ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಂದೂ ಧರ್ಮ ಉಳಿದರೆ ಜಾತಿ ಉಳಿಯುತ್ತದೆ. ಮಂಗಳೂರಿನಲ್ಲಿ ಕಾಂಗ್ರೆಸಿನ ಬಿಲ್ಲವ ಅಸ್ತ್ರಕ್ಕೆ ಬಿಜೆಪಿಯ ಧರ್ಮದ ಅಸ್ತ್ರ ಒಪ್ಪಿದ ಬಿಲ್ಲವರು. ಕಾಂಗ್ರೆಸಿಗೆ ಹೊಸ ತಲೆ ಬಿಸಿ!

Twitter
Facebook
LinkedIn
WhatsApp
ಹಿಂದೂ ಧರ್ಮ ಉಳಿದರೆ ಜಾತಿ ಉಳಿಯುತ್ತದೆ. ಮಂಗಳೂರಿನಲ್ಲಿ ಕಾಂಗ್ರೆಸಿನ ಬಿಲ್ಲವ ಅಸ್ತ್ರಕ್ಕೆ ಬಿಜೆಪಿಯ ಧರ್ಮದ ಅಸ್ತ್ರ ಒಪ್ಪಿದ ಬಿಲ್ಲವರು. ಕಾಂಗ್ರೆಸಿಗೆ ಹೊಸ ತಲೆ ಬಿಸಿ!

ಮಂಗಳೂರು: ಹಿಂದೂ ಧರ್ಮ ಉಳಿದರೆ ಜಾತಿ ಉಳಿಯುತ್ತದೆ ಎಂಬ ಅಭಿಯಾನ ಆರಂಭಿಸಿರುವ ಮಂಗಳೂರು ಲೋಕಸಭೆಯಲ್ಲಿ ಬಿಜೆಪಿ ಕಾಂಗ್ರೆಸ್ಸಿನ ಬಿಲ್ಲವ ಜಾತಿ ಅಸ್ತ್ರಕ್ಕೆ ಪ್ರತಿ ಅಸ್ತ್ರ ಪ್ರಯೋಗಿಸಿದೆ ಇಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವರು ಸಹ ಧರ್ಮ ಉಳಿದರೆ ಜಾತಿ ಉಳಿಯುತ್ತದೆ ಎಂಬ ಚರ್ಚೆಗೆ ಸಹಮತ ಸೂಚಿಸಿರುವುದು ಕಾಂಗ್ರೆಸ್ಸಿಗೆ ಈ ಬಾರಿ ಲೋಕಸಭೆ ಮಂಗಳೂರಲ್ಲಿ ಮತ್ತಷ್ಟು ಕಗ್ಗಂಟಾಗುವ ಲಕ್ಷಣ ಗೋಚರಿಸಿದೆ.

ಬಿಲ್ಲವ ಜಾತಿ ಅಸ್ತ್ರ, ಸತ್ಯಜಿತ್ ಅಸ್ತ್ರ ಪ್ರಯೋಗಿಸಿದರೂ ಹಿಂದುತ್ವದ ಹಾಗೂ ಮೋದಿ ಅಲೆಯಿಂದ ಸೆಳೆಯಲಾಗದೆ ಕಾಂಗ್ರೆಸ್ ಒದ್ದಾಡುತ್ತಿದೆ ಎಂದು ದಕ್ಷಿಣ ಕನ್ನಡದ ರಾಜಕೀಯದ ಅಗಲವನ್ನು ಬಲ್ಲ ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಅಭಿಪ್ರಾಯ ಪಡುತ್ತಾರೆ.

ಮೋದಿಯನ್ನು ಬಿಡಲು ಹಾಗೂ ಹಿಂದುತ್ವ ದಿಂದ ಕದಡದೆ ಬಿಲ್ಲವರು ಕಾಂಗ್ರೆಸಿಗೆ ಕಗ್ಗಂಟಾಗಿ ಪರಿಣಿಸಿದ್ದು, ಜಾತಿ ಅಸ್ತ್ರ ಪ್ರಯೋಗ ಅಷ್ಟಾಗಿ ಪರಿಣಾಮ ಬೀರುತ್ತಿಲ್ಲ ಎಂದು ಕೆಲವು ಕಾಂಗ್ರೆಸ್ ನಾಯಕರೇ ಅಭಿಪ್ರಾಯಪಡುತ್ತಿದ್ದಾರೆ.

ಕಾಂಗ್ರೆಸ್ನ ಬತ್ತಳಿಕೆಯಲ್ಲಿ ಇರುವ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಿದ ನಂತರ ಹಿಂದುತ್ವದ ಕಡೆಯಿಂದ ಜನರನ್ನು ಸೆಳೆಯಲಾಗದೆ ಮಂಗಳೂರು ಲೋಕಸಭೆಯಲ್ಲಿ ಕಾಂಗ್ರೆಸ್ ಸಕಾರಾತ್ಮಕ ಫಲಿತಾಂಶದ ಬಗ್ಗೆ ಬಹುದೊಡ್ಡ ಪ್ರಶ್ನೆಗಳಿಗೆ ಉದ್ದವಿಸುವಂತೆ ಮಾಡಿದೆ.

ಚುನಾವಣೆಗೆ ಇನ್ನು ಕೆಲವು ದಿನ ಬಾಕಿ ಇರುವ ಕಾರಣದಿಂದ ಯಾವ ತಿರುವನ್ನು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

‘ಅಮಿತ್ ಶಾ ಭೇಟಿಯಿಂದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ’- ಸುನೀಲ್ ಕುಮಾರ್

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜವಾಬ್ದಾರಿ ಇರುವ 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು, ನೇರವಾಗಿ 5 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರ ಜೊತೆ ನಮ್ಮ ನಾಯಕರು ಮಾತನಾಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ರೋಡ್ ಷೋ ಇರುತ್ತದೆ. ಮೊದಲ ಹಂತದಲ್ಲಿ ನಡೆಯುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇಲೆ ದೊಡ್ಡ ಪರಿಣಾಮ ಉಂಟಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರವಾಸದ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದೇವೆ. ಇವೆರಡು ಕಾರ್ಯಕ್ರಮದ ಹೊರತಾಗಿ ನಡುವಿನ ಸಮಯಾವಕಾಶದಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬೀದರ್, ಬೆಳಗಾವಿ ಜಿಲ್ಲೆಗಳ ಕೋರ್ ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಅವರು ಮಾತುಕತೆ ಮಾಡಲಿದ್ದಾರೆ. ಈ ಮೂಲಕ ಚುನಾವಣಾ ಸಿದ್ಧತೆ ಮಾಡಲಿದ್ದಾರೆ ಎಂದು ವಿವರಿಸಿದರು.

ಮಂಗಳೂರಿನಲ್ಲಿ ಸಮಾನ ಮನಸ್ಕ ರಾಜಕೀಯ ಪಕ್ಷ, ಸಂಘಟನೆಗಳ ಸಮಾಲೋಚನಾ ಸಭೆ, ಬಿಜೆಪಿ ಸೋಲಿಸಲು ಕಾರ್ಯತಂತ್ರ..!

ಮಂಗಳೂರು :  ಅಘೋಷಿತ ತುರ್ತು ಪರಿಸ್ಥಿತಿಯ ಭೀತಿಯ ನಡುವೆ ನಡೆಯುತ್ತಿರುವ ನಿರ್ಣಾಯಕ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದೊಂದಿಗೆ “ಇಂಡಿಯಾ” ಕೂಟದ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಹಾಗೂ ಸಮಾನ ಮನಸ್ಕ ರೈತ, ದಲಿತ, ಕಾರ್ಮಿಕ, ಅಲ್ಪಸಂಖ್ಯಾತ, ವಿದ್ಯಾರ್ಥಿ, ಯುವಜನ, ಮಹಿಳಾ, ಸಾಂಸ್ಕೃತಿಕ ಸಂಘಟನೆಗಳ ಪ್ರಮುಖರ ಸಮಾಲೋಚನಾ ಸಭೆ ಮಂಗಳೂರಿನಲ್ಲಿ ಇಂದು ನಡೆಯಿತು.

ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸಿದರೆ ದೇಶದ ಸಾಂವಿಧಾನ, ಜನಸಾಮಾನ್ಯರು, ದುರ್ಬಲ ವಿಭಾಗಗಳು, ದುಡಿಯುವ ವರ್ಗಗಳು ಎದುರಿಸಬೇಕಾಗುವ ಅಪಾಯಗಳ ಕುರಿತು ಸಭೆ ವಿಸ್ತಾರವಾಗಿ ಚರ್ಚಿಸಿತು. 

ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮಹಿಂಸೆಯ ಪ್ರಯೋಗಶಾಲೆಯನ್ನಾಗಿಸಿ ಬಿಜೆಪಿ 33 ವರ್ಷಗಳಿಂದ ಸತತ ಗೆಲುವು ಸಾಧಿಸುತ್ತಿರುವುದು, ಈ ಗೆಲುವಿನಿಂದ ಜಿಲ್ಲೆಯ ಜನ ಜೀವನದ ಮೇಲಾಗಿರುವ ನಕಾರಾತ್ಮಕ ಪರಿಣಾಮಗಳು ಕುರಿತೂ ಸಭೆಯಲ್ಲಿ ಕಳವಳ ವ್ಯಕ್ತವಾಯಿತು. 

ಈ ಹಿನ್ನಲೆಯಲ್ಲಿ ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಒಂದಾಗಿ ದುಡಿಯಲು, ಜನರ ನಡುವೆ ಪರಿಣಾಮಕಾರಿಯಾಗಿ ಹಂತ ಹಂತದ ಚುನಾವಣಾ ಪ್ರಚಾರ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.

ಮತ್ತಷ್ಟು ಸಮಾನ ಮನಸ್ಕ, ನಾಗರಿಕ ಸಂಘಟನೆಗಳನ್ನು ಜೊತೆಗೂಡಿಸಿ ತಾಲೂಕು, ಹೋಬಳಿ ಮಟ್ಟಗಳಲ್ಲಿ ಚುನಾವಣಾ ಪ್ರಚಾರ, ಜಾಗೃತಿ ಅಭಿಯಾನಗಳನ್ನು ನಡೆಸಲು ಯೋಜನೆ ಸಿದ್ದಪಡಿಸಲಾಯಿತು. ಅದರ ಭಾಗವಾಗಿ ಎಪ್ರಿಲ್ 15 ರಂದು ಮಂಗಳೂರು ನಗರದಲ್ಲಿ ಸಮಾನ ಮನಸ್ಕ ಸಂಘಟನೆಗಳು, ನಾಗರಿಕ ವೇದಿಕೆಗಳು, ಎಡ ಪಕ್ಷಗಳು ಸೇರಿದಂತೆ ಬಿಜೆಪಿ ವಿರೋಧಿ ಜಾತ್ಯಾತೀತ ಶಕ್ತಿಗಳ ಪಾಲ್ಗೊಳ್ಳುವಿಕೆಯಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು .

ಸಿಪಿಐ ಹಿರಿಯ ನಾಯಕ, ಕಾರ್ಮಿಕ ಮುಂದಾಳು ವಿ ಕುಕ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್ ಬಜಾಲ್ ಸಭೆಯನ್ನು ನಿರ್ವಹಿಸಿದರು.

ಸಭೆಯಲ್ಲಿ ವಕ್ಫ್ ಬೋರ್ಡ್ ನ‌ ಅಧ್ಯಕ್ಷರಾದ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮಾಜಿ ಮೇಯರ್ ಕೆ.ಅಶ್ರಫ್,ರೈತ ನಾಯಕರಾದ ಕೆ.ಯಾದವ ಶೆಟ್ಟಿ,ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್, ಕ್ರಷ್ಣಪ್ಪ ಸಾಲ್ಯಾನ್,ಕಾರ್ಮಿಕ ಮುಖಂಡರಾದ ಜೆ‌ ಬಾಲಕ್ರಷ್ಣ ಶೆಟ್ಟಿ, ಬಿ ಶೇಖರ್,ಸುರೇಶ್ ಕುಮಾರ್,ಸುಕುಮಾರ್, ಪದ್ಮಾವತಿ ಶೆಟ್ಟಿ, ಮಹಿಳಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ,ಅಸುಂತ ಡಿಸೋಜ, ಯೋಗಿತಾ ಉಳ್ಳಾಲ,ಯುವಜನ ನಾಯಕರಾದ ಬಿ.ಕೆ.ಇಮ್ತಿಯಾಜ್, ಸಂತೋಷ್ ಬಜಾಲ್, ಪುಷ್ಪರಾಜ್ ಬೋಳೂರು, ವಕೀಲರಾದ ದಿನೇಶ್ ಹೆಗ್ಡೆ ಉಳಿಪಾಡಿ,ಯಶವಂತ ಮರೋಳಿ,ಮನೋಜ್ ವಾಮಂಜೂರು,ಹನೀಫ್,

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಡೋಲ್ಫಿ ಡಿಸೋಜ, ಫ್ಲೇವಿ ಕ್ರಾಸ್ತಾ,ಫೆಲಿಕ್ಸ್ ಮೊಂತೆರೋ,ಕೆಥೋಲಿಕ್ ಸಭಾದ ನಿಕಟಪೂರ್ವ ಅಧ್ಯಕ್ಷರಾದ ಸ್ಟಾನಿ ಲೋಬೋ,ದಲಿತ ಮುಖಂಡರಾದ ಎಂ.ದೇವದಾಸ್,ರಘು ಎಕ್ಕಾರು,ಶೇಖರ್ ಚಿಲಿಂಬಿ, ಕ್ರಷ್ಣಪ್ಪ ಕೋಣಾಜೆ,ಕ್ರಷ್ಣ ತಣ್ಣೀರುಬಾವಿ,ಆದಿವಾಸಿ ನಾಯಕರಾದ ಕರಿಯ ಕೆ, ಶೇಖರ್ ವಾಮಂಜೂರು,ಕ್ರಷ್ಣ ಇನ್ನಾ,ರಶ್ಮಿ ವಾಮಂಜೂರು, ಪ್ರಗತಿಪರ ಚಿಂತಕರಾದ, ಡಾ.ಕ್ರಷ್ಣಪ್ಪ ಕೊಂಚಾಡಿ,ಬಿ.ಎನ್ ದೇವಾಡಿಗ,ಯಾಸಿನ್ ಕುದ್ರೋಳಿ,ಮುಸ್ಲಿಂ ಸಂಘಟನೆಗಳ ಮುಖಂಡರಾದ ಅಶ್ರಪ್ ಬದ್ರಿಯಾ,ಅದ್ದು ಕ್ರಷ್ಣಾಪುರ ಮುಂತಾದವರು ಹಾಜರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist