ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಅಂಜುಮನ್ ಅರ್ಜಿ ತಿರಸ್ಕೃತ

Twitter
Facebook
LinkedIn
WhatsApp
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಅಂಜುಮನ್ ಅರ್ಜಿ ತಿರಸ್ಕೃತ

ಧಾರವಾಡ : ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋಟ್೯ ವಜಾಗೊಳಿಸಿದೆ.

ಗಣೇಶೋತ್ಸವ ಕುರಿತು ಮಹಾನಗರ ಪಾಲಿಕೆ ಕೈಗೊಂಡ ನಿರ್ಣಯವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಧಾರವಾಡ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ ಸಚಿನ‌ ಮಗದುಮ್ಮ‌ಅವರಿದ್ದ ಏಕಸದಸ್ಯ ಪೀಠವು ಮೇಲ್ಮನವಿ ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದೆ. ಈ ಮೂಲಕ ಎರಡನೆ ವರ್ಷವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಕೂಲ ಆದಂತಾಗಿದೆ.
ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಇದೀಗ ಮಹಾನಗರ ಪಾಲಿಕೆ ಠರಾವಿಗೆ ಒಪ್ಪಿಗೆ ಸಿಕ್ಕಂತಾಗಿದೆ.

ಗಣೇಶ ಪ್ರತಿಷ್ಠಾಪನೆಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ,ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ,ಮಾಜಿ ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಅನೇಕರು ಕಳೆದ ಎರಡು ದಿನದಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದ್ದರು.

ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕಿರಿಸಿದ ಹಿನ್ನೆಲೆಯಲ್ಲಿ ಅವಕಾಶ ಕೋರಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ವಿಜಯೋತ್ಸವ ಆಚರಿಸಿದರು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೋರಿ ನಡೆಸುತ್ತಿರುವ ಹೋರಾಟಗಾರರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ‌. ಹೈಕೋರ್ಟ್ ಈ ನಿರ್ಧಾರ ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ‌ ಎಂದು ಅಭಿಪ್ರಾಯಪಟ್ಟರು. ಪಾಲಿಕೆ ಆಯುಕ್ತರ ಅನುಮತಿಗೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಮುಂದೊರೆದಿದೆ.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಕಳೆದ ಬಾರಿ ಶಾಂತರೀತಿಯಿಂದ ಗಣೇಶೋತ್ಸವ ಮಾಡಿದ್ದೇವೆ. ಪಾಲಿಕೆಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಆದರೂ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಬ ಮಾಡಿದ್ದು ಸರಿಯಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಸೂಚನೆಯಂತೆ ಕಮೀಷನರ್ ಹೀಗೆ ಮಾಡಿದ್ದಾರೆ. ಗಣೇಶನ ವಿಚಾರದಲ್ಲಿ ಹೀಗೆ ಮಾಡಿದ್ದು ವಿಷಾಧನೀಯ. ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸಿದವರಿಗೆ ಹೈಕೋರ್ಟ್ ಸರಿಯಾಗಿ ಪಾಠ ಕಲಿಸಿದೆ. ವಿರೋಧಿಗಳ ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ. ವಿಜೃಂಭಣೆಯಿಂದ ಗಣೇಶೋತ್ಸವ ಮಾಡುತ್ತೇವೆ ಎಂದರು.

ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ ಮಾತನಾಡಿ, ಗಣೇಶ ವಿರೋಧಿಗಳ ಕಪಾಳಕ್ಕೆ ಹೈಕೋರ್ಟ್ ಸರಿಯಾಗಿ ಬಾರಿಸಿದೆ. ಪ್ರಥಮ ಪೂಜಿತ ಗಣೇಶನ ಪ್ರತಿಷ್ಠಾಪಣೆ ವಿರೋಧಿಸಿದವರಿಗೆ ತಕ್ಕ ಶಾಸ್ತಿಯಾಗಿದೆ. ಚೆನ್ನಮ್ಮ ಮೈದಾನದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತೇವೆ. ಗಣೇಶೋತ್ಸವ ಬೇಡ ಅನ್ನೋರು ಪಾಕಿಸ್ತಾನಕ್ಕೆ ಹೋಗಲಿ. ಎಸ್‌ಡಿಪಿಐ, ಪಿಎಫ್‌ಐ, ಎಐಎಮ್‌ಐಎಮ್ ದೇಶ ವಿರೋಧಿಗಳು. ಅಂಜುಮನ್ ಸಂಸ್ಥೆಯವರು ಈಗಲಾದರೂ ಬುದ್ಧಿಕಲಿಯಲಿ ಎಂದರು.

Disqualification; ಪ್ರಜ್ವಲ್‌, ರೇವಣ್ಣ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ರಾಜ್ಯ ಹೈಕೋರ್ಟ್‌ ತೀರ್ಪು ವಿರುದ್ಧ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್‌ ತಂದೆ ರೇವಣ್ಣ ಕೂಡ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಹೈಕೋರ್ಟ್‌ ಸೆ.1ರಂದು ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಹಾಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಜ್ವಲ್‌ ಪ್ರಕರಣದಲ್ಲಿ ಸತ್ಯ ಮರೆ ಮಾಚಲು ಹಾಗೂ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಶಾಸಕ ಎಚ್‌.ಡಿ.ರೇವಣ್ಣ ಅವರಿಗೂ ನಿಮ್ಮ ಶಾಸಕ ಸ್ಥಾನವನ್ನೂ ಯಾಕೆ ಅಸಿಂಧುಗೊಳಿಸಬಾರದು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ನೋಟೀಸ್‌ ಜಾರಿ ಮಾಡಿತ್ತು. ಇದನ್ನೂ ಪ್ರಶ್ನಿಸಿ ಎಚ್‌.ಡಿ.ರೇವಣ್ಣ ಕೂಡ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist