ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ICC World Cup 2023 : ರಶೀದ್ ಖಾನ್ ಮಾರಕ ಬೌಲಿಂಗ್‌; ಇಂಗ್ಲೆಂಡ್‌ ವಿರುದ್ಧ ಆಫ್ಘಾನಿಸ್ತಾನಕ್ಕೆ 69 ರನ್‌ಗಳ ಭರ್ಜರಿ ಜಯ

Twitter
Facebook
LinkedIn
WhatsApp
ICC World Cup 2023 Afghanistan won by 69 runs against England

ICC World Cup 2023 : ಅಫ್ಘಾನಿಸ್ತಾನವು ಭಾನುವಾರ ಹೊಸದಿಲ್ಲಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಅನ್ನು 69 ರನ್‌ಗಳಿಂದ ಸೋಲಿಸುವ ಮೂಲಕ (ICC World Cup 2023) ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಉಂಟುಮಾಡಿತು. ಆಫ್ಘಾನಿಸ್ತಾನ ಅದ್ಭುತ ಪ್ರದರ್ಶನಕ್ಕೆ ಹಾಲಿ ಚಾಂಪಿಯನ್ ಬಳಿ ಉತ್ತರವೇ ಇರಲಿಲ್ಲ.

ಆಫ್ಘಾನಿಸ್ತಾನ ಅದ್ಭುತ ಪ್ರದರ್ಶನದ ಮಂದೆ ಇಂಗ್ಲೆಂಡ್ ಆಟ ನಡೆಯಲಿಲ್ಲ. ಮೊದಲು ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆಫ್ಘಾನಿಸ್ತಾನ 284 ರನ್ ಸಿಡಿಸಿತ್ತು. ಆದರೆ ಈ ಗುರಿ ಚೇಸ್ ಮಾಡಲು ಪರದಾಡಿದ ಇಂಗ್ಲೆಂಡ್ 215 ರನ್‌ಗೆ ಆಲೌಟ್ ಆಗಿದೆ. ಆಫ್ಘಾನಿಸ್ತಾನ 69 ರನ್ ಭರ್ಜರಿ ಗೆಲುವು ದಾಖಲಿಸಿದೆ. ಆರಂಭಿಕ 2 ಪಂದ್ಯದಲ್ಲಿ ಮುಗ್ಗರಿಸಿದ್ದ ಆಫ್ಘಾನಿಸ್ತಾನ ಇದೀಗ ಭರ್ಜರಿಯಾಗಿ ಗೆಲುವಿನ ಆರಂಭ ಪಡೆದಿದೆ.

ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ರಹ್ಮನುಲ್ಲಾ ಗುರ್ಬಾಝ್‌ ಬೆಂಕಿ ಬ್ಯಾಟಿಂಗ್‌ ಹಾಗೂ ಮುಜೀಬ್ ಉರ್ ರೆಹಮಾನ್, ರಶೀದ್ ಖಾನ್ ಮಾರಕ ಬೌಲಿಂಗ್‌ ದಾಳಿಯಿಂದಾಗಿ ಕ್ರಿಕೆಟ್ ಜನಕ ಹಾಗೂ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡ ಐತಿಹಾಸಿಕ ಗೆಲುವು ದಾಖಲಿಸಿದೆ. ಆಫ್ಘಾನಿಸ್ತಾನ ನೀಡಿದ್ದ 285ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ರಷೀದ್ ಖಾನ್ ರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 40.3 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 215 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. 

ಆ ಮೂಲಕ  69ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಆ ಮೂಲಕ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ದುರ್ಬಲ ಎನಿಸಿದ್ದ ಅಫ್ಘಾನಿಸ್ತಾನ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದೆ. ಇದೇ ವೇಳೆ ಅಫ್ಘಾನಿಸ್ತಾನ ತಂಡಕ್ಕೆ ಏಕದಿನ ವಿಶ್ವಕಪ್‌ನಲ್ಲಿ ಎರಡನೇ ಗೆಲುವು ಇದಾಗಿದೆ.

ಆರಂಭಿಕರಾಗಿ ಕಣಕ್ಕಿಳಿದಿದ್ದ ಜಾನಿ ಬೈರ್‌ಸ್ಟೋವ್‌ ಕೇವಲ 2 ರನ್‌ ಗಳಿಸಿ ಎಲ್‌ಬಿಡಬ್ಲ್ಯೂ ಆಗಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದರು. ನಂತರ ಜೊತೆಯಾದ ಡೇವಿಡ್ ಮಲನ್ ಮತ್ತು ಜೋ ರೂಟ್‌ ಜೊತೆಯಾಗಿ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದರು. ಡೇವಿಡ್ ಮಲನ್ 32 ರನ್‌ ಗಳಿಸಿ (39 ಬಾಲ್‌, 4 ಫೋರ್‌) ಕ್ಲೀನ್‌ ಬೌಲ್ಡ್‌ ಆದರು. ಜೋ ರೂಟ್‌ ಕೇವಲ 11 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಈ ವೇಳೆ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದ ಹ್ಯಾರಿ ಬ್ರೂಕ್‌ ಮೈದಾನದಲ್ಲಿ 61 ಬಾಲ್‌ಗಳಿಗೆ 66 ರನ್‌ ಗಳಿಸಿ (7 ಫೋರ್‌, 1 ಸಿಕ್ಸ್‌) ಉತ್ತಮ ಪ್ರದರ್ಶನ ನೀಡಿದರು. ಆದರೆ ಅವರಿಗೆ ಜೊತೆಯಾಗಿ ಸಾಥ್‌ ಕೊಡುವಲ್ಲಿ ಇತರೆ ಆಟಗಾರರು ವಿಫಲರಾದರು. ಆಫ್ಘನ್ನರ ಸ್ಪಿನ್‌ ದಾಳಿಗೆ ಆಂಗ್ಲ ಬ್ಯಾಟರ್‌ಗಳು ತರಗೆಲೆಯಂತೆ ಉದುರಿ ಹೋದರು.

ಪರಿಣಾಮವಾಗಿ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಕೇವಲ 9 ರನ್‌ ಗಳಿಸಿ ಔಟಾದರು. ಲಿಯಾಮ್ ಲಿವಿಂಗ್ಸ್ಟೋನ್ 10 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಸ್ಯಾಮ್ ಕರ್ರನ್ ಕೂಡ ಕೇವಲ 10 ರನ್‌ ಗಳಿಸಲಷ್ಟೇ ಶಕ್ತರಾದರು. ಕ್ರಿಸ್ ವೋಕ್ಸ್ 9 ರನ್‌ಗಳಿಸಿ ಔಟಾದರು. ಆದಿಲ್ ರಶೀದ್ 20 ರನ್‌, ಮಾರ್ಕ್ ವುಡ್ 18 ರನ್‌ ಗಳಿಸಿ ಪೆವಿಲಿಯನ್‌ನತ್ತ ನಡೆದರು.

ಇಂಗ್ಲೆಂಡ್‌ ವಿರುದ್ಧ ಆಫ್ಘನ್‌ ಬೌಲರ್‌ಗಳು ಅಮೋಘ ಪ್ರದರ್ಶನ ತೋರಿದರು. ಮುಜೀಬ್ ಉರ್ ರೆಹಮಾನ್ ಹಾಗೂ ರಶೀದ್ ಖಾನ್ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಮೊಹಮ್ಮದ್ ನಬಿ 2, ಫಜಲ್ಹಕ್ ಫಾರೂಕಿ ಹಾಗೂ ನವೀನ್-ಉಲ್-ಹಕ್ ತಲಾ 1 ಕಿತ್ತು ತಂಡದ ಗೆಲುವಿಗೆ ಸಹಕಾರಿಯಾದರು.

ಟಾಸ್ ಗೆದ್ದ ಇಂಗ್ಲೆಂಡ್‌ ತಂಡ ಅಫ್ಘಾನಿಸ್ತಾನಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಬ್ಯಾಟಿಂಗ್‌ಗೆ ಇಳಿದ ಅಫ್ಘಾನ್ ಭರ್ಜರಿ ಆರಂಭ ಪಡೆಯಿತು. ರಹ್ಮನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝರ್ದಾನ್ ತಂಡಕ್ಕೆ 114 ರನ್‌ಗಳ ಉತ್ತಮ ಜೊತೆಯಾಟ ನೀಡಿದರು. 16.4 ಓವರ್‌ನಲ್ಲಿ ಸ್ಪಿನ್ನರ್ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಇಬ್ರಾಹಿಂ ಝರ್ದಾನ್ (28) ಔಟ್ ಆಗುವುದರೊಂದಿಗೆ ಅಫ್ಘಾನ್ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ರಹ್ಮನುಲ್ಲಾ ಗುರ್ಬಾಝ್ 57 ಎಸೆತಗಳಲ್ಲಿ 80 ರನ್ ಸಿಡಿಸಿ (8 ಬೌಂಡರಿ, 4 ಸಿಕ್ಸರ್) ಸಿಡಿಸಿ ಆಂಗ್ಲರನ್ನು ಚೆಂಡಾಡಿದರು. ನಂತರ ಗುರ್ಬಾಝ್‌ ರನ್‌ಔಟ್‌ ಆದರು. 

ಬಳಿಕ ಬಂದ ಯಾವೊಬ್ಬ ಬ್ಯಾಟರ್ ಕೂಡ ಇಂಗ್ಲೆಂಡ್‌ ಬಲಿಷ್ಟ ಬೌಲಿಂಗ್ ಎದುರು ಹೆಚ್ಚು ಸಮಯ ಕ್ರೀಸಿನಲ್ಲಿ ನಿಲ್ಲಲು ಸಾಧ್ಯವಾಗದೇ ದಿಢೀರ್ ಕುಸಿತ ಕಂಡಿತು. ರಹಮತ್ ಶಾ 3 ರನ್ ಗಳಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಸ್ಟಂಪ್ ಔಟ್ ಆದರೆ, ನಾಯಕ ಹಶ್ಮತುಲ್ಲಾ ಶಾಹಿದಿ 14 ರನ್ ಗಳಿಸಿ ಜೊ ರೂಟ್ ಬೌಲಿಂಗ್‌ನಲ್ಲಿ ಬೌಲ್ಡ್ ಆಗಿ ನಿರಾಸೆ ಮೂಡಿಸಿದರು. ಅಝ್ಮತುಲ್ಲಾ ಓಮರ್ಝೈ, ಮೊಹಮ್ಮದ್ ನಬಿ ಕ್ರಮವಾಗಿ 19, 9 ಗಳಿಸಿ ಪೆವಿಲಿಯನ್ ಪರೇಡ್‌ ನಡೆಸಿದರು.

ಬಳಿಕ ಕೊಂಚ ಚೇತರಿಸಿಕೊಂಡ ಅಫ್ಘಾನ್ ಇಕ್ರಂ ಅಲಿಖಿಲ್ ಮತ್ತು ರಶೀದ್ ಖಾನ್ ಜೋಡಿ 43 ರನ್‌ಗಳ ಜೊತೆಯಾಟ ನೀಡಿ ಮೊತ್ತ ಹೆಚ್ಚಿಸುವ ಯೋಜನೆಯಲ್ಲಿ ಇದ್ದರು. ಆದರೆ ರಶೀದ್ ಖಾನ್ 23 ರನ್ ಗಳಸಿ ಕ್ಯಾಚ್ ನೀಡಿ ಔಟಾದರು. ಇಕ್ರಂ ಅಲಿಖಿಲ್ 58 ಗಳಿಸಿ ಅರ್ಧಶತಕ ಬಾರಿಸಿ (3 ಬೌಂಡರಿ, 2 ಸಿಕ್ಸರ್) ಮಿಂಚಿದರು. ಮುಜೀಬ್ ಉರ್ ರಹ್ಮಾನ್ 28 ರನ್ ಗಳ ಉಪಯುಕ್ತ ಕೊಡುಗೆ ನೀಡಿದರು. ಅಂತಿಮ ಜೋಡಿಯಾದ ನವೀನ್ 5 ರನ್‌ಗೆ ರನೌಟ್ ಆದರು. ಫಝಲ್ ಹಕ್ ಫಾರೂಕಿ 2 ರನ್ ಗಳಿಸಿದರು.

ಇಂಗ್ಲೆಂಡ್‌ ಪರ ಆದಿಲ್ ರಶೀದ್ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 2, ಲಿಯಾಮ್ ಲಿವಿಂಗ್‌ಸ್ಟೋನ್‌, ಜೋ ರೂಟ್, ರೀಸ್ ಟೋಪ್ಲಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ