ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಎಚ್.ಡಿ.ಕುಮಾರಸ್ವಾಮಿ ; ಸಿ ಎಂ ಸಿದ್ಧರಾಮಯ್ಯ

Twitter
Facebook
LinkedIn
WhatsApp
ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಎಚ್.ಡಿ.ಕುಮಾರಸ್ವಾಮಿ ; ಸಿ ಎಂ ಸಿದ್ಧರಾಮಯ್ಯ

ಮೈಸೂರು: ರಾಜಕೀಯವಾಗಿ ಹತಾಶರಾದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಎಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿಗಿಂತ ಜಾಸ್ತಿ ಹತಾಶರಾಗಿದ್ದಾರೆ. ರಾಜಕೀಯದಲ್ಲಿ (Karnataka Politics) ಯಾರಾದರೂ ಖಳನಾಯಕ ಇದ್ದರೆ ಅದು ಎಚ್.ಡಿ.ಕುಮಾರಸ್ವಾಮಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಮುಖ್ಯಮಂತ್ರಿಯನ್ನು ಮಹಾಭಾರತದ ಖಳನಾಯಕರಿಗೆ ಎಚ್‌ಡಿಕೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಬಗ್ಗೆ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು, ಮೈತ್ರಿ ಸರ್ಕಾರ ಬಿದ್ದು ಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್‌ನಲ್ಲಿ ಕಾಲಕಳೆದಿದ್ದರು, ಇವರು ನಮಗೆ ಹೇಳಿಕೊಡಬೇಕೆ ಎಂದು ಕಿಡಿ ಕಾಡಿದರು.

ತಪ್ಪುದಾರಿಗೆ ಎಳೆಯುತ್ತಿದ್ದಾರೆ

ಮೈತ್ರಿ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು ಎಂಬ ಎಚ್‌ಡಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಎಚ್‌ಡಿಕೆ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್‌ನಲ್ಲಿದೆ, ಅದನ್ನು ಬಿಡುಗಡೆ ಮಾಡುತ್ತೇನೆ. ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಅವರು ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲ್‌ನಲ್ಲಿ ಕುಳಿತಿದ್ದರು ಎಂದು ಛೇಡಿಸಿದರು.

ಚುನಾವಣೆಗೆ ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ

ಹೈ ಕಮಾಂಡ್‌ಗೆ ದೂರು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು ಸುಳ್ಳು ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ವಿದ್ಯುತ್ ಕ್ಷಾಮ; ಕೃತಕ ಅಭಾವವಲ್ಲ

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಖರೀದಿ ಮಾಡಲಾಗುತ್ತದೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ವಿದ್ಯುತ್‌ ಅನ್ನು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ ಎಂದರು. ಎಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿಗೆ ರಾಮನಗರ ಸೇರ್ಪಡೆ ಹೇಳಿಕೆ; ಡಿಸಿಎಂ ಜತೆ ಚರ್ಚೆ

ರಾಮನಗರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು, ಈ ಪ್ರಶ್ನೆಯನ್ನು ಅವರನ್ನೇ ಕೇಳಬೇಕು. ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ಬಿಜೆಪಿಗೆ ಮಾನ, ಮರ್ಯಾದೆ ಇದೆಯೇ?

ಎಟಿಎಂ ಸರ್ಕಾರ ಎಂಬ ಬಿಜೆಪಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಸುಳ್ಳು ಆರೋಪ. ಅವರು ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25 ಕೋಟಿ ಚುನಾವಣೆಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ, ಮರ್ಯಾದೆ ಇದೆಯೇ? ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ, 3 ವರ್ಷ 10 ತಿಂಗಳಲ್ಲಿ ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

30,000 ಕೋಟಿ ರೂ. ಬಾಕಿ ಬಿಲ್‌

ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್‌ಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ, ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈ ವೇಳೆ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿ, ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ ಎಂದರು.

ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ

ಜಾತಿ ಜನಗಣತಿ ವರದಿ ಬಿಡುಗಡೆಗೆ ವಿಪಕ್ಷಗಳ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿ, ಅವರು ರಾಜಕೀಯವಾಗಿ ಹತಾಶರಾಗಿ ಮಾತನಾಡುತ್ತಾರೆ. ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ ಎಂದು ವ್ಯಂಗ್ಯವಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist