ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ; ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ!

Twitter
Facebook
LinkedIn
WhatsApp
ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ; ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ!

ಬೆಂಗಳೂರು, ನ.17: ದೀಪಾವಳಿ ಪ್ರಯುಕ್ತ ತಮ್ಮ ನಿವಾಸ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಪಾವತಿಸಿದ್ದಾರೆ.

ದಂಡದ ಮೊತ್ತವನ್ನು ಕುಮಾರಸ್ವಾಮಿ ಅವರು ಆನ್​ಲೈನ್ ಮೂಲಕ ಪಾವತಿಸಿದ್ದು, ಬೆಸ್ಕಾಂಗೆ ದಂಡ ಕಟ್ಟಿರುವ ರಸೀದಿ ಟಿವಿ9ಗೆ ಲಭ್ಯವಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಬೆಸ್ಕಾಂ 2.5 ಕಿಲೋ ವ್ಯಾಟ್​​​ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಬೆಸ್ಕಾಂ ಪ್ರಕಾರ, 2,526 ರೂ. ಬಿಲ್ ಬರಬೇಕಿತ್ತು. ಆದರೆ, 68,526 ರೂ. ಕರೆಂಟ್​ ಬಿಲ್ ನೀಡಿದೆ.  ಹೀಗಾಗಿ ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದಾಗಿ ತಿಳಿಸಿದರು.

ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪವನ್ನು ಕಾಂಗ್ರೆಸ್​ ಮಾಡಿತ್ತು. ಇದರ ಬೆನ್ನಲ್ಲೇ, ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ ಎಫ್​ಐಆರ್ ದಾಖಲಿಸಿದ್ದರು. ಬಳಿಕ ದಂಡ ವಿಧಿಸಿದ್ದರು.

ಬೆಸ್ಕಾಂ ಜಾಗೃತಾ ದಳದ ಡಿವೈಎಸ್​ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ಅಧಿಕಾರಿಗಳು ವರದಿ ನೀಡಿದ್ದರು. ಇದರ ಅನ್ವಯ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡವನ್ನು ವಿಧಿಸಿ ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿತ್ತು.

ವಿದ್ಯುತ್ ಕಳ್ಳಾಟ, ದಂಡ ಪಾವತಿಸದ ಬೆನ್ನಲ್ಲೇ ಲುಲು ಮಾಲ್​ ಕರೆಂಟ್​ ಬಗ್ಗೆ ಧ್ವನಿ ಎತ್ತಿದ ಕುಮಾರಸ್ವಾಮಿ

ಬೆಂಗಳೂರು ನ.17: ದೀಪವಾಳಿ ಹಬ್ಬದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮನೆಯನ್ನು ವಿದ್ಯುತ್​ ದೀಪಗಳಿಂದ ಶೃಂಗರಿಸಲಾಗಿತ್ತು. ಈ ವಿದ್ಯುತ್​ ದೀಪಗಳಿಗೆ ಅನಧಿಕೃತವಾಗಿ ಕರೆಂಟ್​ (Current) ಕಂಬದಿಂದ ಸಂಪರ್ಕ ಪಡೆಯಲಾಗಿತ್ತು. ಇದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿ ದಂಡ ಪಾವತಿಸಿದ್ದರು. ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದಿದ್ದಕ್ಕೆ ಕಾಂಗ್ರೆಸ್ (Congress)​ ಕಾರ್ಯಕರ್ತರು ಜೆಡಿಎಸ್​ ಕಚೇರಿ ಕಂಪೌಂಡ್​ಗಳಿಗೆ “ಕರೆಂಟ್​ ಕಳ್ಳ” ಎಂಬ ಪೋಸ್ಟರ್​ ಅಂಟಿಸಿದ್ದರು. ಇದರಿಂದ ಆಕ್ರೋಶಗೊಂಡ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಪಾಲುದಾರಿಕೆಯ ಲುಲು ಮಾಲ್​ನ (Lulu Mall) ಆಸ್ತಿ ಮತ್ತು ಬಳಕೆ ಮಾಡಿರುವ ವಿದ್ಯುತ್​ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಲುಲು ಮಾಲ್​ಗೆ 24 ಎಕರೆ ಖರಾಬು ಭೂಮಿಯನ್ನ ಕಬಳಿಸಲಾಗಿದೆ. 1934ರ ಭೂಮಿಯ ದಾಖಲೆಗಳನ್ನು ಸುಟ್ಟು ಹಾಕಿ ನಾಶ ಮಾಡಿದ್ದಾರೆ. ಇವರೆಲ್ಲ ಹೇಗೆಲ್ಲಾ ದಾಖಲೆ ಬದಲಾಯಿಸಿದ್ದಾರೆಂದು ಗೊತ್ತಿದೆ. ಭೂದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ ಭೂಮಿ ಕಬಳಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಆರೋಪ ಮಾಡಿದರು.

ಲುಲು ಮಾಲ್​​​ ಕಾಮಗಾರಿ ವೇಳೆ, ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ಬಿಲ್​ ನೀಡಿಲ್ಲ. ಆಗ ಲುಲು ಮಾಲ್​ಗೆ ಬಳಕೆ ಮಾಡಿದ್ದ ವಿದ್ಯುತ್​ಗೆ​​​​​ ದಂಡ ಹಾಕುತ್ತೀರಾ?  ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್​ನಲ್ಲಿ ತೆಗೆದುಕೊಂಡು ಮಾಲ್​ಗೆ ಹೋಗಿದ್ದಾರೆ. ಅದಕ್ಕೆ ಎಷ್ಟು ಹಣ ಕಟ್ಟಿದ್ದೀರಾ? ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್​ನಲ್ಲಿ ತಗೊಂಡು ಹೋದರಿ? ಜನರಿಗಾಗಿ ಮಾಡಿದ್ರಾ? ನಕಲಿ ಸೊಸೈಟಿಯನ್ನ ಅಸಲಿ ಮಾಡಿಕೊಳ್ಳೋರು‌ ಇವರು ಎಂದು ಆರೋಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist