ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್..!!

Twitter
Facebook
LinkedIn
WhatsApp
ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ