ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಡ್ಯದ ಟಿಕೆಟ್ ತಪ್ಪಿದಲ್ಲಿ ಪಕ್ಷೇತರ ಅ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರಾ ಸುಮಲತಾ ಅಂಬರೀಶ್..?

Twitter
Facebook
LinkedIn
WhatsApp
ಮಂಡ್ಯದ ಟಿಕೆಟ್ ತಪ್ಪಿದಲ್ಲಿ ಪಕ್ಷೇತರ ಅ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರಾ ಸುಮಲತಾ ಅಂಬರೀಶ್..?

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಸ್ಪರ್ಧೆಗೆ ಭಾರಿ ಪೈಪೋಟಿ ನಡೆಯುತ್ತಿದೆ. ಇತ್ತ ಜೆಡಿಎಸ್ ಪಾಳಯದಲ್ಲಿ ಅಭ್ಯರ್ಥಿಗೆ ಟಿಕೆಟ್ ನೀಡಲು ಭಾರೀ ಕಸರತ್ತು ನಡೆಯುತ್ತಿದ್ದರೆ, ಅತ್ತ ಸಂಸದೆ ಸುಮಲತಾ ಅಂಬರೀಶ್(Sumalatha Ambarish) ಈ ಭಾರೀ ಟಿಕೆಟ್ ನನಗೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ & ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಚರ್ಚೆ ನಡೆಯುವಾಗಲೇ ಮಂಡ್ಯ ಸಂಸದೆ ಸುಮಲತಾ ಅವರ ಮಾತು ಸಂಚಲನ ಸೃಷ್ಟಿಸುತ್ತಿದೆ. 2024 ರ ಲೋಕಸಭೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಎದುರಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೈತ್ರಿಯ ಭಾಗವಾಗಿ ಹಳೇ ಮೈಸೂರು ಭಾಗದಲ್ಲಿನ ಕ್ಷೇತ್ರಗಳನ್ನು ಪಡೆಯಲು ಈಗ ಜೆಡಿಎಸ್ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಮೈಸೂರು ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಲಾಭಿ ಆರಂಭಿಸಿದೆ. ಹೀಗಿದ್ದಾಗ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡ ಪ್ರವೇಶ ಮಾಡುವುದು ಬಹುತೇಕ ಗ್ಯಾರಂಟಿ ಆಗುತ್ತಿದೆ.

ಸುಮಲತಾ ವಿಚಾರ ನಮಗೆ ಬಿಡಿ ಎಂದ ಶಾ! ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎಂದು ತೀರ್ಮಾನವಾಗುತ್ತಿದ್ದಂತೆ ರಾಜ್ಯದ ನಾಯಕರಿಗೆ ಅಲ್ಲಿನ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರ ಬಗ್ಗೆ ಪ್ರಶ್ನೆ ಎದ್ದಿದೆ. ಸುಮಲತಾ ಅವರನ್ನು ಏನು ಮಾಡುವುದು? ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಏನು ಮಾಡಬೇಕು ಎಂಬ ಪ್ರಶ್ನೆಯನ್ನು ವರಿಷ್ಠರ ಮುಂದೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಮಿತ್‌ ಶಾ, ಸುಮಲತಾ ಅಂಬರೀಶ್‌ ಅವರ ವಿಚಾರವನ್ನು ಹೈಕಮಾಂಡ್‌ಗೆ ಬಿಡಿ ಎಂದು ಹೇಳಿದ್ದಾರೆನ್ನಲಾಗಿದೆ. ಹೀಗಾಗಿ ಸುಮಲತಾ ಅವರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಕ್ಕೆ ಅವರಿಗೆ ಯಾವ ರೀತಿಯಲ್ಲಿ ಸ್ಥಾನಮಾನವನ್ನು ಕಲ್ಪಿಸಲಾಗುತ್ತದೆ? ಇಲ್ಲವೇ ಅವರಿಗೆ ಬೇರೆ ಯಾವುದಾದರೂ ಕ್ಷೇತ್ರದಲ್ಲಿ ಟಿಕೆಟ್‌ ಕೊಡಲಾಗುತ್ತದೆಯೇ? ಅಥವಾ ಇನ್ಯಾವುದೋ ಭರವಸೆಯನ್ನು ನೀಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.

ಕಾಂಗ್ರೆಸ್‌ಗೆ ಭರ್ಜರಿ ಲಾಭವಾಗುತ್ತಾ?  ಬಿಜೆಪಿ ಈಗ ನೇರವಾಗಿ ಜೆಡಿಎಸ್ ಪಕ್ಷಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟರೂ ಗೆಲುವು ಸಾಧಿಸಲು ಜೆಡಿಎಸ್ ಪರದಾಡಬೇಕಿದೆ. ಹೀಗಾಗಿ ಕಾಂಗ್ರೆಸ್ ಕೂಡ ಮಂಡ್ಯದಲ್ಲಿನ ತನ್ನ ಅಸ್ತಿತ್ವ ಮತ್ತು ಹಿಡಿತವನ್ನ ಇನ್ನಷ್ಟು ಬಲಪಡಿಸುತ್ತಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಸುಮಲತಾ ಅವರ ಪಕ್ಷೇತರ ಸ್ಪರ್ಧೆಯ ಲಾಭ ಕಾಂಗ್ರೆಸ್‌ಗೆ ಆಗಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್ ಪರವಾಗಿ ಘಟಾನುಘಟಿ ಟಿಕೆಟ್ ಆಕಾಂಕ್ಷಿಗಳು, ಚುನಾವಣೆಗೆ ಸ್ಪರ್ಧೆ ಮಾಡಲು ಟಿಕೆಟ್ ಬೇಕು ಅಂತಿದ್ದಾರೆ. ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ನ ಅಭ್ಯರ್ಥಿಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ.

ಈ ಮೂಲಕ ಮಂಡ್ಯ ಲೋಕಸಭೆ ಕ್ಷೇತ್ರ ಮತ್ತೊಮ್ಮೆ ರಂಗೇರಿದೆ. ಕಳೆದ ಬಾರಿ ಎಲೆಕ್ಷನ್‌ಗೆ ಜೆಡಿಎಸ್ & ಕಾಂಗ್ರೆಸ್ ಮೈತ್ರಿ ಇತ್ತು, ಆದ್ರೆ ಈ ಬಾರಿ ಕಾಂಗ್ರೆಸ್ ದೂರವಾಗಿದೆ. ಹೀಗಿದ್ದಾಗ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಇದೆ. ಹೀಗಾಗಿ ಗೆಲುವು ಪಡೆಯಲು ಭರ್ಜರಿ ಫೈಟ್ ಗ್ಯಾರಂಟಿ ಎನ್ನಲಾಗುತ್ತಿದೆ.

ಈಗಿನ ಪರಿಸ್ಥಿತಿ ನೋಡುತ್ತಿದ್ದರೆ, 2019ರ ಹೋರಾಟ ಮರುಕಳಿಸುವ ಲಕ್ಷಣ ಕಾಣುತ್ತಿದ್ದು. 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ & ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದವು. 2019 ರಲ್ಲಿ ಮಂಡ್ಯ ಕ್ಷೇತ್ರದಿಂದ, ಮಾಜಿ ಸಿಎಂ ಕುಮಾರಸ್ವಾಮಿರ ಪುತ್ರ ನಿಖಿಲ್ ಜೆಡಿಎಸ್ & ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಆಗಿದ್ದರು. ಬಿಜೆಪಿ ಆಗ ಅಭ್ಯರ್ಥಿ ಹಾಕಿರಲಿಲ್ಲ. ಆದರೆ ಈ ಬಾರಿ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಇದೀಗ ಜೆಡಿಎಸ್ ಪಾಲಿಗೆ ಬಿಟ್ಟುಕೊಡತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತರೆ, ಇದಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ಈ ಪರಿಸ್ಥಿತಿಯ ಲಾಭವನ್ನ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಗೊಂದಲಕ್ಕೆ ಕಾರಣವಾಗಿರುವ ಸುಮಲತಾ ಹೇಳಿಕೆ “ರಾಜ್ಯಸಭೆಗೆ ಹೋಗಲ್ಲ, ಮಂಡ್ಯವನ್ನೂ ಬಿಡಲ್ಲ” ಎಂದು ಈ ಹಿಂದೆ ಶ್ರೀರಂಗಪಟ್ಟಣದ ಕಾರ್ಯಕ್ರಮವೊಂದರಲ್ಲಿ ಸಂಸದೆ ಸುಮಲತಾ ಅಂಬರೀಶ್‌ ಖಡಕ್‌ ಆಗಿ ಹೇಳಿದ್ದರು. ನನ್ನ ಚುನಾವಣಾ ತಯಾರಿಯ ಭಾಗವಾಗಿ ಈ ಸಭೆ ನಡೆದಿದೆ. ನಾನು ರಾಜಕೀಯಕ್ಕೆ ಬಂದಿರೋದು ಮಂಡ್ಯ ಜನತೆಯ ವಿಶ್ವಾಸ ಕಳೆದುಕೊಳ್ಳಲು ಅಲ್ಲ. ನಾನು ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಮಾಡಬೇಕು ಅಂದರೆ ನನಗೆ ತುಂಬ ಯೋಚನೆ ಮಾಡಬೇಕಾಗಿಲ್ಲ. ನಿರ್ಧಾರ ಮಾಡಲು ಒಂದು ಕ್ಷಣ ಸಾಕು. ಆದರೆ, ಮಂಡ್ಯ ಬಿಟ್ಟು ಬರಲು ನನಗೆ ಇಷ್ಟ ಇಲ್ಲ.ʼʼ ಎಂದು ಖಡಕ್ಕಾಗಿ ಹೇಳಿದ್ದರು. ಜತೆಗ ರಾಜ್ಯಸಭೆಗೆ ಹೋಗುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಮಂಡ್ಯ ಟಿಕೆಟ್‌ ಕೈತಪ್ಪಿದರೆ ಸುಮಲತಾ ನಿರ್ಧಾರ ಏನೆಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist