ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿ.ಕೆ.ಶಿವಕುಮಾರ್ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ; ನಾನು ವ್ಯಂಗ್ಯವಾಗಿ ಹೇಳಿದ್ದು ಎಂದ ಕುಮಾರಸ್ವಾಮಿ

Twitter
Facebook
LinkedIn
WhatsApp
ಡಿ.ಕೆ.ಶಿವಕುಮಾರ್ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ; ನಾನು ವ್ಯಂಗ್ಯವಾಗಿ ಹೇಳಿದ್ದು ಎಂದ ಕುಮಾರಸ್ವಾಮಿ

ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಹೇಳಿರುವುದು ವ್ಯಂಗ್ಯವಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಶಿವಕುಮಾರ್ ಸಿಎಂ ಆಗುತ್ತಾರಾ ಇಲ್ಲವಾ ಅಂತಾ ಕಾಂಗ್ರೆಸ್​ನವರು ಹೇಳಬೇಕು ಎಂದರು

ಪ್ರತಿ ದಿನ ನೀವು ಬನ್ನಿ, ನೀವು ಬನ್ನಿ ಅಂತಾ ಎಲ್ಲರನ್ನೂ ಕರೆಯುತ್ತಿದ್ದಾರೆ. ನಿನ್ನೆ ಸಿಎಂ ಕನಿಷ್ಠ 50 ಜನರನ್ನಾದರೂ ಕರೆ ತರಬೇಕು ಎಂದಿದ್ದಾರೆ. ಪ್ರತಿನಿತ್ಯ ನಮ್ಮ ಶಾಸಕರ ಮನೆ ಮುಂದೆ ಯಾಕೆ ಹೋಗುತ್ತಿದ್ದೀರಾ? ಒಳ್ಳೆಯ ಕೆಲಸ ಮಾಡುತ್ತೇನೆ ಅಂದರೆ ಎಲ್ಲರನ್ನೂ ಕಳಿಸುತ್ತೇನೆ ಎಂದಿದ್ದೇನೆ. ಆದರೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರಾ ಇಲ್ಲವಾ ಅಂತ ಕಾಂಗ್ರೆಸ್ ನಾಯಕರು ಹೇಳಬೇಕು ಎಂದರು.

ಚುನಾವಣೆ ಬಳಿಕ ಬಿಜೆಪಿ, ಜೆಡಿಎಸ್ ಇರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಾದ ಮೇಲೆ ಈ ರಾಜ್ಯದಲ್ಲಿ ಮಾತ್ರ ಅಲ್ಲ, ಈ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಯೋಚನೆ ಮಾಡಲಿ ಎಂದರು.

ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ವ್ಯಂಗ್ಯವಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ