾತಾಡೊಲ್ಲ.ನಾನು ಅವಹೇಳನಕಾರಿಯ ಮಾತು ಆಡಿಲ್ಲ.ಮುಂದೆ ಮತ್ತೆ ಅದನ್ನ ವಿಶ್ಲೇಷಣೆ ಮಾಡೋದು ಅರ್ಥವಿಲ್ಲ ಎಂದರು.

ಬಿಜೆಪಿಯವರು ಇದನ್ನ ರಾಜಕೀಯಕ್ಕೆ ಬಳಕೆ ಮಾಡಿಕೊಳ್ತಿದ್ದಾರೆ.ಅವರಿಗೆ ಅದೇ ಕೆಲಸ.ಅವರು ಅದನ್ನೆ ಮಾಡಬೇಕು.ಅಭಿವೃದ್ಧಿ ಬಗ್ಗೆ ಮಾತಾಡೋದಿಲ್ಲ. ಕೇಂದ್ರ ಸರ್ಕಾರ ಇನ್ನು ನಮಗೆ ಒಂದು ರೂಪಾಯಿ ಹಣ ಬಿಡುಗಡೆ ‌ಮಾಡಿಲ್ಲ.ಈ ವರ್ಷದಲ್ಲಿ ‌ಒಂದು ರೂಪಾಯಿ ಹಣ ಕೊಟ್ಟಿಲ್ಲ.ಅದರ ಬಗ್ಗೆ ಬಿಜೆಪಿ ಅವರು ಮಾತಾಡಲಿ. ಅಭಿವೃದ್ಧಿ ಬಗ್ಗೆ ಮಾತಾಡಲಿ ಸಲಹೆ ಕೊಡಲಿ. ಅದು ಬಿಟ್ಟು ಯಾವುದರ ಬಗ್ಗೆಯೋ ಮಾತಾಡ್ತಾರೆ ಅಂತ ಬಿಜೆಪಿ ವಿರುದ್ದ ಪರಮೇಶ್ವರ್ ಕಿಡಿಕಾರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist